AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಮಿಕರು, ದೀಪಾಲಂಕಾರದ ಕೆಲಸಗಾರರು, ಫೋಟೋಗ್ರಾಫರ್​ಗಳಿಗೆ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

ಕರ್ನಾಟಕ ಸರ್ಕಾರಕ್ಕೆ ಹೋಟೆಲ್ ಕಾರ್ಮಿಕರು, ದೀಪಾಲಂಕಾರದ ಕೆಲಸಗಾರರು, ಫೋಟೋಗ್ರಾಫರ್ಗಳು ಸೇರಿ ಇನ್ನಿತರೆ ನಾನಾ ಜನ ಸಮುದಾಯಗಳು ಪಡುತ್ತಿರುವ ಕಷ್ಟ ಕಣ್ಣಿಗೆ ಬಿದ್ದಿಲ್ಲ. ಬೆಂಗಳೂರು ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಸಾವಿರಾರು ಹೋಟೆಲ್‍ಗಳು ಬಂದ್ ಆಗಿ ಮಾರಾಟಕ್ಕಿವೆ. ಹೋಟೆಲ್, ಕ್ಯಾಂಟೀನ್ ಕಟ್ಟಡಗಳ ಬಾಡಿಗೆ ಕಟ್ಟಲಾಗದೆ ಮಾಲೀಕರು ಪರಿತಪಿಸುತ್ತಿದ್ದಾರೆ.

ಕಾರ್ಮಿಕರು, ದೀಪಾಲಂಕಾರದ ಕೆಲಸಗಾರರು, ಫೋಟೋಗ್ರಾಫರ್​ಗಳಿಗೆ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆದ ಸಿದ್ದರಾಮಯ್ಯ
ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ
TV9 Web
| Updated By: ಆಯೇಷಾ ಬಾನು|

Updated on: Jun 23, 2021 | 2:45 PM

Share

ಬೆಂಗಳೂರು: ಹೋಟೆಲ್, ರೆಸಾರ್ಟ್, ವಸತಿಗೃಹಗಳ ಕೊರೊನಾ ಕಾಲದ ವಿದ್ಯುತ್, ನೀರಿನ ಶುಲ್ಕವನ್ನು ಮನ್ನಾ ಮಾಡುವುದು ಸೇರಿದಂತೆ ಈ ಉದ್ಯಮ ನೆಲಕಚ್ಚದಂತೆ ಅಗತ್ಯ ನೆರವನ್ನು ನೀಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದು ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಸರ್ಕಾರಕ್ಕೆ ಹೋಟೆಲ್ ಕಾರ್ಮಿಕರು, ದೀಪಾಲಂಕಾರದ ಕೆಲಸಗಾರರು, ಫೋಟೋಗ್ರಾಫರ್ಗಳು ಸೇರಿ ಇನ್ನಿತರೆ ನಾನಾ ಜನ ಸಮುದಾಯಗಳು ಪಡುತ್ತಿರುವ ಕಷ್ಟ ಕಣ್ಣಿಗೆ ಬಿದ್ದಿಲ್ಲ. ಬೆಂಗಳೂರು ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಸಾವಿರಾರು ಹೋಟೆಲ್‍ಗಳು ಬಂದ್ ಆಗಿ ಮಾರಾಟಕ್ಕಿವೆ. ಹೋಟೆಲ್, ಕ್ಯಾಂಟೀನ್ ಕಟ್ಟಡಗಳ ಬಾಡಿಗೆ ಕಟ್ಟಲಾಗದೆ ಮಾಲೀಕರು ಪರಿತಪಿಸುತ್ತಿದ್ದಾರೆ.

ಬ್ಯಾಂಕ್ ಸಾಲದ ಬಡ್ಡಿ ಬೆಳೆಯುತ್ತಲೆ ಇರುವ ಕಾರಣ ಸಣ್ಣ ಮತ್ತು ಮಧ್ಯಮ ಹೋಟೆಲ್‍ಗಳ ಮಾಲೀಕರು ಮಾತ್ರವಲ್ಲ ದೊಡ್ಡ ಹೋಟೆಲ್‍ಗಳ ಮಾಲೀಕರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದು ಕಡೆ ಹೋಟೆಲ್ ಕಾರ್ಮಿಕರು ಎರಡು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಇದೆ. ಬೆಂಗಳೂರು ನಗರ ಮತ್ತು ಅಕ್ಕ ಪಕ್ಕದ ನಾಲ್ಕೈದು ಜಿಲ್ಲೆಗಳಲ್ಲೇ 20 ಸಾವಿರಕ್ಕೂ ಅಧಿಕ ಮಂದಿ ಹೋಟೆಲ್ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಇವರ ಕುಟುಂಬ ನಿರ್ವಹಣೆ ಮಾಡಲಾಗದೆ ಸಂಕಷ್ಟದಲ್ಲಿದ್ದಾರೆ.

ಈ ಕಾರ್ಮಿಕರ ಮಕ್ಕಳು ಶಿಕ್ಷಣ ತೊರೆಯಬೇಕಾದ ಸ್ಥಿತಿ ಬಂದೊದಗಿದೆ. ಇಡಿ ಸೇವಾ ವಲಯವೆ ಸ್ಥಗಿತಗೊಂಡಿರುವುದರಿಂದ ಪ್ರವಾಸೋದ್ಯಮವನ್ನೆ ನೆಚ್ಚಿಕೊಂಡಿದ್ದ ವಸತಿ ಗೃಹಗಳ ಮಾಲೀಕರು ಮತ್ತು ಕೆಲಸಗಾರರೂ ದುಡಿಮೆ ಇಲ್ಲದೆ ಕಂಗಾಲಾಗಿದ್ದಾರೆ.

ಶುಭ ಕಾರ್ಯಗಳು ನಡೆಯದಿರುವುದರಿಂದ, ಧಾರ್ಮಿಕ ಕಾರ್ಯಗಳು, ಹಬ್ಬಗಳ ಆಚರಣೆಗೂ ಅವಕಾಶ ಇಲ್ಲವಾಗಿದ್ದರಿಂದ ಫೋಟೋಗ್ರಾಫರ್ಗಳು, ಡೆಕೊರೇಟರ್ಗಳು, ದೀಪದ ಅಲಂಕಾರ ಮಾಡುವ ಕೆಲಸಗಾರರು ಸೇರಿ ಪ್ರತಿಯೊಂದೂ ದುಡಿಯುವ ವರ್ಗದ ಸಹಸ್ರ ಸಹಸ್ರ ಕುಟುಂಬಗಳು ಕಣ್ಣೀರಲ್ಲಿ ಕೈತೊಳೆಯುತ್ತಿವೆ.

ಇವರೆಲ್ಲರ ಸಂಕಷ್ಟ ಮತ್ತು ನೋವುಗಳು ಸರ್ಕಾರಕ್ಕೆ ಕಾಣಬೇಕಿತ್ತು. ಸರ್ಕಾರ ಕುರುಡಾಗಿರುವುದರಿಂದ ಈ ಶ್ರಮಿಕ ವರ್ಗಗಳೆ ಸ್ವತಃ ಸರ್ಕಾರವನ್ನು ಇನ್ನಿಲ್ಲದಂತೆ ಒತ್ತಾಯಿಸುತ್ತಿದ್ದರೂ ಅವರಿಗೆ ಸೂಕ್ತವಾದ ನೆರವು ಸಿಕ್ಕಿಲ್ಲ.

ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿದ ಪ್ಯಾಕೇಜ್‍ನಲ್ಲಿ ಅರ್ಧದಷ್ಟು ಕೂಡ ತಲುಪಬೇಕಾದವರಿಗೆ ತಲುಪಲಿಲ್ಲ. ಕಾರ್ಮಿಕ ನಿಧಿ ಹೊರತುಪಡಿಸಿ ಕೇವಲ 800-900 ಕೋಟಿಯಷ್ಟು ಹಣ ನೆಪಮಾತ್ರಕ್ಕೆ ಹಂಚಿಕೆಯಾಗಿದೆ.

ಎರಡನೇ ಅಲೆ ಸಂದರ್ಭದಲ್ಲೂ ಸರ್ಕಾರ ಘೋಷಿಸಿರುವ 2 ಸಾವಿರ ಕೋಟಿ ರೂಗಳ ಪ್ಯಾಕೇಜ್ ರಾಜ್ಯದ ಜನರಿಗೆ ಮಾಡಿರುವ ಅವಮಾನ ಎಂದು ಮತ್ತೊಮ್ಮೆ ಹೇಳಬೇಕಾಗಿದೆ. ಈ 2 ಸಾವಿರ ಕೋಟಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಘೋಷಿಸಿರುವ ಅವರದೆ ಹಣದ ಪ್ಯಾಕೇಜ್ ಬಿಟ್ಟರೆ ಉಳಿಯುವುದು ಕೇವಲ 1500 ಕೋಟಿ ರೂಗಳು ಮಾತ್ರ. ಅತಿ ಕಡಿಮೆ ಪ್ಯಾಕೇಜು ಘೋಷಿಸಿದ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲಿಗೆ ನಿಂತಿದೆ ಎಂಬ ಆರೋಪದಿಂದ ಹೊರಬರಬೇಕಾದರೆ ರಾಜ್ಯ ಸರ್ಕಾರ ಈಗಲಾದರೂ ಉತ್ತಮ ಪ್ಯಾಕೇಜನ್ನು ಘೋಷಿಸಿ ಅಕ್ಕ ಪಕ್ಕದ ರಾಜ್ಯಗಳ ಮುಂದೆ ಮರ್ಯಾದೆ ಉಳಿಸಿಕೊಳ್ಳಬೇಕಿದೆ.

ಆದ್ದರಿಂದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ತಲಾ 10,000 ರೂಗಳನ್ನು ಘೋಷಿಸಬೇಕೆಂದು ಮತ್ತೊಮ್ಮೆ ಒತ್ತಾಯಿಸುತ್ತಿದ್ದೇನೆ. ಜೊತೆಗೆ ಈ ಕೆಳಕಂಡ ವಲಯಗಳ ಜನರೂ ಸಹ ಉಳಿದವರಂತೆ ತೀವ್ರ ಬಿಕ್ಕಟ್ಟಿನಲ್ಲಿದ್ದಾರೆ. ಆದ್ದರಿಂದ ಹೋಟೆಲ್, ವಸತಿ ಗೃಹ, ಫೋಟೋಗ್ರಾಫರ್ಗಳು, ಅಲಂಕಾರಿಕ ವೃತ್ತಿಯಲ್ಲಿ ತೊಡಗಿರುವವರಿಗೆ ತಕ್ಷಣ ಸೂಕ್ತ ಪ್ಯಾಕೇಜ್ ಘೋಷಣೆ ಮಾಡಬೇಕು.

ಹೋಟೆಲ್, ಕ್ಯಾಂಟೀನ್ ಮಾಲೀಕರ ಬ್ಯಾಂಕ್ ಸಾಲ ವಸೂಲಾತಿಯನ್ನು ಮುಂದೂಡಬೇಕು. ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು. ಜೊತೆಗೆ ಎಲ್ಲಾ ಉತ್ಪಾದಕ ಮತ್ತು ಸೇವಾ ವಲಯಗಳ ಜನರು ಮಾಡಿರುವ ಸಾಲದ ಮೇಲಿನ ಬಡ್ಡಿಯನ್ನೂ ಮನ್ನಾ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಸವಾಲ್​! ರಾಜ್ಯಪಾಲರು ಬಳಸಿದ ‘ಸೊನಾಟಾ ಗೋಲ್ಡ್’ ಕಾರು ಹರಾಜಿಗಿದೆ- ನೀವೂ ಒಂದ್ ಚಾನ್ಸ್ ನೋಡಿ..!

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?