ನಾನು ಎಲ್ಲಿಗೂ ಓಡಿ ಹೋಗಲ್ಲ, ಮುಂದಿನ ಚುನಾವಣೆಗೂ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ: ಸಿದ್ದರಾಮಯ್ಯ ಘೋಷಣೆ

ನಾನು ಎಲ್ಲಿಗೂ ಓಡಿಹೋಗುವುದಿಲ್ಲ. ಮುಂದಿನ ಬಾರಿಯೂ ಬಾದಾಮಿ ಕ್ಷೇತ್ರದಲ್ಲಿಯೇ ನಿಲ್ಲುತ್ತೇನೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾನು ಬಾದಾಮಿಯಿಂದ ಹಿಂದೆ ಸರಿಯುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

ನಾನು ಎಲ್ಲಿಗೂ ಓಡಿ ಹೋಗಲ್ಲ, ಮುಂದಿನ ಚುನಾವಣೆಗೂ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ: ಸಿದ್ದರಾಮಯ್ಯ ಘೋಷಣೆ
ಸಿದ್ದರಾಮಯ್ಯ
Follow us
Skanda
|

Updated on:Mar 15, 2021 | 5:08 PM

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದ ಸಿದ್ದರಾಮಯ್ಯ, ಮುಂದಿನ ಚುನಾವಣೆಗೂ ಬಾದಾಮಿ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ವಿಧಾನಸಭೆಯಲ್ಲೇ ಈ ಬಗ್ಗೆ ಘೋಷಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಾನು ಎಲ್ಲಿಗೂ ಓಡಿಹೋಗುವುದಿಲ್ಲ. ಮುಂದಿನ ಬಾರಿಯೂ ಬಾದಾಮಿ ಕ್ಷೇತ್ರದಲ್ಲಿಯೇ ನಿಲ್ಲುತ್ತೇನೆ ಎಂದು ಹೇಳುವ ಮೂಲಕ ತಾನು ಬಾದಾಮಿಯಿಂದ ಹಿಂದೆ ಸರಿಯುವುದಿಲ್ಲ ಎಂಬ ಸಂದೇಶ ರವಾನಿಸಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್ ಮೇಲೆ ಚರ್ಚೆ ನಡೆಸುತ್ತಿದ್ದ ವೇಳೆ ಉಪಚುನಾವಣೆ ಗೆಲುವಿನ ಬಗ್ಗೆ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಪ್ರಸ್ತಾಪ ಮಾಡಿದ್ದಾರೆ. ಉಪಚುನಾವಣೆಗಳಲ್ಲಿ ನಾವು ಗೆಲುವು ಸಾಧಿಸಿದ್ದೇವೆ. ಈಗ 2021-22ನೇ ಸಾಲಿನ ಬಜೆಟ್ ಮಂಡಿಸಿದ್ದೇವೆ. ಈ ಬಜೆಟ್ ಮೇಲೆಯೇ ನಾವು ಚುನಾವಣೆಗೆ ಹೋಗ್ತೇವೆ. ನೀವು ಚುನಾವಣೆಗೆ ಬನ್ನಿ, ನಾವೂ ಬರ್ತೇವೆ. ಅಂತಿಮವಾಗಿ ಅಲ್ಲಿ ಗೆದ್ದು ಮತ್ತೆ ಚರ್ಚಿಸೋಣ ಎಂದು ಸಿದ್ದರಾಮಯ್ಯ ಅವರನ್ನು ಕೆಣಕಿದರು. ಇದರಿಂದ ಸಿಟ್ಟಿಗೆದ್ದ ಸಿದ್ದರಾಮಯ್ಯ, ಈಗ ಉಪಚುನಾವಣೆ ಮಾತು ಬಿಡಿ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದೀರಿ. ಈಗ ಆಪರೇಷನ್ ಬರ್ಬಾದ್ ಮಾಡ್ತಿದ್ದೀರಿ. ವಿಧಾನಸಭೆ ವಿಸರ್ಜನೆ ಮಾಡಿ ಜನರ ಮುಂದೆ ಚುನಾವಣೆಗೆ ಹೋಗೋಣ ಆಮೇಲೆ ಯಾರೋ ಗೆಲ್ತಾರೋ ನೋಡೋಣ ಎಂದು ಸವಾಲೆಸೆದಿದ್ದಾರೆ.

ಈ ವೇಳೆ ನೀವು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಗೊಂದಲ‌ ಮೂಡಿದೆ. ಚುನಾವಣೆಗೆ ನಿಲ್ಲುತ್ತೀರಾ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸಿ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಳಿದಾಗ, ಚುನಾವಣೆಗೆ ನಿಲ್ಲುತ್ತೇನೆ ಎಂದು ಹೇಳಿದ ಸಿದ್ದರಾಮಯ್ಯ ಬಾದಾಮಿಯಿಂದಲೇ ನಿಲ್ಲುವುದಾಗಿ ಹೇಳಿದ್ದಾರೆ. ಇತ್ತ ಆಪರೇಷನ್​ ಕಮಲ ವಿಚಾರದ ಬಗ್ಗೆ ಮೌನಮುರಿದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಆಪರೇಷನ್‌ಗೆ ನೀವೇ ಶಾಸಕರನ್ನು ಕಳಿಸಿದ್ದು ಎಂದು ಅವರೆಡೆಗೇ ಬಾಣವನ್ನು ತಿರುಗಿಸಿ ಬಿಡುವ ಪ್ರಯತ್ನ ಮಾಡಿದರು. ಅದಕ್ಕೆ ಪ್ರತಿ ಉತ್ತರ ನೀಡಿದ ಸಿದ್ದರಾಮಯ್ಯ, ನಾನು ಶಾಸಕರನ್ನು ಕಳಿಸಿದ್ನಾ? ಹಾಗಾದ್ರೆ ಅವರನ್ನ ವಾಪಸ್ ಕಳಿಸಿ. ವಿಧಾನಸಭೆ ವಿಸರ್ಜನೆ ಮಾಡಿ, ಚುನಾವಣೆಗೆ ಹೋಗೋಣ. ಜನರು ಯಾರಿಗೆ ಆಶೀರ್ವಾದ ಮಾಡ್ತಾರೋ ನೋಡೋಣ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ಚುನಾವಣೆ ಎದುರಿಸಲು ನಾವು ಸಿದ್ಧರಾಗಿದ್ದೇವೆ ಎಂದರೆ, ಬಿಜೆಪಿ, ಕಾಂಗ್ರೆಸ್ ಒಪ್ಪಿದರೆ ನಾವು ಸಹ ಸಿದ್ಧ ಎಂದು ಜೆಡಿಎಸ್​ ಪರವಾಗಿ ರೇವಣ್ಣ ಧ್ವನಿ ಎತ್ತಿದರು. ವಿಧಾನಸಭೆ ವಿಸರ್ಜನೆ ಆದರೆ ನಾವೇನು ಹಿಂದೆ ಬೀಳಲ್ಲ. ನಾವು ಕೂಡ ಚುನಾವಣೆ ಎದುರಿಸಲು ಸಿದ್ಧ ಎಂದು ಸಿದ್ದರಾಮಯ್ಯ ಅವರೂ ಸವಾಲೆಸೆದರು.

ಸದನದಲ್ಲಿ ಸವಾಲು-ಪ್ರತಿಸವಾಲುಗಳ ಭರಾಟೆ ಈ ಹಿಂದೆ ನಾನೇ ಮುಖ್ಯಮಂತ್ರಿ ಅಂತಿದ್ರಿ. ಆದರೆ ಅಂತಿಮವಾಗಿ ಜನರು ನಿಮ್ಮನ್ನು ಸೋಲಿಸಿದ್ರು ಎಂದು ಈಶ್ವರಪ್ಪ ಕಾಲೆಳೆದಾಗ ಅದಕ್ಕೆ ಪ್ರತ್ಯುತ್ತರಿಸಿದ ಕಾಂಗ್ರೆಸ್ ಶಾಸಕ ಕೆ.ಜೆ. ಜಾರ್ಜ್, ನೀವು ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದೀರಾ ಎಂದು ತಿರುಗೇಟು ನೀಡಿದರು. ನಿಮ್ಮ ಶಾಸಕರನ್ಮು ನೀವು ನಿಯಂತ್ರಣದಲ್ಲಿ ಇಟ್ಟುಕೊಳ್ಳೋಕೆ ಆಗಿಲ್ಲ ಎಂದು ಈಶ್ವರಪ್ಪ ಪ್ರತಿವಾದ ಮಾಡಿದಾಗ, ಎಲ್ಲಾ ಕಡೆ ಸಾಂವಿಧಾನಿಕ ಸಂಸ್ಥೆಗಳನ್ನು ಬಳಸಿಕೊಂಡು, ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದಿದ್ದೀರಿ. ಮಧ್ಯಪ್ರದೇಶ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಎಲ್ಲಾದರೂ ಜನರಿಂದ ಗೆದ್ದು ಅಧಿಕಾರಕ್ಕೆ ಬಂದಿದ್ದೀರಾ ಎಂದು ಕೈ ಶಾಸಕ ಪ್ರಿಯಾಂಕ್ ಖರ್ಗೆ ಕಾಲೆಳೆದರು.

ಇನ್ನೊಂದೆಡೆ ಕೈ ಶಾಸಕ ರಮೇಶ್​ ಕುಮಾರ್​ ಸಹ, ನಿಮಗೆ ಇಚ್ಚೆ ಇದ್ರೆ ವಿಧಾನಸಭೆ ಚುನಾವಣೆಗೆ ಬನ್ನಿ. ಇಲ್ಲವೆಂದರೆ ಉಪಚುನಾವಣೆಗೆ ಹೋಗೋಣ ಎಂದು ಆಹ್ವಾನವಿತ್ತರು. ಈ ಚರ್ಚೆ ಮುಗಿಯುವ ವೇಳೆಯಲ್ಲಿ ಸಿದ್ದರಾಮಯ್ಯ ಅವರನ್ನು ಕೆಣಕಿದ ಜೆಡಿಎಸ್ ಶಾಸಕ ಸಾ.ರಾ.‌ಮಹೇಶ್, ಶಾಸಕರನ್ನು ನೀವೇ ಕಳುಹಿಸಿದ್ದು ಅಂತ ಮುಖ್ಯಮಂತ್ರಿಗಳು ಹೇಳ್ತಿದ್ರು, ಅದು ನಿಜನಾ ಇಲ್ವಾ ಎಂದು ಸ್ಪಷ್ಟಪಡಿಸಬೇಕು ಎಂದಾಗ ಕೊಂಚ ಸಿಟ್ಟಾದವರಂತೆ ಉತ್ತರಿಸಿದ ಸಿದ್ದರಾಮಯ್ಯ, ಅಂತಹ ದಾರಿದ್ರ್ಯ ವ್ಯವಸ್ಥೆಗೆ ನಾನಿನ್ನೂ ಹೋಗಿಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಾಗಿದೆ. ಅಲ್ಲಿ ಇಲ್ಲಿ ಮಾತಾಡ್ತಾರೆ ಅಂತಾ ತಾವು ಹೇಳ್ತೀರಿ. ನನ್ನ ರಾಜಕೀಯ ಜೀವನದಲ್ಲಿ ಅಂತಹ ಪಾಪದ ಕೆಲಸ ಮಾಡಲ್ಲ. ನಾನು ನೇರವಾಗಿ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ಇದನ್ನು ಕೊನೆಯ ತನಕ ಮುಂದುವರೆಸಿಕೊಂಡು ಹೋಗ್ತೇನೆ ಎಂದು ತಿರುಗೇಟು ನೀಡಿದರು.

ಏತನ್ಮಧ್ಯೆ, ಮುಂದಿನ ಚುನಾವಣೆಗೆ ನಿಲ್ಲುವ ವಿಚಾರವಾಗಿ ಸಿದ್ದರಾಮಯ್ಯ ಅವರ ಕಾಲೆಳೆದ ಹೆಚ್.ಡಿ.ರೇವಣ್ಣ, ನೀವು ಚುನಾವಣೆಗೆ ಎಲ್ಲಿ ನಿಲ್ಲುತ್ತೇನೆ ಎಂದು ಹೇಳ್ತೀರಿ. ಆದ್ರೆ, ಆಮೇಲೆ ನಮ್ಮ ಪಕ್ಷದ ಕ್ಯಾಂಡಿಡೇಟ್​ಗಳನ್ನೇ ಕರ್ಕೊಂಡು ಹೋಗ್ತೀರಿ. ಸಿಂಧಗಿಯಲ್ಲಿ ಕರ್ಕೊಂಡು ಹೋದ್ರಿ, ಈಗ ಶಿವಮೊಗ್ಗದಲ್ಲಿ ಕರ್ಕೊಂಡು ಹೋದ್ರಿ, ನಮ್ಮ ಕಥೆ ಏನಾಗಬೇಕು. ಜೆಡಿಎಸ್ ಯಾವತ್ತೂ ಡಿಮ್ಯಾಂಡ್ ಇರುವ ಪಕ್ಷವಾಗಿದೆ ಎಂದು ಹೇಳಿದರು. ಅದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರದೇ ಇದ್ದಾಗ ಡಿಮ್ಯಾಂಡ್​ನಲ್ಲಿ ಇರಲೇ ಬೇಕು ಎಂದು ವ್ಯಂಗ್ಯವಾಡಿದರು. ಅದೇ ವೇಳೆ ಮಧ್ಯಪ್ರವೇಶಿಸಿದ ಕೆ.ಎಸ್​.ಈಶ್ವರಪ್ಪ, ರಾಜ್ಯದಲ್ಲಿ ಜೆಡಿಎಸ್ ಡಿಮ್ಯಾಂಡ್ ಇರುವ ಪಕ್ಷ, ದೇಶದಲ್ಲಿ ಕಾಂಗ್ರೆಸ್ ಡಿಮ್ಯಾಂಡ್ ಇರುವ ಪಕ್ಷ ಎಂದು ಕುಟುಕಿದರು.

ಇದನ್ನೂ ಓದಿ: ಇನ್ನು ಮುಂದೆ ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 

ಶಕುನಿ, ಮಂಥರೆ ಮಾತು ಕೇಳಿ ಜೆಡಿಎಸ್​​ ಪಕ್ಷವನ್ನು ಹೆಚ್​.ಡಿ. ಕುಮಾರಸ್ವಾಮಿ ಸರ್ವನಾಶ ಮಾಡುತ್ತಿದ್ದಾರೆ: ಜಿ.ಟಿ. ದೇವೇಗೌಡ ಗುಡುಗು

Published On - 4:23 pm, Mon, 15 March 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ