Zero Traffic: ಬೆಂಗಳೂರಿನಲ್ಲಿ ತಮಗೆ ಜೀರೋ ಟ್ರಾಫಿಕ್ ಬೇಡ ಎಂದ ಸಿದ್ದರಾಮಯ್ಯ

ಸಾರ್ವಜನಿಕರಿಗೆ ತಮ್ಮಿಂದಾಗು ಕಿರಿಕಿರಿಗಳನ್ನು ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ.

Zero Traffic: ಬೆಂಗಳೂರಿನಲ್ಲಿ ತಮಗೆ ಜೀರೋ ಟ್ರಾಫಿಕ್ ಬೇಡ ಎಂದ ಸಿದ್ದರಾಮಯ್ಯ
ಸಿದ್ದರಾಮಯ್ಯ
Follow us
|

Updated on:May 21, 2023 | 7:01 PM

ಬೆಂಗಳೂರು: ಸಾರ್ವಜನಿಕರಿಗೆ ತಮ್ಮಿಂದಾಗು ಕಿರಿಕಿರಿಗಳನ್ನು ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಪ್ರಮುಖ ಹೆಜ್ಜೆ ಇರಿಸಿದ್ದಾರೆ. ತಾವು ಬೆಂಗಳೂರು ನಗರದೊಳಗೆ ಸಂಚಾರ ಮಾಡುವ ಸಂದರ್ಭದಲ್ಲಿ ಝೀರೋ ಟ್ರಾಫಿಕ್ (Zero Traffic) ವ್ಯವಸ್ಥೆ ಕಲ್ಪಿಸುವುದು ಬೇಡ ಎಂದು ಸಿದ್ದರಾಮಯ್ಯ ಅವರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ. ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರು ಟ್ವಿಟ್ಟರ್​ ಮೂಲಕ ಮಾಹಿತಿ ಹಂಚಿಕೊಂಡಿದ್ದು, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ನಗರದಲ್ಲಿ ಮುಖ್ಯಮಂತ್ರಿಗಳು ಓಡಾಡುವಾಗ ಅವರ ಸುಗಮ ಸಂಚಾರಕ್ಕೆ ಝೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದರಿಂದ ಸಿಗ್ನಲ್‌ಗಳಲ್ಲಿ ವಾಹನ ಸವಾರರು ಹತ್ತಾರು ನಿಮಿಷ ಸುಮ್ಮನೆ ಕಾಯುವಂತಾಗುತ್ತದೆ. ಇದು ಸಾರ್ವಜಕರಿಗೆ ತೊಂದರೆ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗುತ್ತದೆ. ಇದರಿಂದ ಎಚ್ಚೆತ್ತುಕೊಂಡ ಸಿದ್ದರಾಮಯ್ಯ ಅವರು ತಮಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದಿದ್ದಾರೆ.

ಸಿದ್ದರಾಮಯ್ಯ ಅವರು ಸಿಎಂ ಆಗಿ ಅಧಿಕಾರಿ ಸ್ವೀಕರಿಸಿದ ಒಂದೇ ದಿನದಲ್ಲಿ ಈ ನಿರ್ಧಾರ ಕೈಗೊಂಡು ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಬೆಂಗಳೂರಿನಲ್ಲಿ ತಮಗೆ  ಝಿರೋ ಟ್ರಾಫಿಕ್ ಬೇಡ ಎಂದಿದ್ದರು. ಇದೀಗ ಬೊಮ್ಮಾಯಿ ಮಾದರಿಯನ್ನು ಸಿದ್ದರಾಮಯ್ಯನವರೂ ಸಹ ಅನುಸರಿಸಿದ್ದಾರೆ.

Published On - 7:01 pm, Sun, 21 May 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು