ಕಾಂಗ್ರೆಸ್ ಭ್ರಷ್ಟಾಚಾರದ ಕಡತಗಳನ್ನ ತೆಗೆಯುತ್ತೇವೆ ಎಂದ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ; ಪ್ರಶ್ನೆಗಳ ಸುರಿ ಮಳೆ

| Updated By: ಆಯೇಷಾ ಬಾನು

Updated on: Apr 18, 2022 | 12:01 PM

ನಿಮ್ಮ ಬಾಯಲ್ಲಿ ಕಡುಬು ಸಿಕ್ಕಿಹಾಕಿಕೊಂಡಿತ್ತಾ? ಇಷ್ಟು ದಿನ ಬಿಜೆಪಿ ನಾಯಕರು ಕಡ್ಲೆಪುರಿ ತಿನ್ನುತ್ತಿದ್ದರಾ? ನಾವು ಈಗ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ. ಈ ಸಂದರ್ಭದಲ್ಲಿ ಅವರು ಇದನ್ನು ಹೇಳಿದ್ರೆ ಜನ ನಂಬ್ತಾರಾ? -ಸಿದ್ದರಾಮಯ್ಯ

ಕಾಂಗ್ರೆಸ್ ಭ್ರಷ್ಟಾಚಾರದ ಕಡತಗಳನ್ನ ತೆಗೆಯುತ್ತೇವೆ ಎಂದ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಸಿದ್ದರಾಮಯ್ಯ; ಪ್ರಶ್ನೆಗಳ ಸುರಿ ಮಳೆ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us on

ಮೈಸೂರು: ಕಾಂಗ್ರೆಸ್ ಭ್ರಷ್ಟಾಚಾರದ ಕಡತಗಳನ್ನ ತೆಗೆಯುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎಷ್ಟು ವರ್ಷವಾಗಿದೆ. ಈ ಹಿಂದೆ ವಿರೋಧ ಪಕ್ಷದಲ್ಲಿ ಬಿಜೆಪಿಯವರು ಇರಲಿಲ್ವಾ? ಆಗ ಏಕೆ ಇವರು ಭ್ರಷ್ಟಾಚಾರದ ಬಗ್ಗೆ ಕೇಳಿಲ್ಲವೆಂದು ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ನಿಮ್ಮ ಬಾಯಲ್ಲಿ ಕಡುಬು ಸಿಕ್ಕಿಹಾಕಿಕೊಂಡಿತ್ತಾ? ಇಷ್ಟು ದಿನ ಬಿಜೆಪಿ ನಾಯಕರು ಕಡ್ಲೆಪುರಿ ತಿನ್ನುತ್ತಿದ್ದರಾ? ನಾವು ಈಗ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದೇವೆ. ಈ ಸಂದರ್ಭದಲ್ಲಿ ಅವರು ಇದನ್ನು ಹೇಳಿದ್ರೆ ಜನ ನಂಬ್ತಾರಾ? ಭ್ರಷ್ಟಾಚಾರ ವಿಚಾರ ಗೊತ್ತಿದ್ದರೂ ಮುಚ್ಚಿಡುವುದು ಅಪರಾಧ. ಇದು ರಾಜ್ಯ ಬಿಜೆಪಿ ಸರ್ಕಾರಕ್ಕೆ ಗೊತ್ತಿಲ್ಲವಾ? ಜನರಿಗೆ ಇದೆಲ್ಲವೂ ಅರ್ಥವಾಗುತ್ತಿದೆ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಸರ್ಕಾರದ ವೈಫಲ್ಯದಿಂದಲೇ ಗಲಭೆ ನಡೆದಿದೆ
ಇನ್ನು ಮತ್ತೊಂದೆಡೆ ಹುಬ್ಬಳ್ಳಿ ಗಲಭೆಗೆ ರಾಜ್ಯ ಸರ್ಕಾರವೇ ನೇರ ಕಾರಣ ಎಂದು ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ಹೊರ ಹಾಕಿದ್ದಾರೆ. ಸರ್ಕಾರ ಮೊದಲೇ ಕ್ರಮಕೈಗೊಂಡಿದ್ರೆ ಈ ರೀತಿ ಆಗ್ತಿರಲಿಲ್ಲ. ಬಿಜೆಪಿ ಸರ್ಕಾರದ ವೈಫಲ್ಯದಿಂದಲೇ ಗಲಭೆ ನಡೆದಿದೆ. ಹು-ಧಾ ಪೊಲೀಸ್ ಆಯುಕ್ತ ದೊಡ್ಡ ಅನಾಹುತ ತಪ್ಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಘಟನೆಯನ್ನು ನಾನು ಖಂಡಿಸುತ್ತೇನೆ. ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದಿತ್ತು. ಘಟನೆ ಹಿಂದೆ ಯಾರೇ ಪ್ರಭಾವಿಗಳಿದ್ದರೂ ಕೂಡಲೇ ಬಂಧಿಸಲಿ. ಘಟನಾ ಸ್ಥಳಕ್ಕೆ ನಾನು ಭೇಟಿ ನೀಡುತ್ತೇನೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸರ್ಕಾರ ಶಾಂತಿ ಸಭೆ ಕರೆದು ಎಲ್ಲದಕ್ಕೂ ತೆರೆ ಎಳೆಯಬೇಕು
ಪ್ರಚೋದನಕಾರಿ ವಾಟ್ಸಾಪ್ ಸ್ಟೇಟಸ್‌ನಿಂದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಇದೊಂದು ಪೂರ್ವಯೋಜಿತ ಕೃತ್ಯವಾಗಿದೆ ಎಂದು ಟಿವಿ9ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.ಪೊಲೀಸರು ಎಚ್ಚೆತ್ತುಕೊಂಡ ಹಿನ್ನೆಲೆ ಭಾರಿ ಅನಾಹುತ ತಪ್ಪಿದೆ. ಇಲ್ಲದಿದ್ದರೆ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿಯಂತೆ ಗಲಭೆ ಆಗುತ್ತಿತ್ತು. ರಾಜ್ಯದಲ್ಲಿ ಎರಡು ತಿಂಗಳಿಂದ ಅಹಿತಕರ ಘಟನೆಗಳಾಗುತ್ತಿವೆ. ಸರ್ಕಾರ ಶಾಂತಿ ಸಭೆ ಕರೆದು ಎಲ್ಲದಕ್ಕೂ ತೆರೆ ಎಳೆಯಬೇಕು ಎಂದು ಟಿವಿ9 ಮೂಲಕ ರಾಜ್ಯ ಸರ್ಕಾರಕ್ಕೆ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ರಾಮನವಮಿ-ಹನುಮಜಯಂತಿ ವೇಳೆ ಕೋಮು ಸಂಘರ್ಷ; ಸುಪ್ರೀಂಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ವಕೀಲ

Stock Market Timings: ಏಪ್ರಿಲ್ 18ರಿಂದ ಬದಲಾಗಲಿದೆ ಆರ್​ಬಿಐ ನಿಯಂತ್ರಿಸುವ ಎಲ್ಲ ಮಾರುಕಟ್ಟೆಗಳ ವಹಿವಾಟಿನ ಸಮಯ

Published On - 12:01 pm, Mon, 18 April 22