ಶಿರಾಡಿ ಘಾಟಿಗೆ ಸಿದ್ದರಾಮಯ್ಯ ಭೇಟಿ: ಭೂ ಕುಸಿತದ ಬಗ್ಗೆ ಸ್ಥಳೀಯರ ಅಭಿಪ್ರಾಯ ಕೇಂದ್ರಕ್ಕೆ ತಿಳಿಸುತ್ತೇನೆಂದ ಸಿಎಂ

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದೊಡ್ಡತಪ್ಲು ಬಳಿ ಭೂಕುಸಿತ ಪ್ರದೇಶಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾತನಾಡಿದ ಅವರು, ರಾಷ್ಟ್ರೀಯ ಹೆದ್ದಾರಿ 75ರ ಮೇಲ್ಭಾಗದಲ್ಲಿ ಮಣ್ಣು ಸಡಿಲವಾಗಿರುವುದರಿಂದ ಪದೇಪದೇ ಕುಸಿಯುತ್ತಿದೆ. ಶಿರಾಡಿಘಾಟ್​ನಲ್ಲಿ ಹೆದ್ದಾರಿ ಸರಿಪಡಿಸುವಂತೆ ಪತ್ರ ಬರೆಯುವೆ ಎಂದಿದ್ದಾರೆ.

ಶಿರಾಡಿ ಘಾಟಿಗೆ ಸಿದ್ದರಾಮಯ್ಯ ಭೇಟಿ: ಭೂ ಕುಸಿತದ ಬಗ್ಗೆ ಸ್ಥಳೀಯರ ಅಭಿಪ್ರಾಯ ಕೇಂದ್ರಕ್ಕೆ ತಿಳಿಸುತ್ತೇನೆಂದ ಸಿಎಂ
ಶಿರಾಡಿ ಘಾಟಿಗೆ ಸಿದ್ದರಾಮಯ್ಯ ಭೇಟಿ: ಭೂ ಕುಸಿತದ ಬಗ್ಗೆ ಸ್ಥಳೀಯರ ಅಭಿಪ್ರಾಯ ಕೇಂದ್ರಕ್ಕೆ ತಿಳಿಸುತ್ತೇನೆಂದ ಸಿಎಂ
Edited By:

Updated on: Aug 03, 2024 | 4:41 PM

ಹಾಸನ, ಆಗಸ್ಟ್​ 3: ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿನಲ್ಲಿ (Shiradi ghat) ಪದೇ ಪದೆ ಭೂ‌ಕುಸಿತ ಹಿನ್ನೆಲೆ ಗುಡ್ಡ ಕುಸಿತ ಪ್ರದೇಶಕ್ಕೆ ಇಂದು ಸಿಎಂ ಸಿದ್ದರಾಮಯ್ಯ (Siddaramaiah) ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಶಿರಾಡಿ ಘಾಟಿಯ ಹಲವೆಡೆ ಗುಡ್ಡ ಕುಸಿತ‌ ಪ್ರದೇಶಗಳನ್ನು ಪರಿಶೀಲಿಸಿರುವ ಸಿಎಂ, ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾತನಾಡಿ ಅವರು, ರಾಷ್ಟ್ರೀಯ ಹೆದ್ದಾರಿ 75ರ ಮೇಲ್ಭಾಗದಲ್ಲಿ ಮಣ್ಣು ಸಡಿಲವಾಗಿದೆ. ಹೀಗಾಗಿ ಪದೇಪದೇ ಕುಸಿಯುತ್ತಿದೆ ಎಂದು ಹೇಳಿದ್ದಾರೆ.

ಶಿರಾಡಿಘಾಟ್​ನ ದೊಡ್ಡತಪ್ಲುನಲ್ಲಿ ಮಾಡಿದ ಅವರು, ಇದು ಅವೈಜ್ಞಾನಿಕ ಕಾಮಗಾರಿ ಹಾಗೂ ಭೂಕುಸಿತವಾಗುತ್ತಿದೆ. ಸ್ಥಳೀಯರ ಅಭಿಪ್ರಾಯವನ್ನು ಕೇಂದ್ರ ಸಚಿವರಿಗೆ ತಿಳಿಸುತ್ತೇನೆ ಎಂದಿದ್ದಾರೆ.

ಸಕಲೇಶಪುರ ಭಾಗದಲ್ಲಿ ವಾಡಿಕೆಗಿಂತ ಶೇ.65ರಷ್ಟು ಹೆಚ್ಚು ಮಳೆ ಆಗಿದೆ. ಶಿರಾಡಿಘಾಟ್​ನಲ್ಲಿ ಹೆದ್ದಾರಿ ಸರಿಪಡಿಸುವಂತೆ ಪತ್ರ ಬರೆಯುವೆ. ದೆಹಲಿಗೆ ಹೋದಾಗ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿಗೆ ಮನವರಿಕೆ ಮಾಡುವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಾಸನ: ಶಿರಾಡಿ ಘಾಟ್​​​ನಲ್ಲಿ ಭಾರೀ ಭೂಕುಸಿತ, ಮಣ್ಣಿನಡಿ‌ ಸಿಲುಕಿದ ಹಲವು ವಾಹನಗಳು

ಶಿರಾಡಿಘಾಟ್​ನಲ್ಲಿ ಮಣ್ಣು ಕುಸಿತದಿಂದ ವಾಹನ ಸಂಚಾರಕ್ಕೆ ಅಡ್ಡಿ ಆಗಿದೆ. 1 ಎಸ್​ಡಿಆರ್​ಎಫ್ ಟೀಮ್ ಇಲ್ಲೇ ನಿಯೋಜನೆ ಮಾಡಿದ್ದೇವೆ. ಬೇಕಿದ್ದರೆ ಹೆಚ್ಚಿನ ಭದ್ರತೆ ವಹಿಸುತ್ತೇವೆ. ಯಾಕೆ ಭೂ ಕುಸಿತ ಆಗುತ್ತಿದೆ ಎಂಬುದದರ ಬಗ್ಗೆ ಅಭಿಪ್ರಾಯ ಪಡೆದು ಕ್ರಮ ವಹಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: ಶಿರಾಡಿಘಾಟ್​ನಲ್ಲಿ ಭಾರೀ ಭೂಕುಸಿತ; ಮಣ್ಣಿನಡಿ ಸಿಲುಕಿದ ವಾಹನಗಳು

ಶಿರಾಡಿಘಾಟ್​ ರಸ್ತೆಯ ದೊಡ್ಡತಪ್ಪಲು ಬಳಿ ಗುಡ್ಡ ಕುಸಿಯುತ್ತಲೇ ಇದೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಂಟೇನರ್​​ ಹಾಗೂ ಹಲವು ವಾಹನಗಳ ಮೇಲೆ ಗುಡ್ಡ ಕುಸಿದಿತ್ತು. ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಕಾರ್ಯಾಚರಣೆ ಮಾಡಿ, ಮಣ್ಣು ತೆರವು ಮಾಡಿದ್ದರು ಮತ್ತೆ ಗುಡ್ಡ ಕುಸಿಯುತ್ತಿದೆ.

ಕೇರಳದಲ್ಲಿ ನೂರು ಮನೆ ನಿರ್ಮಿಸಿ ಕೊಡುತ್ತೇವೆ. ಕೇರಳದ ಮುಖ್ಯಮಂತ್ರಿ ಜೊತೆ ಮಾತನಾಡಿದ್ದೇನೆ. ಮನೆಗಳು ಕೊಚ್ಚಿ ಹೋಗಿವೆ, ಜೀವಗಳು ಹಾನಿಯಾಗಿವೆ. ಅವರಿಗೆ ಸಹಾಯ ಮಾಡಲು ಮನೆ ನಿರ್ಮಿಸಿ ಕೊಡುತ್ತೇವೆ. ಹತ್ತು ಕೋಟಿ ರೂ. ವೆಚ್ಚದಲ್ಲಿ ಮನೆ ನಿರ್ಮಾಣ ಮಾಡುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More
Loading...
Unable to load recommendations.
Follow Us