AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ: ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಗರಂ

ಸಿಎಂ ಸಿದ್ದರಾಮಯ್ಯ ಅವರ ನಕಲಿ ಕಚೇರಿ ಆದೇಶ ಪ್ರತಿ ಸೃಷ್ಟಿಸಿ, ಆರೋಗ್ಯ ಇಲಾಖೆ ಅಧಿಕಾರಿಯೊಬ್ಬರನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಲಾಗಿದೆ ಎಂದು ಹರಿಬಿಡಲಾಗಿದೆ. ಸದ್ಯ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ: ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿದ್ದರಾಮಯ್ಯ ಗರಂ
ಸಿದ್ದರಾಮಯ್ಯ, ಹರಿಬಿಟ್ಟ ಪತ್ರ
ಗಂಗಾಧರ​ ಬ. ಸಾಬೋಜಿ
| Edited By: |

Updated on: Feb 13, 2026 | 11:18 PM

Share

ಬೆಂಗಳೂರು, ಫೆಬ್ರವರಿ 13: ಆರೋಗ್ಯ ಇಲಾಖೆ ಅಧಿಕಾರಿಯನ್ನ ಅಬಕಾರಿ ಇಲಾಖೆಗೆ ವರ್ಗಾವಣೆ (transfer) ಮಾಡ್ಬೇಕೆಂಬ ಸಿಎಂ ಸೂಚನೆ ನೀಡಿದ್ದಾರೆ ಎನ್ನಲಾದ ಪತ್ರ ಸದ್ಯ ರಾಜ್ಯದಲ್ಲಿ ಸಾಕಷ್ಟು ಹಲ್ ಚಲ್ ಎಬ್ಬಿಸಿದೆ. ಮೊದಲೇ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿದ್ದ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಸದ್ಯ ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ (Siddaramaiah) ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ, ಮಂಡ್ಯ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾದ ಡಾ. ಕೆ.ಮೋಹನ್ ಇವರನ್ನು ಮೈಸೂರು ಗ್ರಾಮಾಂತರದ ಅಬಕಾರಿ ಉಪ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು, ಅಪಪ್ರಚಾರದಲ್ಲಿ ತೊಡಗಿರುವುದು ಖಂಡನೀಯ ಮತ್ತು ಅತ್ಯಂತ ಗಂಭೀರ ಸ್ವರೂಪದ ಅಪರಾಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​ 

ಇನ್ನು ಈ ಬಗ್ಗೆ ನನ್ನ ಸಚಿವಾಲಯದ ಅಧಿಕಾರಿಗಳು ದೂರು ದಾಖಲಿಸಿದ್ದು, ಪೊಲೀಸ್ ಇಲಾಖೆ ಇದರ ಹಿಂದಿರುವ ದುಷ್ಟರನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ಇಲಾಖೆ ಅಧಿಕಾರಿ ಅಬಕಾರಿ ಇಲಾಖೆಗೆ ವರ್ಗಾವಣೆ! ಸಿಎಂ ಹೆಸರಲ್ಲಿ ಬರೆದ ಪತ್ರ ವೈರಲ್​​

ಇಂತಹ ನಕಲಿ ಸುದ್ದಿಗಳನ್ನು ನಂಬಿ ಶೇರ್ ಮಾಡುವ ಮುನ್ನ ಜಾಲತಾಣ ಬಳಕೆದಾರರು ಎಚ್ಚರಿಕೆ ವಹಿಸಬೇಕು. ಈಗಿನ ಫೋಟೋಶಾಪ್, ಎಐ ಯುಗದಲ್ಲಿ ವಾಟ್ಸ್‌ಆ್ಯಪ್ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಾಮರ್ಶಿಸದೆ ಇತರರ ಜೊತೆ ಹಂಚಿಕೊಳ್ಳುವುದು ಕೂಡ ಅಪರಾಧವೆ ಆಗಿದೆ. ಸಕಾರಾತ್ಮಕ ಟೀಕೆಗೆ ನಾವು ಮುಕ್ತರಿದ್ದೇವೆ, ಸುಳ್ಳು ಸುದ್ದಿಗಳ ಅಪಪ್ರಚಾರವನ್ನು ಸಹಿಸುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಮೆರುಗು ನೀಡಿದ ಸ್ತಬ್ಧ ಚಿತ್ರಗಳು
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ!
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ!