ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿದ ಸಿದ್ದರಾಮಯ್ಯ, ಎಷ್ಟು ಗೊತ್ತಾ?

| Updated By: Rakesh Nayak Manchi

Updated on: Jan 21, 2024 | 5:48 PM

ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರವು ಬೆಂಬಲ ಬೆಲೆ ಹೆಚ್ಚಳ ಮಾಡಿ ಆದೇಶಿಸಿತ್ತು. ಆದರೆ ಇದುವರೆಗೆ ಯಾವುದೇ ಘೋಷಣೆ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ಬೆಂಬಲ ಬೆಲೆ ನೀಡುವುದಾಗಿ ತುಮಕೂರಿನಲ್ಲಿ ಘೋಷಣೆ ಮಾಡಿದ್ದಾರೆ. ಪ್ರತಿ ಕ್ವಿಂಟಾಲ್‌ ಕೊಬ್ಬರಿಗೆ 1500 ರೂಪಾಯಿ ಬೆಂಬಲ ಬೆಲೆ ನೀಡುವುದಾಗಿ ಹೇಳಿದ್ದಾರೆ.

ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿದ ಸಿದ್ದರಾಮಯ್ಯ, ಎಷ್ಟು ಗೊತ್ತಾ?
ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Follow us on

ತುಮಕೂರು, ಜ.21: ಬೆಲೆ ಇಳಿಕೆಯಿಂದ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ಡಿಸೆಂಬರ್ ತಿಂಗಳಾಂತ್ಯದಲ್ಲಿ ಕೊಬ್ಬರಿಗೆ (Copra/Coconut) ಬೆಂಬಲ ಬೆಲೆ ಹೆಚ್ಚಿಸಿ ಆದೇಶಿಸಿತ್ತು. ಆದರೆ, ಇದುವರೆಗೆ ಯಾವುದೇ ಘೋಷಣೆ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೊನೆಗೂ ಕೊಬ್ಬರಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ.

ತುಮಕೂರಿ​ನ ಸಿದ್ದಗಂಗಾ ಮಠದ ಬಳಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಹೆಚ್ಚುವರಿಯಾಗಿ 1,500 ರೂಪಾಯಿ ನೀಡುವುದಾಗಿ ಹೇಳಿದ್ದಾರೆ. ಕುಣಿಗಲ್‌ನಲ್ಲಿ ಸ್ಟಡ್ ಫಾರಂನ ಟೌನ್‌ಶಿಪ್‌ ಮಾಡುವ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ ಮಾಡಲು ಸಲಹೆ ನೀಡಿದ್ದೇನೆ ಎಂದರು.

ಇದನ್ನೂ ಓದಿ: ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ: ನಿಲುವು ಪ್ರಕಟಿಸಿದ ಸಿದ್ದರಾಮಯ್ಯ

ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು 300 ರೂಪಾಯಿ ಹೆಚ್ಚಿಸಿ ಡಿಸೆಂಬರ್ ತಿಂಗಳಾಂತ್ಯದಲ್ಲಿ ಆದೇಶಿಸಿತ್ತು. ಅಲ್ಲದೆ, ಉಂಡೆ ಕೊಬ್ಬರಿಗೆ 250 ರೂ. ಹೆಚ್ಚಿಸಿತ್ತು. ಆ ಮೂಲಕ ಬೆಲೆ ಇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ತೆಂಗು ಬೆಳೆಗಾರರಿಗೆ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿತ್ತು.

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಆ ವೇಳೆ ಕೊಬ್ಬರಿಗೆ ಬೆಂಬಲ ಬೆಲ ಘೋಷಿಸುವಂತೆ ಮನವಿ ಮಾಡಿದ್ದರು. ಬಳಿಕ ಕೇಂದ್ರ ಬೆಂಬಲ ಘೋಷಣೆ ಮಾಡಿತ್ತು. ಇದರ ಕ್ರೆಡಿಟ್​ ನಮ್ಮದೇ ಎಂದು ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:47 pm, Sun, 21 January 24