ಮುಖ್ಯಮಂತ್ರಿ ಮತ್ತು ಅವರ ಮಗ ಜೆಸಿಬಿ ಹಾಕಿ ಹಣ ದೋಚುತ್ತಿದ್ದಾರೆ, ಬಿಜೆಪಿ ಜಿಗಣೆ ಇದ್ದಂತೆ -ಸಿದ್ದರಾಮಯ್ಯ

ಯಡಿಯೂರಪ್ಪ ಹಿಂಬಾಗಿಲಿನಿಂದ ಬಂದು ಸಿಎಂ ಆಗಿದ್ದಾರೆ. 17 ಶಾಸಕರನ್ನು ಖರೀದಿಸಿ ಸರ್ಕಾರ ರಚನೆ ಮಾಡಿ ಆಡಳಿತ ನಡೆಸುತ್ತಿದ್ದಾರೆ. ಬಿಜೆಪಿ ಎಂದರೆ ಜಿಗಣೆ ಇದ್ದಂತೆ. ಜನರ ರಕ್ತ ಹೀರುವುದು ಅವರ ಕೆಲಸ. ಆದರೆ ಕಾಂಗ್ರೆಸ್ ಜನರ ಕಣ್ಣೀರು ಒರೆಸುವ ಕೆಲಸ ಮಾಡುತ್ತದೆ..

ಮುಖ್ಯಮಂತ್ರಿ ಮತ್ತು ಅವರ ಮಗ ಜೆಸಿಬಿ ಹಾಕಿ ಹಣ ದೋಚುತ್ತಿದ್ದಾರೆ, ಬಿಜೆಪಿ ಜಿಗಣೆ ಇದ್ದಂತೆ -ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
TV9 Web
| Updated By: ಆಯೇಷಾ ಬಾನು

Updated on: Jul 07, 2021 | 1:41 PM

ಮೈಸೂರು: ಪದೇ ಪದೇ ದ್ರೋಹ ಮಾಡುವವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬಾರದು‌ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ರು. ಅಧಿಕಾರಕ್ಕಾಗಿ ಯಾರೂ ಪಕ್ಷಕ್ಕೆ ಬರಬಾರದು. ಜನಸೇವೆಯ ಗುರಿ ಇದ್ದವರನ್ನು ಮಾತ್ರ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂದರು.

ಕೆಪಿಸಿಸಿಯ ಮೈಸೂರು ನಗರ ಹಾಗೂ ಗ್ರಾಮಾಂತರ ಸಮಿತಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷ ಸೇರ್ಪಡೆ, ಸಹಾಯ ಹಸ್ತ, ಸೈಕಲ್ ಜಾಥಾಗೆ ಚಾಲನೆ ನೀಡಿದ ಬಳಿಕ ಸಿದ್ದರಾಮಯ್ಯ ಈ ರೀತಿ ಹೇಳಿದ್ರು. ಕಾಂಗ್ರೆಸ್ ಎಂದರೆ ಒಂದು ಚಳವಳಿ, ಬಡವರ ಪಕ್ಷ. ನಾವು ನೊಂದವರ ಪರ. ಅನ್ಯಾಯಕ್ಕೆ, ದೌರ್ಜನ್ಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಕರ್ತವ್ಯ.

ಯಡಿಯೂರಪ್ಪ ಹಿಂಬಾಗಿಲಿನಿಂದ ಬಂದು ಸಿಎಂ ಆಗಿದ್ದಾರೆ. 17 ಶಾಸಕರನ್ನು ಖರೀದಿಸಿ ಸರ್ಕಾರ ರಚನೆ ಮಾಡಿ ಆಡಳಿತ ನಡೆಸುತ್ತಿದ್ದಾರೆ. ಕೊರೊನಾ ಮೂರನೇ ಅಲೆ ಸೆಪ್ಟೆಂಬರ್, ಅಕ್ಟೋಬರ್​ನಲ್ಲಿ ಬರುವ ಮಾಹಿತಿ ಇದೆ. ಒಂದು, ಎರಡನೇ ಅಲೆಯಲ್ಲಿ ನಮಗೇನೂ ಆಗಿಲ್ಲ ಎಂದು ಜನ ಮೂರನೇ ಅಲೆಯನ್ನು ನಿರ್ಲಕ್ಷ್ಯ ಮಾಡಬಾರದು. ಇದು ದೊಡ್ಡ ಸಾಂಕ್ರಾಮಿಕ ರೋಗ. ಅದರಿಂದ ದೂರ ಇರಲು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು. ಎರಡನೇ ಅಲೆಯಲ್ಲಿ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಸರ್ಕಾರ ಹೇಳುವುದಕ್ಕಿಂತ ಹತ್ತು ಪಟ್ಡು ಹೆಚ್ಚು ಜನ ಮರಣ ಹೊಂದಿದ್ದಾರೆ. ಮೂರೂವರೆ ಲಕ್ಷ ಮಂದಿ ಸತ್ತಿರಬಹುದು.

ಮುಖ್ಯಮಂತ್ರಿ ಮತ್ತು ಅವರ ಮಗ ಜೆಸಿಬಿಯಲ್ಲಿ ಹಣ ದೋಚುತ್ತಿದ್ದಾರೆ ಪ್ರಧಾನಿ ನರೇಂದ್ರ ಮೋದಿಯವರು ಅಚ್ಛೇ ದಿನ್ ಬರುತ್ತದೆ ಎಂದರೆ ಕೆಟ್ಟ ದಿನಗಳು ಮುಂದೆ ಕಾದಿವೆ ಎಂದು ಅರ್ಥ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಅತ್ಯಂತ ಕೆಟ್ಟ ಸರ್ಕಾರ ಇದೆ. ಮುಖ್ಯಮಂತ್ರಿ ಮತ್ತು ಅವರ ಮಗ ಜೆಸಿಬಿಯಲ್ಲಿ ಹಣ ದೋಚುತ್ತಿದ್ದಾರೆ. ಯಡಿಯೂರಪ್ಪ ಅವರು ಈಗಾಗಲೇ ಒಂದೂವರೆ ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಜನರಿಗೆ ಒಳ್ಳೆಯದಾಗಬೇಕಾದರೆ ಈ ಸರ್ಕಾರ ತೊಲಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಕಳೆದ ಏಳು ವರ್ಷದಲ್ಲಿ ಕೇಂದ್ರ ಸರ್ಕಾರ ರಾಜ್ಯದಿಂದ ಪೆಟ್ರೋಲ್, ಡೀಸೆಲ್ ಮಾರಾಟದ ಮೇಲೆ ವಸೂಲಿ‌ ಮಾಡಿರುವ ತೆರಿಗೆ ಒಂದು ಲಕ್ಷ ಇಪ್ಪತ್ತು ಸಾವಿರ ಕೋಟಿ. ಕೇಂದ್ರ ಸರ್ಕಾರ ಕೂಡಲೇ ತೆರಿಗೆ ಕಡಿಮೆ ಮಾಡಿ ಪೆಟ್ರೋಲ್, ಡೀಸೆಲ್ ದರ ಕಡಿಮೆ ಮಾಡಬೇಕು. ಬಿಜೆಪಿ ಎಂದರೆ ಜಿಗಣೆ ಇದ್ದಂತೆ. ಜನರ ರಕ್ತ ಹೀರುವುದು ಅವರ ಕೆಲಸ. ಆದರೆ ಕಾಂಗ್ರೆಸ್ ಜನರ ಕಣ್ಣೀರು ಒರೆಸುವ ಕೆಲಸ ಮಾಡುತ್ತದೆ.

ಸುಧಾಕರ್ ಕೊರೊನಾ ಲಸಿಕೆ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ ಆರೋಗ್ಯ ಸಚಿವ ಡಾ.ಸುಧಾಕರ್ ಲಸಿಕೆ ಇದೆ ಅಂತಾರೆ. ಕೊರೊನಾ ಲಸಿಕೆಯನ್ನ ಉಪ್ಪಿನಕಾಯಿ ಹಾಕಿ ನೆಕ್ಕಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ರು. 100 ಕೋಟಿ ಜನರಿಗೆ ಕೊರೊನಾ ಲಸಿಕೆ ಹಾಕಬೇಕು. 12 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಹಾಕಲಿ. ಎಲ್ಲರಿಗೂ ಲಸಿಕೆ ನೀಡಲು 200 ಕೋಟಿ ಲಸಿಕೆ ಬೇಕು. ಆದರೆ ಇವರ ಬಳಿ 200 ಕೋಟಿಯಷ್ಟು ಲಸಿಕೆ ಇಲ್ಲ. ಸುಧಾಕರ್ ಕೊರೊನಾ ಲಸಿಕೆ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ. ಸರ್ಕಾರದ ಚರ್ಮ ಲೂಟಿ ಹೊಡೆದು ದಪ್ಪ ಆಗಿದೆ. ಜನರಿಗೆ ಸಹಾಯ ಮಾಡಬೇಕು, ರಕ್ತ ಕುಡಿಯುವುದಲ್ಲ ಎಂದರು.

ಇದನ್ನೂ ಓದಿ: ಬೇರೆ ಕಡೆ ಸ್ವರ್ಧಿಸುವುದಾದರೆ ನಿಮ್ಮ ಅನುಮತಿ ಪಡೆದೇ ಹೋಗುವೆ: ಬಾದಾಮಿ ಕ್ಷೇತ್ರದ ಜನತೆಗೆ ಮಾತುಕೊಟ್ಟ ಸಿದ್ದರಾಮಯ್ಯ

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್