AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಭಾಷಣದ ವೇಳೆ ಅಜಾನ್: ಮಾತು ಅರ್ಧಕ್ಕೆ ನಿಲ್ಲಿಸಿ ಸೈಲೆಂಟ್ ಆಗಿ ನಿಂತ ಸಿದ್ದರಾಮಯ್ಯ, ವಿಡಿಯೋ ಇಲ್ಲಿದೆ

ಸಿಎಂ ಭಾಷಣದ ವೇಳೆ ಅಜಾನ್: ಮಾತು ಅರ್ಧಕ್ಕೆ ನಿಲ್ಲಿಸಿ ಸೈಲೆಂಟ್ ಆಗಿ ನಿಂತ ಸಿದ್ದರಾಮಯ್ಯ, ವಿಡಿಯೋ ಇಲ್ಲಿದೆ

ರಮೇಶ್ ಬಿ. ಜವಳಗೇರಾ
|

Updated on:Sep 02, 2024 | 7:41 PM

Share

​ಆಜಾನ್ ಕೂಗುತ್ತಿರುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ಮೌನವಾಗಿ ನಿಂತಿರುವ ಪ್ರಸಂಗ ಜರುಗಿದೆ. ಬೆಂಗಳೂರಿನ ಶಿವಾಜಿನಗರದಲ್ಲಿ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿದ ಬಳಿಕ ಭಾಷಣ ಆರಂಭಿಸುತ್ತಿದ್ದಂತೆಯೇ ​ಆಜಾನ್ ಶುರುವಾಗಿದೆ. ಕೂಡಲೇ ಸಿಎಂ ಮಾತು ನಿಲ್ಲಿಸಿ ಮೌನಕ್ಕೆ ಶರಣಾಗಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್ 02): ಮುಖ್ಯಮಂತ್ರಿ ಸಿದ್ದರಾಮಯ್ಯನವರ ಇಂದು (ಸೆಪ್ಟೆಂಬರ್ 02) ಬೆಂಗಳೂರಿನ ಶಿವಾಜಿನಗರದಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಉದ್ಘಾಟಿಸಿದರು. ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿ 4 ಕೋಟಿ ವೆಚ್ಚದಲ್ಲಿ 130 ಹಾಸಿಗೆಗಳುಳ್ಳ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದ್ದು, ಇದನ್ನು ಇಂದು ಅಧಿಕೃತವಾಗಿ ಸಿಎಂ, ಡಿಸಿಎಂ ಸೇರಿದಂತೆ ಸಚಿವರು ಶಾಸಕರು ಸೇರಿಕೊಂಡು ಉದ್ಘಾಟಿಸಿದರು. ಬಳಿಕ ಸಿಎಂ ಭಾಷಣ ಆರಂಭಿಸಿದರು. ಆದ್ರೆ, ಮತ್ತೊಂದೆಡೆ ​ಆಜಾನ್ ಶುರುವಾಗಿದೆ. ಆಜಾನ್ ಕೂಗು ಕೇಳಿಸಿದ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ನಿಲ್ಲಿಸಿ ಮೌನವಾಗಿ ನಿಂತರುವ ಪ್ರಸಂಗ ನಡೆದಿದೆ. ​ಆಜಾನ್​ ಮುಗಿಯುವವರೆಗೂ ಅಂದರೆ ಸುಮಾರು ಐದು ನಿಮಿಷಗಳ ಕಾಲ ಏನು ಮಾತನಾಡದೇ ಮೌನಕ್ಕೆ ಶರಣಾಗಿದ್ದಾರೆ. ನಂತರ ​ಆಜಾನ್ ಮುಗಿದ ಬಳಿಕ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ಮುಂದುವರಿಸಿದರು. ಇನ್ನು ​ಆಜಾನ್​ ವೇಳೆ ಸಿಎಂ ಭಾಷಣ ನಿಲ್ಲಿಸಿರುವ ವಿಡಿಯೋ ಇಲ್ಲಿದೆ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 02, 2024 07:35 PM

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More