AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಿಂಗ್​ ಆಪರೇಷನ್​​ ಪ್ರಕರಣ: ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ

ಸ್ಟಿಂಗ್​ ಆಪರೇಷನ್​​ ಪ್ರಕರಣ: ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Oct 25, 2026 | 9:15 AM

Share

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಕೃಪಾ ಆಳ್ವಾ ವಿಚಾರಣೆ ನಡೆಸಿದ್ದು, ಉಳಿದ ಆರೋಪಿಗಳಾದ ಚಂದನ್ ಹಾಗೂ ಮೋಹನ್ ಗೌಡಗಾಗಿ ಶೋಧ ಮುಂದುವರಿಸಿದ್ದಾರೆ. ಪ್ರಕರಣದಲ್ಲಿ ಎಸ್. ಶಿವಸ್ವಾಮಿ ಎಂಬ ವ್ಯಕ್ತಿಯ ಪಾತ್ರ ಕೂಡ ಬೆಳಕಿಗೆ ಬಂದಿದೆ ಎನ್ನಲಾಗಿದೆ.

ಬೆಂಗಳೂರು, ಅಕ್ಟೋಬರ್​​ 25: ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಸ್ಟಿಂಗ್ ಆಪರೇಷನ್ ಪ್ರಕರಣ ಸಂಬಂಧ ಬೆಂಗಳೂರು ಸಿಸಿಬಿ ಪೊಲೀಸರು ಕೃಪಾ ಆಳ್ವಾ ವಿಚಾರಣೆ ನಡೆಸಿದ್ದಾರೆ. ಸಿಸಿಬಿ ನೋಟಿಸ್​ಗೂ ಮೊದಲೇ ವಿಚಾರಣೆಗೆ ಹಾಜರಾದ ಕೃಪಾ ಆಳ್ವಾ, ತಮಗೆ ಗೊತ್ತಿರುವ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಬೇರೆಯವರ ಪಾತ್ರ ಏನು? ಯಾವ ಉದ್ದೇಶಕ್ಕಾಗಿ ಈ ರೀತಿ ಮಾಡಲಾಗಿತ್ತು ಎಂಬ ಬಗ್ಗೆ ಸೈಬರ್ ಕ್ರೈಂ ಬ್ರ್ಯಾಂಚ್​​ ಪೊಲೀಸರು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಚಂದನ್, ಮೋಹನ್ ಗೌಡಗಾಗಿ ಪೊಲೀಸರ ಶೋಧ ಮುಂದುವರಿದಿದ್ದು, ಪ್ರಕರಣದಲ್ಲಿ ಎಸ್. ಶಿವಸ್ವಾಮಿ ಎಂಬ ವ್ಯಕ್ತಿಯ ಪಾತ್ರ ಕೂಡ ಬೆಳಕಿಗೆ ಬಂದಿರುವ ಮಾಹಿತಿ ಸಿಕ್ಕಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More