ಇದು ಪ್ರಜಾಪ್ರಭುತ್ವದ ಕಗ್ಗೊಲೆ: ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ
ಹೋರಾಟದ ಹಕ್ಕು ಕಿತ್ತುಕೊಳ್ಳುವ ಕೆಲಸ ಆಗುತ್ತಿದೆ. ಇದಕ್ಕೆ ತಕ್ಕ ಉತ್ತರ ಜನ ಮುಂದಿನ ದಿನಗಳಲ್ಲಿ ಕೊಡುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು: ರೈತರು ರಾಜಧಾನಿಗೆ ಬರದಂತೆ ಪೊಲೀಸರು ತಡೆಯುತ್ತಿದ್ದಾರೆ. ರಾಜ್ಯ ಸರ್ಕಾರ ಸರ್ವಾಧಿಕಾರಿ ಧೋರಣೆಯನ್ನು ತಾಳುತ್ತಿದೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರೈತರು ರಾಜಧಾನಿಗೆ ಬರದಂತೆ ಪೊಲೀಸರು ತಡೆಯುತ್ತಿರುವುದು ಪ್ರಜಾತಂತ್ರದ ಕಗ್ಗೊಲೆ ಎಂದು ಹೇಳಿದ ಸಿದ್ದರಾಮಯ್ಯ ಸಂವಿಧಾನ ಪ್ರಜಾಪ್ರಭುತ್ವಕ್ಕೆ ಮಾತ್ರ ಅವಕಾಶ ಕೊಟ್ಟಿದೆಯೇ ಹೊರತು ಸರ್ವಾಧಿಕಾರಕ್ಕಲ್ಲ. ರೈತರು ನಮ್ಮ ದೇಶದ ಬೆನ್ನೆಲುಬು. ಆದರೆ ಹೋರಾಟದ ಹಕ್ಕು ಕಿತ್ತುಕೊಳ್ಳುವ ಕೆಲಸ ಆಗುತ್ತಿದೆ. ಇದಕ್ಕೆ ತಕ್ಕ ಉತ್ತರ ಜನರು ಮುಂದಿನ ದಿನಗಳಲ್ಲಿ ಕೊಡುತ್ತಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಗಣತಂತ್ರ ದಿನವೇ ಹಸಿರು ಕ್ರಾಂತಿ.. 10 ಸಾವಿರಕ್ಕೂ ಅಧಿಕ ವಾಹನಗಳಿಂದ ರ್ಯಾಲಿ