AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಸಿಗಳಿಂದ ಮಾಹಿತಿ ಸಂಗ್ರಹಿಸಲು ಅಡ್ಡಿ ಹಿನ್ನೆಲೆ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ನಿರ್ಧಾರ: ವಿಪಕ್ಷ ನಾಯಕ ಸಿದ್ದರಾಮಯ್ಯ

ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಕೊಡಿ ಎಂದು ಈ ವರೆಗೆ 12 ಪತ್ರಗಳನ್ನು ಬರೆದಿದ್ದೇನೆ. ಅದಕ್ಕೂ ಉತ್ತರ ಬಂದಿಲ್ಲ. ಉತ್ತರಿಸುವ ಸೌಜನ್ಯವೂ ಮುಖ್ಯಮಂತ್ರಿಯವರಿಗೆ ಇಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರ ಜನತೆಗೆ ದ್ರೋಹವೆಸಗುತ್ತಿದೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಡಿಸಿಗಳಿಂದ ಮಾಹಿತಿ ಸಂಗ್ರಹಿಸಲು ಅಡ್ಡಿ ಹಿನ್ನೆಲೆ ಹಕ್ಕುಚ್ಯುತಿ ನಿರ್ಣಯ ಮಂಡಿಸಲು ನಿರ್ಧಾರ: ವಿಪಕ್ಷ ನಾಯಕ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
preethi shettigar
|

Updated on:May 21, 2021 | 2:26 PM

Share

ಬೆಂಗಳೂರು : ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಪುಣ್ಯ ಸ್ಮರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ರಾಜೀವ್ ಗಾಂಧಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ. ಬಳಿಕ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ್ದು, ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಮತ್ತು ಸೋಂಕಿತರ ಪ್ರಾಣರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿರುವ ಸರ್ಕಾರದ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸುವುದಾಗಿ ತಿಳಿಸಿದ್ದಾರೆ.

ಕೊರೊನಾದಿಂದಾಗಿ ರಾಜ್ಯ ಸೂತಕದ ಮನೆಯಾಗಿದೆ. ಆಕ್ಸಿಜನ್, ಬೆಡ್, ವೆಂಟಿಲೇಟರ್ ಸಿಗದೆ ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಆಯಾ ಜಿಲ್ಲೆಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆಯಲು ಉದ್ದೇಶಿಸಿದ್ದೆ. ಇದು ಜಿಲ್ಲಾಧಿಕಾರಿಗಳ ಸಭೆ ಅಥವಾ ಪ್ರಗತಿ ಪರಿಶೀಲನೆ ಸಭೆ ಅಲ್ಲ. ಆದರೂ ಮಾಹಿತಿ ಸಂಗ್ರಹಕ್ಕೆ ಸರ್ಕಾರ ಅನುಮತಿ ನಿರಾಕರಿಸಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಎಂದರೆ ಅದು ಸಾಂವಿಧಾನಿಕ ಹುದ್ದೆ. ಹೀಗಾಗಿ ಮಾಹಿತಿ ಸಂಗ್ರಹಿಸಲು ಅನುಮತಿ ನಿರಾಕರಿಸಿರುವುದರಿಂದ ಹಕ್ಕುಚ್ಯುತಿ ಆಗಿದೆ. ವಿಧಾನ ಮಂಡಲದ ಮುಂಬರುವ ಅಧಿವೇಶನದಲ್ಲಿ ಹಕ್ಕುಚ್ಯುತಿ ಮಂಡಿಸಲು ಉದ್ದೇಶಿಸಿದ್ದೇನೆ. 2009ರಲ್ಲಿಯೂ ಸರ್ಕಾರ ಇದೇ ನಿಲುವು ಅನುಸರಿಸಿತ್ತು. ಸರ್ಕಾರದ ಹುಳುಕು ಹೊರ ಬರುತ್ತದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ಅನುಮತಿ ನಿರಾಕರಿಸಿದ್ದಾರೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಕೊರೊನಾ ನಿಯಂತ್ರಣ ಮತ್ತು ಸೋಂಕಿತರ ಪ್ರಾಣ ರಕ್ಷಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರುಪಯುಕ್ತ ಎಂಬುದು ಸಾಬೀತಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಜನತೆ ಸರ್ಕಾರಕ್ಕೆ ಹಾಗೂ ಸಿಎಂ ಅವರಿಗೆ ಶಾಪ ಹಾಕುತ್ತಿರುವುದೇ ಇದಕ್ಕೆ ಸಾಕ್ಷಿ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಕೊಡಿ ಎಂದು ಈ ವರೆಗೆ 12 ಪತ್ರಗಳನ್ನು ಬರೆದಿದ್ದೇನೆ. ಅದಕ್ಕೂ ಉತ್ತರ ಬಂದಿಲ್ಲ. ಉತ್ತರಿಸುವ ಸೌಜನ್ಯವೂ ಮುಖ್ಯಮಂತ್ರಿಯವರಿಗೆ ಇಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರ ಜನತೆಗೆ ದ್ರೋಹವೆಸಗುತ್ತಿದೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರೂ ಪ್ರತಿಪಕ್ಷಗಳ ಯಾವುದೇ ಪತ್ರಕ್ಕೂ ಉತ್ತರ ನೀಡುವುದಿಲ್ಲ. ಅದೇ ನಿಲುವನ್ನೂ ಯಡಿಯೂರಪ್ಪ ಅವರೂ ಅನುಸರಿಸುತ್ತಿದ್ದಾರೆ. ಯಥಾ ರಾಜ ತಥಾ ಪ್ರಜಾ ಎನ್ನುವಂತೆ ಆಗಿದೆ. ಈ ಸರ್ಕಾರದ ವೈಫಲ್ಯದಿಂದ ಸಾವಿರಾರು ಜನ ಸಾಯುತ್ತಿದ್ದಾರೆ. ಸತ್ಯ ಹೇಳಿದರೆ ಕೇಸು ದಾಖಲಿಸುವ, ಬಂಧಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆ ನಮ್ಮ ಪಕ್ಷದ ಕಾರ್ಯಕರ್ತರು ಹೆದರಬಾರದು ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಂತರ ಪ್ರವಾಹ ಪರಿಹಾರದ ವಿಚಾರವಾಗಿ ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರವಾಹ ಪರಿಹಾರದ ವಿಚಾರದಲ್ಲಿಯೂ ಕೇಂದ್ರ ತಾರತಮ್ಯ ಧೊರಣೆ ಅನುಸರಿಸುತ್ತಿದೆ. ಗುಜರಾತ್​ಗೆ ಒಂದು ಸಾವಿರ ಕೋಟಿ ರೂ.ಗಳ ಪರಿಹಾರ ಘೋಷಣೆ ಮಾಡಿರುವ ಪ್ರಧಾನಿಯವರು ಚಂಡಮಾರುತದಿಂದ ತತ್ತರಿಸಿರುವ ಕರ್ನಾಟಕಕ್ಕೆ ನಯಾಪೈಸೆ ಕೊಟ್ಟಿಲ್ಲ. ಚಂಡಮಾರುತದಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಹಾನಿ ಸಂಭವಿಸಿದೆ. ಆದರೂ ಪರಿಹಾರ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಲಸಿಕೆಗೆ ವಿರೋಧ ಮಾಡಿರಲಿಲ್ಲ ಕೋವಿಡ್ ಲಸಿಕೆ ನೀಡುವುದಕ್ಕೆ ನಾವು ವಿರೋಧ ಮಾಡಿರಲಿಲ್ಲ. ಎಲ್ಲರಿಗೂ ಲಸಿಕೆ ಸಿಗಬೇಕು. ಅದಕ್ಕಾಗಿ ಅಭಿಯಾನ ನಡೆಸಬೇಕು ಎಂದು ಈಗಲೂ ಒತ್ತಾಯ ಮಾಡುತ್ತೇವೆ. ಲಸಿಕೆಯೇ ಇಲ್ಲದೆ ಆಂದೋಲನಕ್ಕೆ ಚಾಲನೆ ನೀಡಿದವರು ಯಾರು ? ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಜನಪರ ಶ್ರೇಷ್ಠ ರಾಜಕಾರಣಿ ರಾಜೀವ್ ಗಾಂಧಿ ಬಲಿಕ ಮಾತನಾಡಿದ ಸಿದ್ದರಾಮಯ್ಯ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರು ಈ ದೇಶ ಕಂಡ ಜನಪರ ಹಾಗೂ ಶ್ರೇಷ್ಠ ರಾಜಕಾರಣಿ ಎಂದು ಅವರನ್ನು ಬಣ್ಣಿಸಿದ್ದಾರೆ. ಅಷ್ಟೇ ಅಲ್ಲದೆ ದಲಿತರು, ಮಹಿಳೆಯರು ಹಾಗೂ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ಕೊಡಿಸಿದವರು ರಾಜೀವ್ ಗಾಂಧಿ. ಅವರಿಂದಾಗಿಯೇ ಇಂದು ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲು ಸೌಲಭ್ಯ ಸಿಕ್ಕಿದೆ. ಮಹಿಳಾ ಮೀಸಲು ವಿಧೇಯಕ ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ. ಲೋಕಸಭೆಯಲ್ಲಿಯೂ ಅಂಗೀಕಾರಕ್ಕೆ ಬಿಜೆಪಿ ಮುಂದಾಗಬೇಕು ಎಂದು ಒತ್ತಾಯಿಸಿದರು.

ದೂರವಾಣಿ ಮೂಲಕ ಇಂದು ಜಗತ್ತಿನ ಯಾವುದೇ ಮೂಲೆಯನ್ನು ಸಂಪರ್ಕಿಸಬಹುದು. ಇದಕ್ಕೆ ದೂರಸಂಪರ್ಕ ಕ್ಷೇತ್ರದಲ್ಲಿ ಆಗಿರುವ ಕ್ರಾಂತಿ ಕಾರಣ. ರಾಜೀವ್‍ ಗಾಂಧಿಯವರ ಪ್ರಯತ್ನದ ಫಲವಾಗಿ ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ದೇಶ ಮಹಾನ್ ಸಾಧನೆ ಮಾಡಿದೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:

ಕಳೆದ ಬಾರಿ ಘೋಷಿಸಿದ ಪ್ಯಾಕೇಜ್ ಹಣವೇ ಕೊಟ್ಟಿಲ್ಲ, ಈ ಬಾರಿ ಹಣ ಕೊಡುತ್ತಾರೆಂಬ ನಂಬಿಕೆ ಇಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ

Published On - 2:25 pm, Fri, 21 May 21

ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವ್ಯಾಪಾರ ಅಧಿಕವಾಗಲು ಏನು ಮಾಡಬೇಕು? ವಿಡಿಯೋ ನೋಡಿ
ವ್ಯಾಪಾರ ಅಧಿಕವಾಗಲು ಏನು ಮಾಡಬೇಕು? ವಿಡಿಯೋ ನೋಡಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ