ಆಶಾ ಕಾರ್ಯಕರ್ತೆಯರ ಕುಟುಂಬಗಳಿಗೆ ಪರಿಹಾರ ನೀಡಿ: ಮುಖ್ಯಮಂತ್ರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಸಿಬ್ಬಂದಿಗಳಲ್ಲಿ ಹಲವರು ಮರಣ ಹೊಂದಿದ್ದಾರೆ. ಅವರಲ್ಲಿ ಬಹುತೇಕರ ಕುಟುಂಬಗಳಿಗೆ ಇನ್ನೂ ಪರಿಹಾರ ನೀಡಿಲ್ಲ. ಅವರೆಲ್ಲರಿಗೂ ಕೂಡಲೇ ಪರಿಹಾರ ನೀಡಬೇಕು ಎಂದು ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರ ಕುಟುಂಬಗಳಿಗೆ ಪರಿಹಾರ ನೀಡಿ: ಮುಖ್ಯಮಂತ್ರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ
ವಿಪಕ್ಷ ನಾಯಕ ಸಿದ್ದರಾಮಯ್ಯ
Follow us
sandhya thejappa
|

Updated on: May 29, 2021 | 12:41 PM

ಬೆಂಗಳೂರು: ಆಶಾ ಕಾರ್ಯಕರ್ತೆಯರ ಕುಟುಂಬಗಳಿಗೆ ಪರಿಹಾರ ನೀಡಿ ಎಂದು ರಾಜ್ಯದ ಮುಖ್ಯಮಂತ್ರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಆಶಾ ಕಾರ್ಯಕರ್ತೆಯರು ನೇರವಾಗಿ ರೋಗಿಗಳ ಸಂಪರ್ಕದಲ್ಲಿರುತ್ತಾರೆ. ಅವರಿಗೆ ಮಾಸ್ಕ್, ಸ್ಯಾನಿಟೈಸರ್, ಅಗತ್ಯ ಔಷಧಗಳು ಮುಂತಾದವುಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ನೀಡಬೇಕು ಎಂದು ಒತ್ತಾಯಿಸಿದ ಸಿದ್ದರಾಮಯ್ಯ, ಕೊರೊನಾ ವಾರಿಯರ್ಸ್ ಎಂದು ಘೋಷಣೆ ಮಾಡಿದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಸಿಬ್ಬಂದಿಗಳಲ್ಲಿ ಹಲವರು ಮರಣ ಹೊಂದಿದ್ದಾರೆ. ಅವರಲ್ಲಿ ಬಹುತೇಕರ ಕುಟುಂಬಗಳಿಗೆ ಇನ್ನೂ ಪರಿಹಾರ ನೀಡಿಲ್ಲ. ಅವರೆಲ್ಲರಿಗೂ ಕೂಡಲೇ ಪರಿಹಾರ ನೀಡಬೇಕು ಎಂದು ಹೇಳಿದ್ದಾರೆ.

ಸಿಬ್ಬಂದಿಗಳಿಗೆ ಮಾರ್ಚ್ ತಿಂಗಳಿಂದ ಸಂಬಳವನ್ನೇ ನೀಡಿಲ್ಲ. ತಾಂತ್ರಿಕ ಕಾರಣಗಳನ್ನು ನೀಡಿ ಕೊರೊನಾ ಕಾಲದಲ್ಲೂ ಸಂಬಳ ನೀಡದಿರುವುದು ಅತ್ಯಂತ ಅಮಾನವೀಯ. ಕೂಡಲೇ ಎಲ್ಲರಿಗೆ ಸಂಬಳ ಬಿಡುಗಡೆ ಮಾಡಬೇಕು. ಪಲ್ಸ್ ಆಕ್ಸಿಮೀಟರ್​ನಂಥಹ ಅತ್ಯಂತ ಅಗತ್ಯ ಸಾಮಗ್ರಿಗಳನ್ನು ಒಂದು ಪಂಚಾಯತಿ/ ಒಬ್ಬರು ಆಶಾ ಕಾರ್ಯಕರ್ತೆಗೆ ಕೇವಲ ಒಂದೊಂದನ್ನು ಮಾತ್ರ ನೀಡಲಾಗಿದೆ. ಹೀಗೆ ಮಾಡುವುದರಿಂದಲೂ ಸೋಂಕು ಹಬ್ಬಲು ಕಾರಣವಾಗಬಹುದು. ಆದ್ದರಿಂದ ಇಂಥ ಸಾಮಾನ್ಯ ಸಂಗತಿಗಳನ್ನು ವೈಜ್ಞಾನಿಕವಾಗಿ ಅಂದಾಜು ಮಾಡಿ ಸಾಮಗ್ರಿಗಳನ್ನು ಕೊವಿಡ್ ವಾರಿಯರ್ಸ್​ಗಳಗೆ ಒದಗಿಸಿಕೊಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸೂಕ್ತವಾದ, ಗೌರವಯುತವಾದ ಸಂಬಳ, ಗೌರವಧನ, ಸಂಭಾವನೆಯನ್ನು ಹೆಚ್ಚಿಸಬೇಕು. ಕೊರೊನಾದಂಥ ಮಾರಣಾಂತಿಕ ಸೋಂಕನ್ನು ನಿಭಾಯಿಸುವಲ್ಲಿ ಮಾನವ ಸಂಪನ್ಮೂಲದ ಪಾತ್ರ ಬಹಳ ದೊಡ್ಡದು. ಅವರುಗಳನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳಬೇಕಾದುದು ಸರ್ಕಾರದ ಜವಾಬ್ದಾರಿ ಎಂದು ಭಾವಿಸಿ ಕೂಡಲೇ ಈಡೇರಿಸಬೇಕೆಂದು ಸಿದ್ದರಾಮಯ್ಯ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಇದನ್ನೂ ಓದಿ

ಇನ್ಮುಂದೆ ಉತ್ತರ ಕೊರಿಯಾದಲ್ಲಿ ಬೆಕ್ಕು ಕೂಗೋದಿಲ್ಲ, ಪಾರಿವಾಳ ಹಾರೋದಿಲ್ಲ; ಕೊರೊನಾ ನಿಯಂತ್ರಣಕ್ಕೆ ಕಿಮ್​ ಜಾಂಗ್​ ಉನ್ ಹೊಸ ಆದೇಶ

ಹೆಂಡತಿಗೆ ಸೋಂಕು ಬಂದು ಆಸ್ಪತ್ರೆಗೆ ಶಿಫ್ಟ್.. ಭಯದಿಂದ ಜಮೀನಿನಲ್ಲಿ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ

(Siddaramaiah wrote a letter to Karnataka Chief Minister demanding relief for the families of Asha activists)

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ