ಚಾಮರಾಜನಗರ ದುರ್ಘಟನೆಗೆ ರಾಜ್ಯ ಸರ್ಕಾರವೇ ಹೊಣೆ, ಘಟನೆ ಬಗ್ಗೆ ನ್ಯಾಯಾಂಗ ತನಿಖೆಯಾಗಲಿ; ಸಿದ್ದರಾಮಯ್ಯ

|

Updated on: May 03, 2021 | 4:54 PM

Siddaramaiah: ಕರ್ನಾಟಕದಲ್ಲಿ ಆಕ್ಸಿಜನ್ ಉತ್ಪಾದನೆ ಆಗುತ್ತದೆ. ಆದರೆ ಅದನ್ನು ಹೊರರಾಜ್ಯಗಳಿಗೆ ಕಳುಹಿಸಲಾಗುತ್ತದೆ. ಮೊದಲ ನಮ್ಮ ರಾಜ್ಯಕ್ಕೆ ಬೇಕಾದ ಆಕ್ಸಿಜನ್ ಇಟ್ಟುಕೊಳ್ಳಬೇಕು. ಕೂಡಲೇ ಸರ್ಕಾರ ಈ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸರ್ಕಾರವನ್ನು ತೀವ್ರವಾಗಿ ಆಗ್ರಹಿಸಿದರು.

ಚಾಮರಾಜನಗರ ದುರ್ಘಟನೆಗೆ ರಾಜ್ಯ ಸರ್ಕಾರವೇ ಹೊಣೆ, ಘಟನೆ ಬಗ್ಗೆ ನ್ಯಾಯಾಂಗ ತನಿಖೆಯಾಗಲಿ; ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ (ಸಂಗ್ರಹ ಚಿತ್ರ)
Follow us on

ಬೆಂಗಳೂರು: ಚಾಮರಾಜನಗರ ಆಸ್ಪತ್ರೆಯಲ್ಲಿ 24 ರೋಗಿಗಳ ಸಾವಿಗೆ ಸಿಎಂ ಬಿ.ಎಸ್‌.ಯಡಿಯೂರಪ್ಪ, ಆರೋಗ್ಯ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ಹರಿಹಾಯ್ದರು. ಈ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ನ್ಯಾಯಾಂಗ ತನಿಖೆಯಿಂದ ಮಾತ್ರ ಸತ್ಯ ಹೊರಬರಲು ಸಾಧ್ಯ. ಸಕಾಲದಲ್ಲಿ ಆಕ್ಸಿಜನ್ ನೀಡಿದ್ರೆ 24 ಜನರ ಪ್ರಾಣ ಉಳಿಯುತ್ತಿತ್ತು ಎಂದು ಅವರು ಆಗ್ರಹಿಸಿದರು.

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಿನಕ್ಕೆ 350 ಆಕ್ಸಿಜನ್ ಸಿಲೆಂಡರ್​ಗಳು ಅಗತ್ಯವಿದೆ. ಶುಕ್ರವಾರದಿಂದ ಆಕ್ಸಿಜನ್ ಸಮಸ್ಯೆ ಆಗಿದೆ. ಆದರೆ ಸರ್ಕಾರ ಸರಿಪಡಿಸುವ ಕೆಲಸ ಮಾಡಿಲ್ಲ. ಇದು ಚಾಮರಾಜ ನಗರ ಹಾಗೂ ಮೈಸೂರು ಡಿಸಿ ಸಂಪರ್ಕದಲ್ಲಿ ಇದ್ದು ಕೆಲಸ ಮಾಡಬೇಕಿತ್ತು. ಮೈಸೂರಿನ ಡಿಸಿ ಅಗತ್ಯ ಆಕ್ಸಿಜನ್ ಸಿಲೆಂಡರ್ ಪೂರೈಕೆ ಮಾಡಿಲ್ಲ. ಧ್ರುವನಾರಾಯಣ್ ಮತ್ತು ಸುರೇಶ್ ಕುಮಾರ್​ನ್ನು ಸಂಪರ್ಕ ಮಾಡುವ ಪ್ರಯತ್ನ ಮಾಡಿದ್ದಾರೆ. ಆದರೆ ಸಚಿವ ಸುರೇಶ್ ಕುಮಾರ್ ಸಿಕ್ಕಿಲ್ಲ. ಹೀಗಾಗಿ ಸರ್ಕಾರವೇ ಹೊಣೆ ಹೋರಬೇಕು ಎಂದು ಸಿದ್ದರಾ,ಯ್ಯ ಆಗ್ರಹಿಸಿದರು.

ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ವಿಡಿಯೋ ಕಾನ್ಫರೆನ್ಸ್​ನಲ್ಲಿ ಶಾಸಕರು ಸಂಸದರೆಲ್ಲ ಸೇರಿ 70 ಮಂದಿ ಭಾಗವಹಿಸಿದ್ದರು. ಆಕ್ಸಿಜನ್, ರೆಮ್​ಡೆಸಿವಿರ್, ಐಸಿಯು, ಬೆಡ್ ಸಿಗದೇ ಜನ ಸಾಯುತ್ತಿದ್ದಾರೆ ಎಂಬುದೇ ಎಲ್ಲರ ದೂರಾಗಿತ್ತು. ಬಹಳಷ್ಟು ಮಂದಿ ಆಕ್ಸಿಜನ್ ಇಲ್ಲದೇ ಸಾಯುತ್ತಿದ್ದಾರೆ. ಕರ್ನಾಟಕದಲ್ಲಿ ಆಕ್ಸಿಜನ್ ಉತ್ಪಾದನೆ ಆಗುತ್ತದೆ. ಆದರೆ ಅದನ್ನು ಹೊರರಾಜ್ಯಗಳಿಗೆ ಕಳುಹಿಸಲಾಗುತ್ತದೆ. ಮೊದಲ ನಮ್ಮ ರಾಜ್ಯಕ್ಕೆ ಬೇಕಾದ ಆಕ್ಸಿಜನ್ ಇಟ್ಟುಕೊಳ್ಳಬೇಕು. ಕೂಡಲೇ ಸರ್ಕಾರ ಈ ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಸರ್ಕಾರವನ್ನು ತೀವ್ರವಾಗಿ ಆಗ್ರಹಿಸಿದರು.

ಇದನ್ನೂ ಓದಿ: K Sudhakar Press Meet: ಆಕ್ಸಿಜನ್ ಕೊರತೆಯಿಂದ ಮೂವರು ಮಾತ್ರ ಸಾವನ್ನಪ್ಪಿದ್ದಾರೆ; ಸಚಿವ ಸುಧಾಕರ್ ಸ್ಪಷ್ಟನೆ

ಆಕ್ಸಿಜನ್ ವ್ಯತ್ಯಯ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಕೊವಿಡ್ ಸೋಂಕಿತರೂ ಸೇರಿ 22 ರೋಗಿಗಳ ಸಾವು

(Siddaramaiah urges judicial inquiry and Chief Minister and Health Minister resignation after Chamarajanagar medical oxygen incident)