ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸಿದ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ತಿರುಗೇಟು: ಚರ್ಚೆಗೆ ಆಹ್ವಾನಿಸಿದ ಸಿಎಂ

ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಟೀಕೆ ವಿಚಾರವಾಗಿ ಇದೀಗ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದು, ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕ ರಾಜ್ಯಕ್ಕೆ ಮತ್ತು ಕನ್ನಡಿಗರಿಗ ಅವಮಾನ ಮಾಡುತ್ತಿರುವುದು ವಿಷಾದನೀಯ ಬೆಳವಣಿಗೆ ಎಂದು ತಿರುಗೇಟು ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸಿದ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ತಿರುಗೇಟು: ಚರ್ಚೆಗೆ ಆಹ್ವಾನಿಸಿದ ಸಿಎಂ
ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸಿದ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ತಿರುಗೇಟು: ಚರ್ಚೆಗೆ ಆಹ್ವಾನಿಸಿದ ಸಿಎಂ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 01, 2024 | 10:35 PM

ಬೆಂಗಳೂರು, ನವೆಂಬರ್ 01: ನಾವು ಭರವಸೆ ಕೊಟ್ಟ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಬಜೆಟ್​ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರೂ. ಹಣ ಇಟ್ಟಿದ್ದೇವೆ. ಹೆಚ್ಚುವರಿಯಾಗಿ 53,903 ಕೋಟಿ ಹಣ ಅಭಿವೃದ್ಧಿಗೆ ಮೀಸಲಿಟ್ಟಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರೇ ನಮ್ಮ ಸರ್ಕಾರದ ವಿರುದ್ಧ ಮಾತಾಡೋದಕ್ಕೂ ಮುನ್ನ ಕಳೆದ ನಿಮ್ಮ ಬಿಜೆಪಿ ಸರ್ಕಾರದ ಕಡೆ ನೋಡಿ. ಈ ಬಗ್ಗೆ ಸಾರ್ವಜನಿಕವಾಗಿಯೇ ಚರ್ಚೆ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ತಿರುಗೇಟು ನೀಡಿದ್ದಾರೆ.

ಕರ್ನಾಟಕ ರಾಜ್ಯಕ್ಕೆ ಮತ್ತು ಕನ್ನಡಿಗರಿಗ ಅವಮಾನ

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಿ ಮೋದಿ ಟೀಕೆ ವಿಚಾರವಾಗಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿನ ಯಶಸ್ಸು ಮತ್ತು ಇದರಿಂದಾಗಿ ಏರುಗತಿಯಲ್ಲಿ ಸಾಗುತ್ತಿರುವ ರಾಜ್ಯದ ಆರ್ಥಿಕತೆಯನ್ನು ಕಂಡು ಬೆನ್ನುತಟ್ಟಿ ಪ್ರೊತ್ಸಾಹ ನೀಡಬೇಕಾಗಿದ್ದ ದೇಶದ ಪ್ರಧಾನಿ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕ ರಾಜ್ಯಕ್ಕೆ ಮತ್ತು ಕನ್ನಡಿಗರಿಗ ಅವಮಾನ ಮಾಡುತ್ತಿರುವುದು ವಿಷಾದನೀಯ ಬೆಳವಣಿಗೆ ಎಂದಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಪ್ರಧಾನಿ ಮೋದಿ ಅವರೇ, ಇಂದು ಕನ್ನಡ ರಾಜ್ಯೋತ್ಸವದ ದಿನ. “ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ” ಎಂದು ಸಾರಿದ ರಾಷ್ಟ್ರಕವಿ ಕುವೆಂಪು ಅವರ ಕಾವ್ಯವನ್ನು ನಾಡಗೀತೆಯಾಗಿ ಸ್ವೀಕರಿಸಿರುವ ಕರ್ನಾಟಕ, ಭಾರತಕ್ಕೆ ತಾಯಿಯ ಸ್ಥಾನವನ್ನು ನೀಡಿದೆ. ಇದೇ ಪ್ರೀತಿ ಮತ್ತು ಬದ್ಧತೆಯಿಂದ ಪ್ರಾಮಾಣಿಕವಾಗಿ ತಮ್ಮ ಬೆವರಗಳಿಕೆಯನ್ನು ತೆರಿಗೆಯಾಗಿ ನೀಡಿ ದೇಶದ ಬೊಕ್ಕಸವನ್ನು ತುಂಬಿದವರು ಕನ್ನಡಿಗರು.

ಇದನ್ನೂ ಓದಿ: ರಾಜಕೀಯ ರಹಸ್ಯ: ಸಿಎಂ, ಡಿಸಿಎಂಗೆ ಖರ್ಗೆ ಓಪನ್ ಆಗಿ ಕ್ಲಾಸ್ ತೆಗೆದುಕೊಂಡಿದ್ದೇಕೆ?

ದೇಶದಲ್ಲಿ ಮಹಾರಾಷ್ಟ್ರದ ನಂತರ ಅತ್ಯಂತ ಹೆಚ್ಚು ನೇರ ತೆರಿಗೆ (11.9%) ಪಾವತಿಯಾಗಿರುವುದು ಕರ್ನಾಟಕ ರಾಜ್ಯದಲ್ಲಿ ಎನ್ನುವುದನ್ನು ಭಾರತೀಯ ಸ್ಟೇಟ್ ಬ್ಯಾಂಕ್ ವರದಿ ಒಪ್ಪಿಕೊಂಡಿರುವುದನ್ನು ನೀವು ಗಮನಿಸಿರಬಹುದೆಂದು ಭಾವಿಸಿದ್ದೇನೆ. ನರೇಂದ್ರ ಮೋದಿಯವರೇ, ಎಲ್ಲವನ್ನೂ ಪಕ್ಷ, ರಾಜಕೀಯದ ಹಳದಿ ಕನ್ನಡಕದಿಂದ ನೋಡುವ ಅಭ್ಯಾಸವನ್ನು ಬಿಟ್ಟು ಒಬ್ಬ ಮುತ್ಸದ್ದಿ ರಾಜಕಾರಣಿಯಾಗಿ ಕರ್ನಾಟಕದ ಅಭಿವೃದ್ದಿ ಮಾದರಿಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ ಎಂದು ತಿರುಗೇಟು ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಬಡವರ ಕೈಗೆ ದುಡ್ಡು ಸಿಕ್ಕಿ ಅದು ಮಾರುಕಟ್ಟೆಗೆ ಹರಿದುಬಂದು ಅದರಿಂದ ತೆರಿಗೆ ಸಂಗ್ರಹವೂ ಹೆಚ್ಚಾಗಿ, ರಾಜ್ಯದ ಆರ್ಥಿಕತೆಗೆ ಬಲ ಬರಲಿದೆ ಎಂದು ಪ್ರಾರಂಭದಿಂದಲೂ ನಾನು ಹೇಳಿಕೊಂಡು ಬಂದಿದ್ದೇನೆ. ಅದು ಇಂದು ನಿಜವಾಗಿದೆ. ಇದಕ್ಕಾಗಿ ಕರ್ನಾಟಕಕ್ಕೆ ನೀವು ಶಹಾಬಾಸ್ ಗಿರಿ ಕೊಡಬೇಕಿತ್ತು, ಆದರೆ ನೀವು ಸುಳ್ಳಿನ ಬಾಣಗಳ ಮೂಲಕ ಕನ್ನಡಿಗರನ್ನು ಅವಮಾನಿಸುತ್ತಿದ್ದೀರಿ. ಇದು ಖಂಡನೀಯ, ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ನಮ್ಮ ಸರ್ಕಾರದ ಕಡೆಗೆ ಬೆರಳು ಮಾಡುವ ಮುನ್ನ ಕರ್ನಾಟಕದ ಬಿಜೆಪಿ ಪಕ್ಷದ ವಿನಾಶಕಾರಿ ಇತಿಹಾಸದ ಮೇಲೊಮ್ಮೆ ಕಣ್ಣಾಯಿಸಿ. ನಾವು ಜನರಿಗೆ ನೀಡಿದ್ದ ಪ್ರತಿ ಭರವಸೆಯನ್ನು ಈಡೇರಿಸಿದ್ದೇವೆ. ನಮ್ಮ 5 ಗ್ಯಾರಂಟಿ ಯೋಜನೆಗಳನ್ನು 52,000 ಕೋಟಿಗೂ ಅಧಿಕ ಅನುದಾನದಲ್ಲಿ ಅನುಷ್ಠಾನಕ್ಕೆ ಕೊಟ್ಟಿದ್ದೇವೆ, ಇದರ ಜೊತೆಗೆ ನಾಡಿನ ಭವಿಷ್ಯ ರೂಪಿಸಲು 52,903 ಕೋಟಿ ಅನುದಾನ ಬಳಸಲಾಗುತ್ತಿದೆ.

ರಾಜ್ಯದಲ್ಲಿ ಅಧಿಕಾರದಲ್ಲಿದ್ದ ನಿಮ್ಮ ಪಕ್ಷದ ಸಾಧನೆ ಏನು? ಏಳು ಕೋಟಿ ಕನ್ನಡಿಗರ ಅಭಿವೃದ್ಧಿಗಾಗಿ ವ್ಯಯವಾಗಬೇಕಾಗಿದ್ದ ಜನರ ಬೆವರ ಗಳಿಕೆಯ ತೆರಿಗೆ ಹಣವನ್ನು 40% ಕಮಿಷನ್ ರೂಪದಲ್ಲಿ ತಿಂದು ತೇಗಿದ್ದೇ? ಆದಾಯದ ಮೂಲಗಳನ್ನೆಲ್ಲ ಬರಿದು ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿಯ ಅಂಚಿಗೆ ತಳ‍್ಳಿದ್ದೇ? ಈ ರೀತಿ ಲೂಟಿ ಮಾಡಿದ್ದ ಹಣದಲ್ಲಿ ನಿಮಗೂ ಪಾಲು ಸಂದಾಯವಾಗಿದೆ ಎಂದು ನಿಮ್ಮ ಪಕ್ಷದ ನಾಯಕರೇ ಮಾಡಿರುವ ಆರೋಪ ನಿಮ್ಮ ಗಮನಕ್ಕೂ ಬಂದಿರಬಹುದಲ್ಲವೇ? ನಿಮ್ಮ ನಾಯಕರು ಲೂಟಿ ಮಾಡುತ್ತಿದ್ದ 40% ಕಮಿಷನ್ ಹಣವನ್ನು ನಾವು ನೇರವಾಗಿ ಜನರಿಗೆ ತಲುಪಿಸುತ್ತಿದ್ದೇವೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಇಳಿಸೋಕೆ ಹೋದ್ರೆ ಕರ್ನಾಟಕದಲ್ಲಿ ಕ್ರಾಂತಿ ಆಗುತ್ತೆ: ವಾಟಾಳ್ ನಾಗರಾಜ್ ಎಚ್ಚರಿಕೆ

ನಾವು ನುಡಿದಂತೆ ನಡೆದಿದ್ದೇವೆ, ನಿಮ್ಮ ಭರವಸೆಗಳೇನಾಯಿತು? ಪ್ರತಿಯೊಬ್ಬನ ಖಾತೆಗೆ ಹದಿನೈದು ಲಕ್ಷ ರೂಪಾಯಿ ಜಮೆ ಆಯಿತೇ? ಕಪ್ಪು ಹಣ ಮಾಯವಾಯಿತೇ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿಯಾಯಿತೇ? ರೈತರ ಆದಾಯ ದುಪ್ಪಟ್ಟಾಯಿತೇ? ಎಲ್ಲಿದೆ ನಿಮ್ಮ ಸ್ಮಾರ್ಟ್ ಸಿಟಿ? ಎಲ್ಲಿದೆ ನಿಮ್ಮ ಮೇಕ್ ಇನ್ ಇಂಡಿಯಾ? ನಿಮ್ಮ ಸಾಧನೆಗಳಾದರೂ ಏನು? ನಾಡನ್ನು ಸಾಲದ ಕೂಪಕ್ಕೆ ತಳ್ಳಿದ್ದೆ? ಸುಳ್ಳು ಮತ್ತು ಅಪಪ್ರಚಾರದ ಮೂಲಕ ನಿಮ್ಮ ವೈಫಲ್ಯಗಳನ್ನು ಮುಚ್ಚಿಹಾಕಿದ್ದೇ ಎಂದು ಸಾಲು ಸಾಲು ಪ್ರಶ್ನೆ ಮಾಡಿದ್ದಾರೆ.

ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಿದ್ದು ನಿಮ್ಮ ಪ್ರಮುಖ ಸಾಧನೆ

ನಿಮ್ಮ ಅತ್ಯಂತ ಪ್ರಮುಖ ಸಾಧನೆ ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಿದ್ದು. ನಿಮ್ಮ ಆಡಳಿತದಲ್ಲಿ 2024-25ರ ಆರ್ಥಿಕ ವರ್ಷದ ಅಂತ್ಯಕ್ಕೆ ದೇಶದ ಸಾಲ ₹185.27 ಲಕ್ಷ ಕೋಟಿಯ ಗಡಿ ಮುಟ್ಟಲಿದೆ ಎಂದು ಅಂದಾಜಿಸಲಾಗಿದೆ. ಇದು ಜಿಡಿಪಿ 56.8% ಆಗಲಿದೆ. ಇದು ನಿಮ್ಮ ದುರಾಡಳಿತ ಮಾತ್ರವಲ್ಲ, ನೀವು ಪ್ರತಿಯೊಬ್ಬ ಭಾರತೀಯನ ಮೇಲೆ ಹೊರಿಸುತ್ತಿರುವ ಸಾಲದ ಹೊರೆಯೂ ಹೌದು ಎಂದಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಆಗಾಗ ನೀವು ಸುಳ್ಳು ಸಂಗತಿಗಳನ್ನು ಪೋಣಿಸಿಕೊಂಡು ಕರ್ನಾಟಕ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಬಂದಿದ್ದೀರಿ. ಈ “ತೂ ತೂ, ಮೈ ಮೈ” ಚರ್ಚೆಗೆ ತಾರ್ಕಿಕವಾದ ಅಂತ್ಯ ಹಾಡಿ ಬಿಡೋಣ. ಕಳೆದ ಎರಡು ಲೋಕಸಭಾ ಚುನಾವಣೆಯ ಮುನ್ನ ನಿಮ್ಮ ಪಕ್ಷ ಬಿಡುಗಡೆಗೊಳಿಸಿದ್ದ ಪ್ರಣಾಳಿಕೆಯನ್ನು ಇಟ್ಟುಕೊಂಡು ಒಂದು ಸಾರ್ವಜನಿಕ ಚರ್ಚೆಯನ್ನು ಹಮ್ಮಿಕೊಳ್ಳೋಣ. ಪ್ರಣಾಳಿಕೆಯಲ್ಲಿ ನೀವು ಕೊಟ್ಟಿರುವ ಭರವಸೆಗಳಲ್ಲಿ ಎಷ್ಟನ್ನು ನೀವು ಈಡೇರಿಸಿದ್ದೀರಿ? ಎನ್ನುವುದನ್ನು ಸಾರ್ವಜನಿಕವಾಗಿಯೇ ಚರ್ಚೆ ಮಾಡೋಣ. ದೇಶದ ಪ್ರಜ್ಞಾವಂತ ಜನರೇ ಯಾರದ್ದು ಎಷ್ಟು ಸತ್ಯ? ಎಷ್ಟು ಸುಳ್ಳು? ಎನ್ನುವುದನ್ನು ತೀರ್ಮಾನಿಸಲಿ ಎಂದು ಕಿಡಿಕಾರಿದ್ದಾರೆ.

ವರದಿ: ಈರಣ್ಣ ಬಸವ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:32 pm, Fri, 1 November 24

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್