ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ, ಇದನ್ನು ಜನರೇ ಹೇಳುತ್ತಿದ್ದಾರೆ: ಶಾಸಕ ರಾಘವೇಂದ್ರ ಹಿಟ್ನಾಳ್

ಈ ಸಮಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರೆ ಪೂರಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದರು. ಸಿದ್ದರಾಮಯ್ಯ ಸಿಎಂ ಆಗಿಲ್ಲವೆಂಬ ಕೊರಗು ಜನರಲ್ಲಿದೆ ಎಂದು ಅವರು ಮಾಧ್ಯಮಗಳಿಗೆ ತಮ್ಮ ಅಭಿಪ್ರಾಯ ತಿಳಿಸಿದರು. 

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುತ್ತಾರೆ, ಇದನ್ನು ಜನರೇ ಹೇಳುತ್ತಿದ್ದಾರೆ: ಶಾಸಕ ರಾಘವೇಂದ್ರ ಹಿಟ್ನಾಳ್
ಸಿದ್ದರಾಮಯ್ಯ ಮತ್ತು ರಾಘವೇಂದ್ರ ಹಿಟ್ನಾಳ್
Follow us
TV9 Web
| Updated By: guruganesh bhat

Updated on: Jun 20, 2021 | 4:50 PM

ಕೊಪ್ಪಳ: ರಾಜ್ಯದಲ್ಲಿ ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ. ಈ ವಿಚಾರದಲ್ಲಿ ನನಗೆ 100ಕ್ಕೆ 200ರಷ್ಟು ನಂಬಿಕೆ ಇದೆ. ಜನ ಕೂಡ ಸಿದ್ದರಾಮಯ್ಯ ಸಿಎಂ ಆಗಬೇಕು ಎನ್ನುತ್ತಿದ್ದಾರೆ ಎಂದು ಕೊಪ್ಪಳದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಮೂಲಕ ನಿನ್ನೆಯಷ್ಟೇ ಸಿದ್ದರಾಮಯ್ಯ ಭಾವಿ ಮುಖ್ಯಮಂತ್ರಿ ಎಂದು ಶಾಸಕ ಜಮೀರ್ ಅಹ್ಮದ್ ಹೇಳಿಕೆ ನೀಡಿದ ಬೆನ್ನಲ್ಲೇ ಇನ್ನೋರ್ವ ಶಾಸಕ ಈ ಬೇಡಿಕೆ ಇಟ್ಟಂತಾಗಿದೆ.   ಶಾಸಕ ಜಮೀರ್ ಅಹ್ಮದ್, ಜನ ಹಾರೈಸಿದರೆ ಪಕ್ಷದ ಹೈಮಾಂಡ್​ನಿಂದ ಕೂಡ ಅವರನ್ನು ಮುಖ್ಯಮಂತ್ರಿ ಆಗುವುದರಿಂದ ತಡೆಯಲು ಸಾಧ್ಯವಿಲ್ಲ ಎಂಬರ್ಥದ ಹೇಳಿಕೆ ಮೂಲಕ ಕಾಂಗ್ರೆಸ್​ನ ಭಿನ್ನಮತಗಳಿಗೆ ಧ್ವನಿಯಾಗಿದ್ದರು. ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿಕೆ ಈ ಧ್ವನಿಗೆ ಇನ್ನೊಂದು ಟಿಸಿಲು ಮೂಡಿಸಿದೆ.

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಬೇಕು. ಇದನ್ನು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಒಬ್ಬರೇ ಅಲ್ಲ, ಕಾಂಗ್ರೆಸ್‌ನ ಎಲ್ಲ ಮುಖಂಡರು ಇದನ್ನೇ ಹೇಳುತ್ತಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಬೇಕೆಂದು ಹೇಳುತ್ತಾರೆ. ಕೊರೊನಾ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಈ ಸಮಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರೆ ಪೂರಕ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದರು. ಸಿದ್ದರಾಮಯ್ಯ ಸಿಎಂ ಆಗಿಲ್ಲವೆಂಬ ಕೊರಗು ಜನರಲ್ಲಿದೆ ಎಂದು ಅವರು ಮಾಧ್ಯಮಗಳಿಗೆ ತಮ್ಮ ಅಭಿಪ್ರಾಯ ತಿಳಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಅಧ್ಯಕ್ಷರಾಗಿ ವ್ಯಕ್ತಿ ಪೂಜೆ ಬೇಡ ಎಂದು ಹೇಳಿದ್ದಾರೆ. ಪಕ್ಷದ ಹಿತದೃಷ್ಟಿಯಿಂದ ಅವರು ಈ ಮಾತನ್ನು ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ಯಾವುದೇ ನಾಯಕತ್ವ ಗೊಂದಲ ಇಲ್ಲ. ರಾಜ್ಯದಲ್ಲಿ ಮತ್ತೆ ಒಳ್ಳೆಯ ಯೋಜನೆಗಳು ಬೇಕಾದರೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದರು. ನಾಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೊಪ್ಪಳ ಮತ್ತು ಯಲಬುರ್ಗಾಕ್ಕೆ ಆಗಮಿಸಲಿದ್ದಾರೆ. ಕೊಪ್ಪಳದಲ್ಲಿ‌ 15 ಸಾವಿರ ಹಾಗೂ ಯಲಬುರ್ಗಾದಲ್ಲಿ 10 ಸಾವಿರ ಕಿಟ್ ವಿತರಣೆ ಮಾಡಲಿದ್ದಾರೆ. ಗವಿ ಸಿದ್ದೇಶ್ವರ ಮಠ, ಹಾಗೂ ಇಂದಿರಾ ಕ್ಯಾಂಟಿನ್​ಗೆ ಭೇಟಿ ಕೊಡಲಿದ್ದಾರೆ ಎಂದು ಅವರು ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ತಿಳಿಸಿದರು.

ಸುದ್ದಿ ವಿಶ್ಲೇಷಣೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ, ಕಾಂಗ್ರೆಸ್​ನಲ್ಲಿ ಈಗಲೇ ಹಲವಾರು ಮುಖ್ಯಮಂತ್ರಿಗಳು!

ಮುಂದಿನ ಚುನಾವಣೆಗೆ ಕಾಂಗ್ರೆಸ್​ನ ಸಿಎಂ ಅಭ್ಯರ್ಥಿ ಯಾರು? ಕರ್ನಾಟಕದ ವಿಚಾರಕ್ಕೆ ಬಂದಾಗ, ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ವಿಚಾರ ದೊಡ್ಡ ಸವಾಲನ್ನೇ ತಂದೊಡ್ಡಲಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಮುಂದಿನ ಚುನಾವಣೆಗೆ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂದು ಹೇಳಿದರೆ ಪಕ್ಷಕ್ಕೆ ಮುಳುವಾಗಬಹುದು ಎಂದು ಬಿಜೆಪಿ ನಾಯಕರು ಚಿಂತಿಸುತ್ತಿದ್ದಾರೆ. ಆದರೆ ಕಾಂಗ್ರೆಸ್​  ಬೇರೆಯದೇ ಸಮಸ್ಯೆ ಎದುರಿಸುತ್ತಿದ್ದಾರೆ: ಅಧಿಕೃತ ವಿರೋಧ ಪಕ್ಷದಲ್ಲಿ ಈಗ problem of plenty ಎಂಬ ದೊಡ್ಡ ಸಮಸ್ಯೆ ಇದೆ. ಇದು ಹಗ್ಗದ ಮೇಲಿನ ನಡಿಗೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಅಷ್ಟು ಸುಲಭವಲ್ಲ. ಆದರೆ ಈ ನಿರ್ಣಯ ಆಗದ ಹೊರತು ಕಾಂಗ್ರೆಸ್​ ಪಕ್ಷಕ್ಕೆ ಸಿಗುತ್ತಿರುವ ಜನರ ಅನುಕಂಪ, ಆಡಳಿತಕ್ಕೆ ಬರಲು ಅನುಕೂಲವಾಗುವ mandate ಆಗಿ ಪರಿವರ್ತಿತವಾಗುತ್ತದೆ ಎಂದು ಹೇಳುವುದು ಕಷ್ಟವೇ ಆಗುತ್ತದೆ.

ಇದನ್ನೂ ಓದಿ: ಸುದ್ದಿ ವಿಶ್ಲೇಷಣೆ: ಶಾಸಕ ರಮೇಶ್ ಜಾರಕಿಹೊಳಿ ಈಗ ಎಲ್ಲಿದ್ದಾರೆ? ಏನು ಮಾಡುತ್ತಿದ್ದಾರೆ? ಇಲ್ಲಿದೆ ಕುತೂಹಲಕರ ವಿವರ

(Siddaramaiah will be next CM its 100 percent sure says Congress MLA Raghavendra Hitnal)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ