ಚುನಾವಣೆಗೂ ತೈಲ​ ದರ ಏರಿಕೆಗೂ ಸಂಬಂಧವಿಲ್ಲ: ಆರ್​ ಅಶೋಕ್​ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆಗೂ ತೈಲ​ ದರ ಏರಿಕೆಗೂ ಯಾವುದೇ ಸಂಬಂಧವಿಲ್ಲ. ಆ ಮೂಲಕ ಎಂಪಿ ಚುನಾವಣೆ ಸೋಲಿನ ಸೇಡಿಗೆ ತೈಲ ದರ ಏರಿಕೆ ಎಂಬ ವಿಪಕ್ಷ ನಾಯಕ ಆರ್​. ಅಶೋಕ್​ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನಾವು ಸೋತಿಲ್ಲ, ಬಿಜೆಪಿ ಸೋತಿದೆ ಎಂದಿದ್ದಾರೆ.

ಚುನಾವಣೆಗೂ ತೈಲ​ ದರ ಏರಿಕೆಗೂ ಸಂಬಂಧವಿಲ್ಲ: ಆರ್​ ಅಶೋಕ್​ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು
ಚುನಾವಣೆಗೂ ತೈಲ​ ದರ ಏರಿಕೆಗೂ ಸಂಬಂಧವಿಲ್ಲ: ಆರ್​ ಅಶೋಕ್​ ಆರೋಪಕ್ಕೆ ಸಿದ್ದರಾಮಯ್ಯ ತಿರುಗೇಟು
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 16, 2024 | 3:06 PM

ವಿಜಯಪುರ, ಜೂನ್​ 16: ಚುನಾವಣೆಗೂ ತೈಲ​ ದರ ಏರಿಕೆಗೂ (price hike) ಯಾವುದೇ ಸಂಬಂಧವಿಲ್ಲ. ತೈಲ ದರ ನಾವು ಮೂರು ರೂಪಾಯಿ ಹೆಚ್ಚಳ ಮಾಡಿದ್ದೇವೆ. ಮೂರು ರೂ. ಹೆಚ್ಚಳ ಮಾಡಿದ್ದಕ್ಕೆ ಚುನಾವಣೆ ಸಂಬಂಧನಾ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಪ್ರಶ್ನಿಸಿದ್ದಾರೆ. ಜಿಲ್ಲೆಯ ಚಡಚಣ ತಾಲೂಕಿನ ಇಂಚಗೇರಿ ಮಠದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಂಪಿ ಚುನಾವಣೆ ಸೋಲಿನ ಸೇಡಿಗೆ ತೈಲ ದರ ಏರಿಕೆ ಎಂಬ ವಿಪಕ್ಷ ನಾಯಕ ಆರ್​. ಅಶೋಕ್​ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಇದೇ ಕುಮಾರಸ್ವಾಮಿ ಇದ್ದಾಗ ಶೇ.35ರಷ್ಟಿತ್ತು. ರಾಜ್ಯದಲ್ಲಿ 102.86 ಪೈಸೆ ಈಗಾ ಇದೆ. ತಮಿಳುನಾಡು ಸಮ ಆಗಿದೆ. ಕಾಸರಗೋಡು 106.06 ಪೈಸೆ, ಆಂಧ್ರಪ್ರದೇಶದಲ್ಲಿ 109 ರೂ. ಇದೆ. ಹೈದರಾಬಾದ್​ನಲ್ಲೂ ಹೆಚ್ಚಿದೆ. ಮಹಾರಾಷ್ಟ್ರ 104 ರೂ, ರಾಜಸ್ಥಾನ 104.86 ರೂ. ಮಧ್ಯಪ್ರದೇಶದ 106.47 ರೂ. ಇದೆ.

ಇದನ್ನೂ ಓದಿ: ಪೆಟ್ರೋಲ್-ಡೀಸೆಲ್ ಬೆಲೆ ದುಬಾರಿ; ರಾಜ್ಯ ಸರ್ಕಾರದ ನಡೆಗೆ ಸಾರ್ವಜನಿಕರಿಂದ ಆಕ್ರೋಶ

ರಾಜಸ್ಥಾನದಲ್ಲಿ ದರ 104.86 ರೂಪಾಯಿ ಇದೆ. ಮಧ್ಯಪ್ರದೇಶದಲ್ಲಿ 106 ರೂಪಾಯಿ ಇದೆ. ರಾಜಸ್ಥಾನ, ಮಧ್ಯಪ್ರದೇಶದಲ್ಲಿ ಯಾರ ಸರ್ಕಾರ ಇದೆ ಎಂದು ಕಿಡಿಕಾರಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ನಾವು ಸೋತಿಲ್ಲ, ಬಿಜೆಪಿ ಸೋತಿದೆ

ಕಳೆದ ಲೋಕಸಭೆ ಚುನಾವಣೆಯಲ್ಲಿ ನಾವು 1 ಸ್ಥಾನ ಗೆದ್ದಿದ್ದೆವು. 2024ರ ಲೋಕಸಭೆ ಚುನಾವಣೆಯಲ್ಲಿ 9 ಸ್ಥಾನ ಗೆದ್ದಿದ್ದೇವೆ. ರಾಜ್ಯದಲ್ಲಿ ಬಿಜೆಪಿಯವರು 25ರಿಂದ 17 ಸ್ಥಾನಕ್ಕೆ ಕುಸಿದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ನಾವು ಸೋತಿಲ್ಲ, ಬಿಜೆಪಿ ಸೋತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಬೆಲೆ ಏರಿಕೆ ಭಾಗ್ಯ ಕೊಟ್ಟ ಕಾಂಗ್ರೆಸ್ ಸರ್ಕಾರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ: ಆರ್​ ಅಶೋಕ್​

ಅನುದಾನ ವಿಚಾರದಲ್ಲಿ ಮುದ್ದೇಬಿಹಾಳ ಕ್ಷೇತ್ರದ ಶಾಸಕ ನಾಡಗೌಡ ಮತ್ತು ಜಿಟಿ ಪಾಟೀಲ್ ಮುನಿಸು ವಿಚಾರವಾಗಿ ಮಾತನಾಡಿದ್ದು, ಅವರು ಯಾವ ಸಂದರ್ಭದಲ್ಲಿ ಹೇಳಿದ್ದಾರೋ ನೋಡೋನಾ. ಅನುದಾನ ಎಲ್ಲ ಕೊಟ್ಟಿದ್ದೇವೆ. ಗ್ಯಾರಂಟಿಗಳು ಚುನಾವಣೆಗೋಸ್ಕರ ಮಾಡಿದ್ದಲ್ಲ. ಗ್ಯಾರಂಟಿಗಳನ್ನ ನಾವು ಬಡವರಿಗೋಸ್ಕರ ಮಾಡಿದ್ದು. ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲಾ ಎಂದು ಪುನರುಚ್ಚಾರ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ