ಕೊರೊನಾಕ್ಕೆ ಲಸಿಕೆ ಬಂದಿದೆ, ನಿಮ್ಮ ಸರ್ಕಾರಕ್ಕೆ ತಗುಲಿದ ಭ್ರಷ್ಟಾಚಾರಿ ವೈರಸ್‌ಗೆ ಮದ್ದು ಸಿಕ್ಕಿಲ್ಲ: ಸರ್ಕಾರಕ್ಕೆ ಚಾಟಿ ಬೀಸಿದ ಸಿದ್ದರಾಮಯ್ಯ
ಕೊರೊನಾ ನಿಯಂತ್ರಣಕ್ಕಾಗಿ ಸಂಪನ್ಮೂಲ ವ್ಯಯಮಾಡಬೇಕಾಗಿದೆ ಎಂಬ ಕುಂಟುನೆಪ ಹೇಳಿ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿದ ಸಿಎಂ ಅವರು ಈಗ ಏನು ಹೇಳುತ್ತಾರೆ? ಅಷ್ಟೊಂದು ಆದ್ಯತೆ ನೀಡಿದ್ದರೆ ಕೊರೊನಾ ನಿಯಂತ್ರಣಕ್ಕೆ ಬರಬೇಕಿತ್ತಲ್ಲಾ? ಯಾಕೆ ನಿಯಂತ್ರಣ ತಪ್ಪಿದೆ?
ಬೆಂಗಳೂರು: ಕೊರೊನಾ ವೈರಾಣುವಿನ ಎರಡನೇ ಅಲೆಯ ಆತಂಕ ದೇಶಾದ್ಯಂತ ಹೆಚ್ಚುತ್ತಿದ್ದು ಕರ್ನಾಟಕದಲ್ಲಿಯೂ ಮತ್ತೆ ಸೋಂಕು ಹಬ್ಬುವ ಭೀತಿ ಉಲ್ಬಣಿಸುತ್ತಿದೆ. ಇದರ ಬೆನ್ನಲ್ಲೇ, ಕರ್ನಾಟಕ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಚಾಟಿ ಬೀಸಿದ್ದು, ಸರಣಿ ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮುಂದೆ ಕೆಲ ಪ್ರಶ್ನೆಗಳನ್ನಿಟ್ಟಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅಷ್ಟೆಲ್ಲಾ ಹಣ ಖರ್ಚು ಮಾಡಿದ ಮೇಲೂ ಸೋಂಕು ಮರುಕಳಿಸುತ್ತಿದೆ ಎಂದರೆ ಅರ್ಥವೇನು? ಕೊರೊನಾಕ್ಕೆ ಹೆಚ್ಚಿನ ಅನುದಾನ ಕೊಡುವ ನೆಪವೊಡ್ಡಿ ಅಭಿವೃದ್ಧಿ ಕಾರ್ಯಗಳನ್ನೂ ಮೊಟಕುಗೊಳಿಸಲಾಗಿದೆ. ಆದರೆ, ಇದರ ಪ್ರಯೋಜನವೇನು ಎಂದು ಆಡಳಿತ ಪಕ್ಷವನ್ನು ಪ್ರಶ್ನಿಸಿದ್ದಾರೆ.
ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ ಮತ್ತೆ ಅವತರಿಸಿ ಕೇಕೆ ಹಾಕುತ್ತಿರುವ ಕೊರೊನಾ ವೈರಸ್, ಮುಖ್ಯಮಂತ್ರಿಗಳೇ, ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ? ಕೊರೊನಾ ನಿಯಂತ್ರಣಕ್ಕಾಗಿ ಸಂಪನ್ಮೂಲ ವ್ಯಯಮಾಡಬೇಕಾಗಿದೆ ಎಂಬ ಕುಂಟುನೆಪ ಹೇಳಿ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿದ ಸಿಎಂ ಅವರು ಈಗ ಏನು ಹೇಳುತ್ತಾರೆ? ಅಷ್ಟೊಂದು ಆದ್ಯತೆ ನೀಡಿದ್ದರೆ ಕೊರೊನಾ ನಿಯಂತ್ರಣಕ್ಕೆ ಬರಬೇಕಿತ್ತಲ್ಲಾ? ಯಾಕೆ ನಿಯಂತ್ರಣ ತಪ್ಪಿದೆ? ಎಂದು ಪ್ರಶ್ನೆ ಮಾಡಿದ್ದಾರೆ.
ಕೊರೊನಾ ನಿರ್ವಹಣೆಗಾಗಿ ₹5,372 ಕೋಟಿ ಖರ್ಚು ಮಾಡಲಾಗಿದೆ ಎಂದು ಮೊನ್ನೆ ಮಂಡಿಸಿದ್ದ ಬಜೆಟ್ ನಲ್ಲಿ ಹೇಳಿರುವ ಮುಖ್ಯಮಂತ್ರಿಗಳು, ಮಾಡಿರುವ ಖರ್ಚಿನ ವಿವರ ಮಾತ್ರ ತಿಳಿಸಿಲ್ಲ. ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಿ. ಕೊರೊನಾ ವೈರಸ್‌ಗೆ ಲಸಿಕೆ ಬಂದಿದೆ, ನಿಮ್ಮ ಸರ್ಕಾರಕ್ಕೆ ತಗುಲಿರುವ ಭ್ರಷ್ಟಾಚಾರದ ವೈರಸ್‌ಗೆ ಎಲ್ಲಿಂದ ಲಸಿಕೆ ತರುವುದು? ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ ಎಂದು ಟೀಕಿಸಿದ್ದಾರೆ.
ಕೊರೊನಾ ನಿಯಂತ್ರಣದ ಹೆಸರಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನಮ್ಮ ಆರೋಪಕ್ಕೆ ಸಾಕ್ಷಿ ಹೇಳುವಂತಿದೆ ಮತ್ತೆ ಅವತರಿಸಿ ಕೇಕೆ ಹಾಕುತ್ತಿರುವ ಕೊರೊನಾ ವೈರಸ್.@CMofKarnataka ಅವರೇ, ನಿಯಂತ್ರಣಕ್ಕೆ ಸರ್ಕಾರ ಖರ್ಚು ಮಾಡಿದ್ದರೆ ಮತ್ತೆ ಯಾಕೆ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ? 1/4#coronavirus
— Siddaramaiah (@siddaramaiah) March 19, 2021
ಕೊರೊನಾ ನಿಯಂತ್ರಣಕ್ಕಾಗಿ ಸಂಪನ್ಮೂಲ ವ್ಯಯಮಾಡಬೇಕಾಗಿದೆ ಎಂಬ ಕುಂಟುನೆಪ ಹೇಳಿ ಅಭಿವೃದ್ಧಿ ಚಟುವಟಿಕೆಗಳಿಗೆ ಅನುದಾನಗಳನ್ನು ಕಡಿತಗೊಳಿಸಿದ @CMofKarnataka ಅವರು ಈಗ ಏನು ಹೇಳುತ್ತಾರೆ? ಅಷ್ಟೊಂದು ಆದ್ಯತೆ ನೀಡಿದ್ದರೆ ಕೊರೊನಾ ನಿಯಂತ್ರಣಕ್ಕೆ ಬರಬೇಕಿತ್ತಲ್ಲಾ? ಯಾಕೆ ನಿಯಂತ್ರಣ ತಪ್ಪಿದೆ? 2/4#coronavirus
— Siddaramaiah (@siddaramaiah) March 19, 2021
ಕೊರೊನಾ ನಿರ್ವಹಣೆಗಾಗಿ ರೂ.5,372 ಕೋಟಿ ಖರ್ಚು ಮಾಡಲಾಗಿದೆ ಎಂದು ಮೊನ್ನೆ ಮಂಡಿಸಿದ್ದ ಬಜೆಟ್ ನಲ್ಲಿ ಹೇಳಿರುವ @CMofKarnataka, ಮಾಡಿರುವ ಖರ್ಚಿನ ವಿವರ ಮಾತ್ರ ತಿಳಿಸಿಲ್ಲ.
ಈಗಲಾದರೂ ಆ ಹಣ ಯಾವ ಉದ್ದೇಶಗಳಿಗೆ ಖರ್ಚು ಮಾಡಿದ್ದೀರಿ ಎಂಬ ಲೆಕ್ಕದ ವಿವರವನ್ನು ಜನರ ಮುಂದಿಡಿ. 3/4#coronavirus
— Siddaramaiah (@siddaramaiah) March 19, 2021
ಕೊರೊನಾ ವೈರಸ್‌ಗೆ ಲಸಿಕೆ ಬಂದಿದೆ, ನಿಮ್ಮ ಸರ್ಕಾರಕ್ಕೆ ತಗಲಿರುವ ಭ್ರಷ್ಟಾಚಾರದ ವೈರಸ್ ಗೆ ಎಲ್ಲಿಂದ ಲಸಿಕೆ ತರುವುದು?
ಕೊರೊನಾ ಮೊದಲ ಅಲೆಯ ನಿಯಂತ್ರಣದಲ್ಲಿನ ಲೋಪ-ದೋಷವನ್ನು ಎರಡನೇ ಅಲೆಯಲ್ಲಿಯಾದರೂ ತಿದ್ದಿಕೊಂಡು, ಕೊರೊನಾವನ್ನು ಭ್ರಷ್ಟಾಚಾರಕ್ಕೆ ದುರ್ಬಳಕೆ ಮಾಡಿಕೊಳ್ಳದೆ ಕೆಲಸ ಮಾಡಿ ಜನರನ್ನು ಉಳಿಸಿ. 4/4#coronavirus
— Siddaramaiah (@siddaramaiah) March 19, 2021
ಇದನ್ನೂ ಓದಿ: ಖಾಸಗಿ ವಲಯದಲ್ಲೂ ಎಸ್ಸಿ, ಎಸ್ಟಿ ಸಮುದಾಯಕ್ಕೆ ಮೀಸಲಾತಿ ಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಎನ್.ಮಹೇಶ್ ಆಗ್ರಹ
ಬ್ರಾಹ್ಮಣರಿಂದ ಹಿಡಿದು ಕುರುಬರವರೆಗೆ ಮೀಸಲಾತಿ ಕೇಳ್ತಾರೆ, ದೊಡ್ಡ ಮೀನು ಸಣ್ಣ ಮೀನನ್ನು ನುಂಗಬಾರದು: ಸಿದ್ದರಾಮಯ್ಯ
Published On - 11:18 am, Fri, 19 March 21