ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಉಚಿತವಾಗಿ ನೀಡಲು ಒತ್ತಾಯ; ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ದೇಶದ ಜನರಿಗೆ ಉತ್ತಮವಾದ ಆಹಾರವನ್ನು ನೀಡಿ. ಅದಾನಿ, ಅಂಬಾನಿಗೆ ಆಹಾರ ಧಾನ್ಯ ಸಂಗ್ರಹಣೆ ಮಾಡುವುದಕ್ಕೆ, ವಿತರಣೆ ಮಾಡುವುದಕ್ಕೆ ಅವಕಾಶವನ್ನು ನೀಡಿದ್ದೀರಿ. ಅವರು ಜನರನ್ನು ಹುರಿದು ಮುಕ್ಕಲು ಬಿಟ್ಟಿದ್ದೀರೆಂದು ಕಿಡಿಕಾರಿದ ಸಿದ್ದರಾಮಯ್ಯ, ರೈತರ ಬಳಿಯಿರುವ ಬಿಡಿಗಾಸು ಲೂಟಿ ಮಾಡಲು ಅವಕಾಶ ಮಾಡಿಕೊಟ್ಟು ಹಸಿರು ಶಾಲು ಹಾಕಿಕೊಂಡರೆ ಆಗುತ್ತಾ? ಅದು ರೈತ ಪ್ರೇಮವಾಗುತ್ತಾ? ಎಂದು ಪ್ರಶ್ನಿಸಿದ್ದಾರೆ.

ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಉಚಿತವಾಗಿ ನೀಡಲು ಒತ್ತಾಯ; ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
TV9 Web
| Updated By: sandhya thejappa

Updated on:Jun 05, 2021 | 3:55 PM

ಬೆಂಗಳೂರು: ಕೊರೊನಾ ಸಂಕಷ್ಟ ಹಿನ್ನೆಲೆ ಕೃಷಿ ಉಪಕರಣ ಖರೀದಿಗೆ ರೈತರ ಬಳಿ ಹಣ ಇಲ್ಲ. ಹೀಗಾಗಿ ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಉಚಿತವಾಗಿ ನೀಡಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ. ಬಿತ್ತನೆ ಬೀಜ ಸರಬರಾಜು ಆಗದ ಹಿನ್ನೆಲೆ ತೊಂದರೆಯಾಗುತ್ತಿದೆ. ಕೇವಲ ಬಾಯಿ ಮಾತಲ್ಲಿ ರಾಷ್ಟ್ರ ಪ್ರೇಮದ ಬಗ್ಗೆ ಮಾತಾಡಬೇಡಿ. ದೇಶದ ಜನರಿಗೆ ಉತ್ತಮವಾದ ಆಹಾರವನ್ನು ನೀಡಿ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ದೇಶದ ಜನರಿಗೆ ಉತ್ತಮವಾದ ಆಹಾರವನ್ನು ನೀಡಿ. ಅದಾನಿ, ಅಂಬಾನಿಗೆ ಆಹಾರ ಧಾನ್ಯ ಸಂಗ್ರಹಣೆ ಮಾಡುವುದಕ್ಕೆ, ವಿತರಣೆ ಮಾಡುವುದಕ್ಕೆ ಅವಕಾಶವನ್ನು ನೀಡಿದ್ದೀರಿ. ಅವರು ಜನರನ್ನು ಹುರಿದು ಮುಕ್ಕಲು ಬಿಟ್ಟಿದ್ದೀರೆಂದು ಕಿಡಿಕಾರಿದ ಸಿದ್ದರಾಮಯ್ಯ, ರೈತರ ಬಳಿಯಿರುವ ಬಿಡಿಗಾಸು ಲೂಟಿ ಮಾಡಲು ಅವಕಾಶ ಮಾಡಿಕೊಟ್ಟು ಹಸಿರು ಶಾಲು ಹಾಕಿಕೊಂಡರೆ ಆಗುತ್ತಾ? ಅದು ರೈತ ಪ್ರೇಮವಾಗುತ್ತಾ? ಎಂದು ಪ್ರಶ್ನಿಸಿದ್ದಾರೆ.

ಪತ್ರದ ಮುಖ್ಯಾಂಶಗಳು ಈ ವರ್ಷ ಕೇವಲ ಶೇ.19, ಅಂದರೆ 410 ಕ್ವಿಂಟಾಲ್ ಹೆಸರು ಕಾಳು ಬಿತ್ತನೆ ಬೀಜವನ್ನು ರೈತ ಸಂಪರ್ಕ ಕೇಂದ್ರಗಳಿಗೆ ವಿತರಣೆ ಮಾಡಲಾಗಿದೆ. ಕಳೆದ ವರ್ಷ ತುಮಕೂರಿಗೆ 851 ಕ್ವಿಂಟಾಲ್ ಕಾಳನ್ನು ವಿತರಿಸಿದ್ದರೆ, ಈ ವರ್ಷ ಕೇವಲ 90 ಕ್ವಿಂಟಾಲ್ ವಿತರಿಸಲಾಗಿದೆ. ಹಾಸನಕ್ಕೆ 618 ಕ್ವಿಂಟಾಲಿಗೆ ಬದಲಾಗಿ 87.5 ಕ್ವಿಂಟಾಲ್, ಮೈಸೂರಿಗೆ 418 ಕ್ವಿಂಟಾಲ್ ಬೇಡಿಕೆಗೆ ಬದಲಾಗಿ 165.50, ಚಾಮರಾಜನಗರಕ್ಕೆ 222 ಕ್ವಿಂಟಾಲಿನ ಬದಲು 67.5 ಕ್ವಿಂಟಾಲ್ ನೀಡಲಾಗಿದೆ. ಇದನ್ನು ದ್ರೋಹವೆನ್ನದೆ ಇನ್ನು ಯಾವ ಭಾಷೆಯಲ್ಲಿ ಹೇಳಬೇಕು? ಎಂದು ವಿಪಕ್ಷ ನಾಯಕ ಪ್ರಶ್ನಿಸಿದ್ದಾರೆ.

ಈ ವರ್ಷದ ಪೂರ್ವ ಮುಂಗಾರಿನಲ್ಲಿ ಮಳೆಯ ಪ್ರಮಾಣವೂ ಕಡಿಮೆಯಾಗಿಲ್ಲ. ಕಳೆದ ಬಾರಿ ಹೋಲಿಸಿದರೆ ಸರಾಸರಿಗಿಂತ ಶೇ. 15-20 ರಷ್ಟು ಹೆಚ್ಚು ಮಳೆಯಾಗಿದೆ. ಆದರೆ ಸರ್ಕಾರ ಬಿತ್ತನೆ ಬೀಜ ಸರಬರಾಜು ಮಾಡದೆ ತೊಂದರೆ ಮಾಡಿದೆ. ನನಗಿರುವ ಮಾಹಿತಿಯ ಪ್ರಕಾರ ಈ ವರ್ಷ ಬೇಡಿಕೆಯನ್ನು ಅಂದಾಜು ಮಾಡದೆ, ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜವನ್ನು ಸಂಗ್ರಹಣೆ ಮಾಡಿಕೊಳ್ಳದೆ ಮೈ ಮರೆಯಲಾಗಿದೆ. ಕಡೆಗೆ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕಳೆದ ವರ್ಷ ಬಿತ್ತನೆ ಬೀಜ ಪಡೆದ ರೈತರಿಗೆ ಈ ವರ್ಷ ನೀಡಲಾಗದು ಎಂದು ರೈತ ಸಂಪರ್ಕ ಕೇಂದ್ರಗಳಲ್ಲಿ ಹೇಳಿ ಕಳಿಸಿದ್ದಾರೆ. ಕೃಷಿ ಇಲಾಖೆಯೂ ಸಹ ಸುತ್ತೋಲೆಗಳನ್ನು ಹೊರಡಿಸಿದೆ.

ಈಗ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿತ್ತನೆ ಕೆಲಸಗಳು ಪ್ರಾರಂಭವಾಗುತ್ತವೆ. ಅಲ್ಲಿಗೂ ಸಹ ಸಾಕಷ್ಟು ಪ್ರಮಾಣದ ಬಿತ್ತನೆ ಕಾಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಗಳು ಬರುತ್ತಿವೆ. ನನಗೆ ಇರುವ ಮಾಹಿತಿ ಪ್ರಕಾರ ಕೃಷಿ ಇಲಾಖೆ 8,391 ಕ್ವಿಂಟಾಲಿಗೆ ಬದಲು ಕೇವಲ 5,000 ರಿಂದ 5,500 ಕ್ವಿಂಟಾಲ್ ಹೆಸರು ಕಾಳನ್ನು ವಿತರಿಸಲು ಈಗ ಹೊರಟಿದೆ. ಇದು ಸರಿಯಾದ ಕ್ರಮವಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

letter

ಇದನ್ನೂ ಓದಿ

Darshan: ಪ್ರಾಣಿಗಳನ್ನು ದತ್ತು ಪಡೆಯೋದು ಹೇಗೆ? ದರ್ಶನ್ ವಿಶೇಷ ಮನವಿಯಲ್ಲಿದೆ ಸಂಪೂರ್ಣ ಮಾಹಿತಿ

ಎಸ್ಎಸ್ಎಲ್​ಸಿ, ಪ್ರಥಮ ಪಿಯು ಅಂಕ ಪರಿಗಣಿಸಿ ದ್ವಿತೀಯ ಪಿಯುಸಿ ಫಲಿತಾಂಶ ನೀಡಿ: ಸಚಿವ ಎಸ್.ಸುರೇಶ್ ಕುಮಾರ್ ಸೂಚನೆ

(Siddaramaiah urges Yediyurappa to give free sow seed and fertilizer to farmers)

Published On - 3:23 pm, Sat, 5 June 21

14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು