ಸುರೇಶ್ ಕುಮಾರ್, ಸುಧಾಕರ್ ಮಧ್ಯೆ ಸಮನ್ವಯತೆ ಇಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ

ಮುಖ್ಯಮಂತ್ರಿ ಸ್ಥಾನದ ಆಸೆ ಇನ್ನೂ ಹೋಗಿಲ್ಲ. ಚಾಮರಾಜನಗರಕ್ಕೆ ಹೋದರೆ ಸಿಎಂ ಸ್ಥಾನ ಹೋಗುವ ಆತಂಕವಿದೆ. ಹೀಗಾಗಿ ಯಡಿಯೂರಪ್ಪ ಚಾಮರಾಜನಗರಕ್ಕೆ ಹೋಗಿಲ್ಲ ಎಂದು ಹೇಳಿಕೆ ನೀಡಿದ ಸಿದ್ದರಾಮಯ್ಯ, ಚಾಮರಾಜನಗರ ದುರಂತದ ತಪ್ಪಿತಸ್ಥರ ವಿರುದ್ಧ ಕ್ರಮವಾಗಿಲ್ಲ ಎಂದರು.

ಸುರೇಶ್ ಕುಮಾರ್, ಸುಧಾಕರ್ ಮಧ್ಯೆ ಸಮನ್ವಯತೆ ಇಲ್ಲ; ವಿಪಕ್ಷ ನಾಯಕ ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: sandhya thejappa

Updated on: Jul 01, 2021 | 10:12 AM

ಮೈಸೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿದ್ದಾರೆ. ಆದರೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುತ್ತಿರುವುದು ಏಕೆ? ಎಂದು ಪ್ರಶ್ನಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಪರೀಕ್ಷೆ ಬೇಡ ಎಂದು ಶಿಕ್ಷಣ ಸಚಿವರಿಗೆ ಹೇಳಿದ್ದೆ. ಮಂತ್ರಿಮಂಡಲದಲ್ಲಿ ಸಮನ್ವಯತೆ ಇಲ್ಲ. ಸಚಿವ ಸುರೇಶ್ ಕುಮಾರ್ ಮತ್ತು ಸುಧಾಕರ್ ಮಧ್ಯೆ ಸಮನ್ವಯತೆ ಇಲ್ಲ ಎಂದು ಮೈಸೂರಿನಲ್ಲಿ ಅಭಿಪ್ರಾಯಪಟ್ಟರು. ಕೊವಿಡ್ ಲಸಿಕೆ ಬಗ್ಗೆಯೂ ಸುಳ್ಳು ಹೇಳುತ್ತಿದ್ದಾರೆ. ಲಸಿಕೆ ಇದ್ದಿದ್ದರೆ ಜನರು ಏಕೆ ಸರತಿಸಾಲಿನಲ್ಲಿ ನಿಲ್ಲುತ್ತಿದ್ದರು. ಲಸಿಕೆಗಾಗಿ ಜನರು ಪರದಾಡುತ್ತಿದ್ದಾರೆ. ಸರ್ಕಾರಕ್ಕೆ ಲಸಿಕೆ ಪೂರೈಸಲು ಆಗುತ್ತಿಲ್ಲ. ಕೊರೊನಾ ಎರಡನೇ ಅಲೆ ನಿರ್ವಹಣೆಗೆ ಸಿದ್ಧತೆ ಮಾಡಿಕೊಂಡಿರಲಿಲ್ಲ. ಲಸಿಕೆ ಹಂಚಿಕೆಯಲ್ಲಿ ಕೇಂದ್ರ ಮತ್ತು ರಾಜ್ಯ ಎರಡು ಸರ್ಕಾರ ವಿಫಲವಾಗಿವೆ. ಚಾಮರಾಜನಗರ ಆಕ್ಸಿಜನ್ ದುರಂತದಲ್ಲೂ ಸುಳ್ಳು ಹೇಳಿದರು. 3 ಜನ ಮೃತಪಟ್ಟಿದ್ದಾಗಿ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

ಸಿಎಂ ಸ್ಥಾನದ ಆಸೆ ಇನ್ನೂ ಹೋಗಿಲ್ಲ ಬಿ.ಎಸ್.ಯಡಿಯೂರಪ್ಪಗೆ ಮುಖ್ಯಮಂತ್ರಿ ಸ್ಥಾನದ ಆಸೆ ಇನ್ನೂ ಹೋಗಿಲ್ಲ. ಚಾಮರಾಜನಗರಕ್ಕೆ ಹೋದರೆ ಸಿಎಂ ಸ್ಥಾನ ಹೋಗುವ ಆತಂಕವಿದೆ. ಹೀಗಾಗಿ ಯಡಿಯೂರಪ್ಪ ಚಾಮರಾಜನಗರಕ್ಕೆ ಹೋಗಿಲ್ಲ ಎಂದು ಹೇಳಿಕೆ ನೀಡಿದ ಸಿದ್ದರಾಮಯ್ಯ, ಚಾಮರಾಜನಗರ ದುರಂತದ ತಪ್ಪಿತಸ್ಥರ ವಿರುದ್ಧ ಕ್ರಮವಾಗಿಲ್ಲ ಎಂದರು.

ಕಾಂಗ್ರೆಸ್​ನಲ್ಲಿ ಸಿಎಂ ಸ್ಥಾನದ ಬಗ್ಗೆ ಯಾವುದೇ ಚರ್ಚೆ ಇಲ್ಲ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಚರ್ಚೆಗೆ ಇನ್ನೂ ಸಮಯ ಇದೆ. ಚುನಾವಣೆ ಆಗಬೇಕು, ಬಹುಮತ ಬರಬೇಕು. ಆ ನಂತರ ಚರ್ಚೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಯೂತ್ ಕಾಂಗ್ರೆಸ್ ಅಧ್ಯಕ್ಷರ ನೇಮಕ ವಿಚಾರದ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದಕ್ಕೂ ನನಗೂ ಯಾವುದೇ ಸಂಬಂಧ ಇರುವುದಿಲ್ಲ. ಅದೇ ಪ್ರತ್ಯೇಕವಾದ ವ್ಯವಸ್ಥೆ. ಆದರೂ ನಾನು ಸಲಹೆ ಕೊಟ್ಟಿದ್ದೆ. ಪ್ರತ್ಯೇಕ ಚುನಾವಣೆ ನಡೆದ ಮೇಲೆ ಅವರ ಆಯ್ಕೆ ಆಗಿದೆ. ಹೊಂದಾಣಿಕೆಯಿಂದ ಒಬ್ಬರನ್ನು ನೇಮಿಸಿ ಎಂದು ಹೇಳಿದ್ದೆ. ಇದರಲ್ಲಿ ನನ್ನದಾಗಲಿ ಡಿಕೆಶಿಯವರದ್ದಾಗಲಿ ಪಾತ್ರ ಇರುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ

Covovax Covid 19 Vaccine: ಕೊವಾವ್ಯಾಕ್ಸ್​ ಲಸಿಕೆಯ ಮಕ್ಕಳ ಮೇಲಿನ ಪ್ರಯೋಗಕ್ಕೆ ಒಪ್ಪಿಗೆ ನೀಡದ ಕೇಂದ್ರ ತಜ್ಞರ ಸಮಿತಿ; ಸೀರಮ್​ ಸಂಸ್ಥೆಗೆ ಸಿಗದ ಅನುಮತಿ

ಸರ್ಕಾರದ ಆದೇಶಕ್ಕೆ ಕವಡೆಕಾಸಿನ ಕಿಮ್ಮತ್ತು ನೀಡದ ಬಿಬಿಎಂಪಿ

(Siddaramaiah says there was no compromise between Suresh Kumar and Sudhakar)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ