ಮುಖ್ಯಮಂತ್ರಿ, ಸಚಿವರು, ಶಾಸಕರು ಮತ್ತು ಸಂಸದರ ವಿರುದ್ಧ ಗುಪ್ತ ಕಾರ್ಯಾಚರಣೆ‌ ನಡೆಸಬೇಕು; ಸಿದ್ದರಾಮಯ್ಯ ಟ್ವೀಟ್

ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಎಂದು ಹೇಳುತ್ತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೆ ಏನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ಎಂದು ಟ್ವೀಟ್​ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ, ಸಚಿವರು, ಶಾಸಕರು ಮತ್ತು ಸಂಸದರ ವಿರುದ್ಧ ಗುಪ್ತ ಕಾರ್ಯಾಚರಣೆ‌ ನಡೆಸಬೇಕು; ಸಿದ್ದರಾಮಯ್ಯ ಟ್ವೀಟ್
ಸಿದ್ದರಾಮಯ್ಯ
Follow us
sandhya thejappa
|

Updated on:May 05, 2021 | 2:37 PM

ಬೆಂಗಳೂರು: ಬಿಬಿಎಂಪಿ ಪೋರ್ಟಲ್ ಮೂಲಕ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಕೊವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು ಬಿಬಿಎಂಪಿ ಅಧಿಕಾರಿಗಳ ವಿರುದ್ಧವಲ್ಲ. ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ, ಸಚಿವರು, ಶಾಸಕರು ಮತ್ತು ಸಂಸದರ ವಿರುದ್ಧ ಗುಪ್ತ ಕಾರ್ಯಾಚರಣೆ‌ ನಡೆಸಬೇಕು ಎಂದ ಟ್ವೀಟ್ ಮಾಡಿದ್ದಾರೆ.

ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಎಂದು ಹೇಳುತ್ತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೆ ಏನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ಎಂದು ಟ್ವೀಟ್​ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಶಾಮೀಲಾಗಿರುವವರು ಒಂದೇ ಕೋಮಿನವರೆಂಬಂತೆ ಹೆಸರು ಓದಿದ ಸಂಸದ ತೇಜಸ್ವಿ ಅವರೇ.. ಮುಖ್ಯ ಆರೋಪಿಗಳಾದ ಮುಖ್ಯಮಂತ್ರಿ, ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿ ಬಿಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಜೊತೆಗೆ ಕೇಂದ್ರ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತದೆ ಎಂದರು. ಮತದಾರರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ. ಸ್ಮಶಾನದಲ್ಲಿ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ ಪ್ರಧಾನಿ ಮೋದಿಯವರ ಉತ್ತಮ ದಿನಗಳು? ಎಂದು ಕೇಳಿದ್ದಾರೆ.

ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ, ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪ ಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಯಾಕೆ ಬಳಸಿಕೊಳ್ಳುತ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ಳುತ್ತೀರಿ. ರಾಜ್ಯದ ಕೊರೊನಾ ಸೋಂಕಿತರಿಗೆ ಬೆಡ್, ವೆಂಟಿಲೇಟರ್, ಆಕ್ಸಿಜನ್ ಕೊಡಿ ಎಂದು ಪ್ರಧಾನಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಭಿಕ್ಷುಕರ ರೀತಿ ಬೇಡುತ್ತಿದ್ದಾರೆ. ರಾಜ್ಯದ 25 ಬಿಜೆಪಿ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಮೋದಿ ಎದುರು ಇಲಿಗಳಾಗಿ ಬಿಲ ಸೇರುವುದು ಏಕೆ? ಎಂದು ಟ್ವೀಟ್​ನಲ್ಲಿ ಸಿದ್ದರಾಮಯ್ಯ ಕೇಳಿದ್ದಾರೆ.

ತೇಜಸ್ವಿ ಸೂರ್ಯ ಒಳ್ಳೆಯ ಕೆಲಸ ಮಾಡಿದ್ದಾರೆಂದ ಸಿದ್ದರಾಮಯ್ಯ ಇಂದು (ಮೇ 5) ವಿಧಾನಸೌಧದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಸಂಸದ ತೇಜಸ್ವಿ ಸೂರ್ಯ ಒಳ್ಳೆಯ ಕೆಲಸ ಮಾಡಿದ್ದಾರೆ. ಅವರು ಕೇವಲ ಇಷ್ಟಕ್ಕೇ ಸೀಮಿತರಾಗಿ ಇರಬಾರದು. ಪ್ರಧಾನಿ ಮೋದಿ ಬಳಿ ರಾಜ್ಯದ ಸಂಸದರ ನಿಯೋಗವನ್ನು ಕರೆದೊಯ್ಯಬೇಕು. ಆಕ್ಸಿಜನ್‌ಗಾಗಿ ಪ್ರಧಾನಿ ಮೋದಿಗೆ ಬೇಡಿಕೆ ಇಡಬೇಕು. ಪಕ್ಕದ ಕೇರಳದಲ್ಲಿ ಆಕ್ಸಿಜನ್ ಸ್ಟಾಕ್ ಇಟ್ಟುಕೊಂಡಿದೆ. ಆದರೆ ರಾಜ್ಯದಲ್ಲಿ ಸರಿಯಾಗಿ ಆಕ್ಸಿಜನ್ ಸಪ್ಲೈ ಆಗುತ್ತಿಲ್ಲ ಎಂದಿದ್ದಾರೆ.

ಇದನ್ನೂ ಓದಿ

ಹಾವೇರಿಯಲ್ಲಿ ಶ್ವಾನಕ್ಕೆ ಹುಟ್ಟುಹಬ್ಬದ ಸಂಭ್ರಮ; ಕೆಕ್​ ಕತ್ತರಿಸಿ ಕನಕನಿಗೆ ಶುಭಕೋರಿದ ಪೊಲೀಸರು

Nonuplets | ವೈದ್ಯರ ಅಂದಾಜಿಗೂ ಮೀರಿ.. ಸಾಲಾಗಿ ಒಂಬತ್ತು ಮಕ್ಕಳಿಗೆ ಜನ್ಮ ನೀಡಿದ ಮಾಲಿ ತಾಯಿ!

(Siddaramaiah says secret campaigns should be conducted against Chief Minister, Ministers, MLAs and MPs in twitter)

Published On - 10:47 am, Wed, 5 May 21

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್