‘ಪ್ರಾಣ ಭಯವಿದೆ’ ಎಂದಿರುವ ಸಿಡಿ ಯುವತಿ; ಬಿಎಸ್​ವೈ ಅವರೇ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ? ಸಿದ್ದರಾಮಯ್ಯ ಟ್ವೀಟ್

|

Updated on: Mar 29, 2021 | 11:10 AM

ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್​ ಮುಖ್ಯ ನ್ಯಾಯಾಧೀಶರಿಗೆ ಬರೆದಿದ್ದಾರೆ ಎನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಬಿಎಸ್​ವೈ ಅವರೇ ನಿಮ್ಮಸರ್ಕಾರ ಅಸ್ತಿತ್ವದಲ್ಲಿದೆಯೇ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ.

‘ಪ್ರಾಣ ಭಯವಿದೆ’ ಎಂದಿರುವ ಸಿಡಿ ಯುವತಿ; ಬಿಎಸ್​ವೈ ಅವರೇ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ? ಸಿದ್ದರಾಮಯ್ಯ ಟ್ವೀಟ್
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us on

ಬೆಂಗಳೂರು: ಸಿಡಿ ಪ್ರಕರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್​ ಮುಖ್ಯ ನ್ಯಾಯಾಧೀಶರಿಗೆ ಬರೆದಿದ್ದಾರೆ ಎನ್ನಲಾದ ಪತ್ರ ಗಾಬರಿ ಹುಟ್ಟಿಸುವಂತಿದೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರೇ ರಾಜ್ಯದಲ್ಲಿ ನಿಮ್ಮ ಸರ್ಕಾರ ಅಸ್ತಿತ್ವದಲ್ಲಿದೆಯೇ? ಎಂದು ವಿಪಕ್ಷ ನಾಯಕ ಸಿದ್ದರಾಯಯ್ಯ ಟ್ವೀಟ್​ನಲ್ಲಿ ಪೋಸ್ಟ್​ ಹಂಚಿಕೊಳ್ಳುವ ಮೂಲಕ ಪ್ರಶ್ನೆ ಮಾಡಿದ್ದಾರೆ.

ಮೊದಲ ಆಡಿಯೋದಲ್ಲಿ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದೆ ಎಂದು ಹೇಳಿದ್ದಳು. ಇದೀಗ ತನಗೆ ಪ್ರಾಣ ಭಯ ಇದೆ ಎಂದು ಪತ್ರ ಬರೆದಿದ್ದಾಳೆ. ಆ ಯುವತಿಯ ಪ್ರಾಣಕ್ಕೇನಾದರೂ ಅಪಾಯ ಎದುರಾದರೆ ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ,
ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಸರ್ಕಾರವೇ ಹೊಣೆ ಎಂದು ಟ್ವೀಟ್​ ಮಾಡಿದ್ದಾರೆ.

ಜೊತೆ ಜೊತೆಗೆ ಇನ್ನೊಂದು ಟ್ವೀಟ್​ ಹಂಚಿಕೊಂಡ ಅವರು, ಹೈಕೋರ್ಟ್ ಮುಖ್ಯನ್ಯಾಯಾಧೀಶರಿಗೆ ಸಂತ್ರಸ್ಥೆ ಯುವತಿ ಬರೆದ ಪತ್ರದಲ್ಲಿ ಎಸ್.ಐ.ಟಿ ಮೇಲೆಯೇ ಅಪನಂಬಿಕೆ ವ್ಯಕ್ತಪಡಿಸಿರುವುದು ಮಾತ್ರವಲ್ಲ, ಅವರು ಸಾಕ್ಷ್ಯನಾಶ ಮಾಡುತ್ತಿದ್ದಾರೆ. ತನ್ನ ವಿರೋಧಿಗಳ ಜೊತೆ ಶಾಮೀಲಾಗಿದ್ದಾರೆ ಎಂದೆಲ್ಲ ಆರೋಪಿಸಿರುವುದು ಗಂಭೀರವಾದ ವಿಷಯ ಎಂದು ಬರೆದುಕೊಂಡಿದ್ದಾರೆ.

ಯುವತಿಯಿಂದ ನಿರಂತರವಾಗಿ ವಿಡಿಯೋ, ಪತ್ರ ಬಿಡುಗಡೆಯಾಗುತ್ತಿವೆ. ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಹಾಗೂ ಪೊಲೀಸರು ನಿರಂತರವಾಗಿ ಸಭೆಗಳನ್ನ ನಡೆಸುತ್ತಿದ್ದಾರೆ. ಆದರೆ ಫಲಿತಾಂಶ ಏನಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಒಡ್ಡಿದ್ದಾರೆ.

ಸಿಡಿ ಬಹಿರಂಗಗೊಂಡು 27 ದಿನಗಳು ಕಳೆದು ಹೋಗಿದೆ. ಆದರೆ ಹಗರಣದ ಕೇಂದ್ರ ವ್ಯಕ್ತಿ ಯುವತಿ ವಿಚಾರಣೆ ಆಗಿಲ್ಲ. ಪೊಲೀಸರ ಈ ವೈಫಲ್ಯಕ್ಕೆ ಯಾರು ಹೊಣೆ? ಅವರ ಮೇಲೆ ಪ್ರಭಾವ ಬೀರುತ್ತಿರುವವರು ಯಾರು? ಕಾನೂನು ಸುವ್ಯವಸ್ಥೆ ಕುಸಿದಿರುವುದಕ್ಕೆ ಬೇರೆ ಸಾಕ್ಷಿ ಬೇಕೇ? ಎಂದು ಟ್ವೀಟ್ ಮೂಲಕ ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಅತ್ತ ಕೋರ್ಟ್​ಗೆ ಲೆಟರ್ ಬರೆದ ಸಿಡಿ ಯುವತಿ​, ಇತ್ತ ಎಸ್​ಐಟಿ ವಿಚಾರಣೆಗೆ ಹಾಜರಾದ ಎ1 ರಮೇಶ್​ ಜಾರಕಿಹೊಳಿ

ಇ ಮೇಲ್ ಮೂಲಕ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದ ಸಿಡಿ ಲೇಡಿ.. ವಿವರ ಇಲ್ಲಿದೆ