AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೆ ಇದ್ದ ಮಾದರಿಯಲ್ಲಿ ಜಾತಿ ಸಿಂಧುತ್ವ ಪ್ರಮಾಣಪತ್ರ ನೀಡುವಂತೆ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ

ಸಿಂಧುತ್ವ ಪ್ರಮಾಣ ಪತ್ರ ಸಿಗದ ಹಿನ್ನೆಲೆ ಆತ್ಮಹತ್ಯೆ ಆರೋಪ ಹಿನ್ನೆಲೆ, ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಉತ್ತರ ನೀಡಿದ್ದಾರೆ. ಮೊದಲು ಜಿಲ್ಲಾಧಿಕಾರಿ ಸಿಂಧುತ್ವ ಪ್ರಮಾಣ ಪತ್ರ ನೀಡುತ್ತಿದ್ದರು. ಆದರೆ 12 ಜಾತಿಗಳಿಗೆ ಪ್ರಮಾಣ ಪತ್ರ ನೀಡುವ ವಿಚಾರ ಮಾಡಲಾಗಿತ್ತು.

ಹಿಂದೆ ಇದ್ದ ಮಾದರಿಯಲ್ಲಿ ಜಾತಿ ಸಿಂಧುತ್ವ ಪ್ರಮಾಣಪತ್ರ ನೀಡುವಂತೆ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
TV9 Web
| Edited By: |

Updated on: Mar 14, 2022 | 3:09 PM

Share

ಸಿಂಧುತ್ವ ಪ್ರಮಾಣ ಪತ್ರ (Caste Validity) ಸಿಗದ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ‌ ಕುಮಾರ ಚಿಂಚೋಳಿ ಗ್ರಾಮದ ಕೆಎಸ್ಆರ್‌ಟಿಸಿ ಚಾಲಕ ಓಂಕಾರ್ ಶೇರಿಕರ್ ಅವರ ಆತ್ಮಹತ್ಯೆ ಕುರಿತಾಗಿ ವಿಧಾನಸಭಾ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾತನಾಡಿದರು. ನಿನ್ನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಗೊಂಡಾ ಸಮಾಜದ ಒಂಕಾರ್ ರೇವಣ್ಣಪ್ಪ ಶೇರಿಕರ್ ಎಂಬುವ ಕೆಎಸ್ಆರ್‌ಟಿಸಿ ಚಾಲಕ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದು ಅತ್ಯಂತ ಬೇಸರದ ಸಂಗತಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಸರ್ಕಾರ 16/01/2021 ರಂದು ಸಿಂಧುತ್ವ ಪ್ರಮಾಣ ಪತ್ರ ಪಡೆಯಲು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದಿಂದ ಜಿಲ್ಲಾಧಿಕಾರಿಗಳು ವರದಿ ಪಡೆದು ಅದನ್ನು ಪರಿಶೀಲನೆ ಮಾಡಿ, ನಂತರ ಪ್ರಮಾಣ ಪತ್ರ ನೀಡಬೇಕು ಎಂದು ಆದೇಶ ಮಾಡಿದೆ. ಇದಕ್ಕೂ ಪೂರ್ವದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯ ವರದಿ ಪಡೆದು ನೀಡಲಾಗುತ್ತಿತ್ತು. ಈ ಸಿಆರ್‌ಇ ಸೆಲ್ ಜನರಿಗೆ ಕಿರುಕುಳ ನೀಡುತ್ತಿದೆ ಎಂಬ ಆರೋಪ ಬಹಳ ಹಿಂದಿನಿಂದಲೂ ಇತ್ತು. ಸರ್ಕಾರ ಮತ್ತೆ ಅವರಿಗೆ ಅಧಿಕಾರ ನೀಡಿ ಜನರನ್ನು ಇನ್ನಷ್ಟು ಸಮಸ್ಯೆಗೆ ನೂಕಿದೆ ಎಂದರು.

ಸಿಂಧುತ್ವ ಪ್ರಮಾಣ ಪತ್ರ ಸಿಗದ ಹಿನ್ನೆಲೆ ಆತ್ಮಹತ್ಯೆ ಆರೋಪ ಹಿನ್ನೆಲೆ, ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಉತ್ತರ ನೀಡಿದ್ದಾರೆ. ಮೊದಲು ಜಿಲ್ಲಾಧಿಕಾರಿ ಸಿಂಧುತ್ವ ಪ್ರಮಾಣ ಪತ್ರ ನೀಡುತ್ತಿದ್ದರು. ಆದರೆ 12 ಜಾತಿಗಳಿಗೆ ಪ್ರಮಾಣ ಪತ್ರ ನೀಡುವ ವಿಚಾರ ಮಾಡಲಾಗಿತ್ತು. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದಿಂದ ಮಾತ್ರ ಪತ್ರ ನೀಡಲಾಗುತ್ತಿತ್ತು. 12 ಜಾತಿಗಳಿಗೆ ಪ್ರಮಾಣ ಪತ್ರ ಕೊಡುವ ಆದೇಶ ಇದೆ. ಮಹಾರಾಷ್ಟ್ರದಲ್ಲಿ ಒಂದು ಪ್ರಕರಣ ಸಂಬಂಧ ಸುಪ್ರೀಂ ಆದೇಶ ಮಾಡಿದೆ. ಆ ಆದೇಶ ಗೊಂಡಾ ಸಮುದಾಯಕ್ಕೆ ಅನ್ವಯಿಸುತ್ತಾ? ಈ ಬಗ್ಗೆ ಪರಿಶೀಲಿಸಲು ಅಧಿಕಾರಿಗಳಿಗೆ ಹೇಳಿದ್ದೇನೆ. ಸರ್ಕಾರ ಹೊಸ ಆದೇಶದ ಬಗ್ಗೆ ಕಾನೂನು ಸಲಹೆ ಪಡೆಯಲಿದೆ. ಕಾನೂನು ಸಲಹೆ ಪಡೆದು ಕ್ರಮ ಕೈಗೊಳ್ಳಲಿದೆ. ಮೊದಲಿನ ವ್ಯವಸ್ಥೆ ಜಾರಿ ಮಾಡಲು ಆಗುತ್ತಾ ಎಂದು ಪರಿಶೀಲನೆ ಮಾಡಲಾಗುವುದು. ಇದನ್ನು ಸರಿಪಡಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವುದನ್ನು ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಮಾನವೀಯ ಆಧಾರದಲ್ಲಿ ಸರ್ಕಾರ ಪರಿಹಾರ ಕೊಡಲಿದೆ ಎಂದು ಸಿಎಂ ಹೇಳಿದ್ದಾರೆ.

ಮೃತ ಓಂಕಾರ್ ರೇವಣಪ್ಪ ಅವರು ಕೆಲಸಕ್ಕೆ ಸೇರಿ ಎಂಟು ವರ್ಷಗಳಾದರೂ ಸಿಂಧುತ್ವ ಪ್ರಮಾಣಪತ್ರ ಸಿಗದೆ ಜಿಲ್ಲಾಧಿಕಾರಿ, ತಾಲೂಕು ಕಚೇರಿಗೆ ಅಲೆಯುತ್ತಲೇ ಇದ್ದರು. ಈ ಮಧ್ಯೆ ಕೆಎಸ್ಆರ್‌ಟಿಸಿ ಡಿಪೋದಿಂದ ಪ್ರಮಾಣ ಪತ್ರ ಸಲ್ಲಿಸುವಂತೆ ಮೇಲಿಂದ ಮೇಲೆ ನೋಟಿಸ್ ಗಳನ್ನು ನೀಡಲಾಗಿತ್ತು. ಈ ಎಲ್ಲಾ ಕಿರುಕುಳಗಳಿಂದ ನೊಂದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೀದರ್ ಜಿಲ್ಲೆಯೊಂದರಲ್ಲೆ ಸುಮಾರು 150 ಜನರಿಗೆ ಸರ್ಕಾರಿ ನೌಕರಿಗೆ ಆಯ್ಕೆಯಾದರೂ ಈ ವರೆಗೆ ಸಿಂಧುತ್ವ ಪ್ರಮಾಣಪತ್ರ ನೀಡಲು ಸಾಧ್ಯವಾಗಿಲ್ಲ. ಹಾಗಾಗಿ ಸರ್ಕಾರ 16/01/2021 ರ ಆದೇಶವನ್ನು ಹಿಂಪಡೆಯಬೇಕು. ರಾಜಗೊಂಡ ಸಮುದಾಯದವರು ಎಸ್.ಟಿ ಮೀಸಲಾತಿ ಅಡಿ ಬರುತ್ತಾರೆ, ಕೋಲಿ, ಟೋಕ್ರೆ ಈ ಸಮಾಜದ ಜನರಿಗೂ ಮೀಸಲಾತಿ ಪತ್ರ ಸಿಗಬೇಕು. ಈಗ ಆತ್ಮಹತ್ಯೆಗೆ ಶರಣಾದ ಸರ್ಕಾರಿ ನೌಕರ ಓಂಕಾರ್ ರೇವಣಪ್ಪ ಅವರ ಕುಟುಂಬದವರಿಗೆ ಪರಿಹಾರ ಮತ್ತು ಸರ್ಕಾರಿ ನೌಕರಿ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಹೇಳಿದರು.

ಸರ್ಕಾರದ ಹೊಸ ಆದೇಶ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಲೇ ಇವೆ, ನಾನು ಕೂಡ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಆದೇಶ ಹಿಂಪಡೆಯುವಂತೆ ಸರ್ಕಾರಕ್ಕೆ ಎರಡು ಪತ್ರ ಬರೆದಿದ್ದೆ. ಸರ್ಕಾರ ಆದೇಶ ಹಿಂಪಡೆದಿದ್ದರೆ ಇನ್ನಷ್ಟು ಅಮಾಯಕ ಜನರ ಸಾವಿಗೆ ಕಾರಣವಾಗಬಹುದಾದ ಸಾಧ್ಯತೆಗಳನ್ನು ಅಲ್ಲಗಳೆಯಲು ಆಗಲ್ಲ. ತಕ್ಷಣ ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು.

ಇದನ್ನೂ ಓದಿ:

ಶಿರಸಿ ಮಾರಿಕಾಂಬಾ ದೇವಿ ಅದ್ದೂರಿ ಜಾತ್ರೆಗೆ ಸಿದ್ಧತೆ ಶುರು; ಮಾ.15 ರಿಂದ 23 ರ ವರೆಗೆ ನಡೆಯಲಿದೆ ಉತ್ಸವ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು