ಸಿದ್ದರಾಮಯ್ಯ ಆಪ್ತ, ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ

ನಿನ್ನೆ ಯಾದಗಿರಿ ಕ್ಷೇತ್ರದ ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ್​ ಅವರು ನಿಧನ ಹೊಂದಿದ್ದರು. ಇಂದು ಅದೇ ಜಿಲ್ಲೆಯ ಜಿಲ್ಲೆ ಶಹಾಪುರ ತಾಲೂಕಿನ ಹುಲ್ಕಲ್ ಗ್ರಾಮದವರಾದ ಸಿಎಂ‌‌ ಸಿದ್ದರಾಮಯ್ಯ ಆಪ್ತ, ಕಾಂಗ್ರೆಸ್ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಿದ್ದರಾಮಯ್ಯ ಆಪ್ತ, ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ
ಸಿದ್ದರಾಮಯ್ಯ ಆಪ್ತ, ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ
Updated By: ಗಂಗಾಧರ​ ಬ. ಸಾಬೋಜಿ

Updated on: Jul 23, 2024 | 10:50 PM

ಯಾದಗಿರಿ, ಜುಲೈ 23: ಸಿಎಂ‌‌ ಸಿದ್ದರಾಮಯ್ಯ (Siddaramaiah) ಆಪ್ತರಾಗಿದ್ದ ಕಾಂಗ್ರೆಸ್ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ (Marigowda Hulkal) ಹೃದಯಾಘಾತದಿಂದ ಮಂಗಳವಾರ ನಿಧನ ಹೊಂದಿದ್ದಾರೆ. ಜಿಲ್ಲೆಯ ಶಹಾಪುರ ತಾಲೂಕಿನ ಹುಲ್ಕಲ್ ಗ್ರಾಮದ ನಿವಾಸಿ. ಕುರುಬ ಸಮುದಾಯದ ಪ್ರಭಾವಿ ಮುಂಖಡರಾಗಿದ್ದರು. ಅವರ ನಿಧನದಿಂದ ಕುಟುಂಬಸ್ಥರು ಕಂಬನಿ ಮಿಡಿದಿದ್ದಾರೆ.

ಕಲಬುರಗಿ ತೊಗರಿ ಮಂಡಳಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಆದರೆ ತೊಗರಿ‌ ನಿಗಮ ಅಧ್ಯಕ್ಷ ಸ್ಥಾನ ನಿರಾಕರಿಸಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಅವರಿಗೂ ಆಪ್ತರಾಗಿದ್ದರು.  ಮರಿಗೌಡ ಪಾಟೀಲ್ ಹುಲ್ಕಲ್​  ಹಿಂದೆ‌ ಕುರಿ ಉಣ್ಣೆ ನಿಗಮ ಹಾಗೂ ಭೀಮರಾಯನಗುಡಿ ಕೃಷ್ಣ ಕಾಡಾ ಅಧ್ಯಕ್ಷರಾಗಿದ್ದರು.

ಸಚಿವ ಶರಣಬಸಪ್ಪ ದರ್ಶನಾಪುರ ಟ್ವೀಟ್ 

ಮರಿಗೌಡ ಪಾಟೀಲ್ ಹುಲ್ಕಲ್ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದು, ನನ್ನ ಅತ್ಯಂತ ಆತ್ಮೀಯರು, ಕರ್ನಾಟಕ ರಾಜ್ಯ ಕುರಿ-ಉಣ್ಣೆ ನಿಗಮ ಹಾಗೂ ಕೃಷ್ಣಾ ಕಾಡಾ ನಿಗಮಗಳ ಮಾಜಿ ಅಧ್ಯಕ್ಷರೂ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶ್ರೀ ಮರಿಗೌಡ ಹುಲಕಲ್ ಅವರ ಹಠಾತ್ ನಿಧನ ನಿಜಕ್ಕೂ ಆಘಾತ ತಂದಿದೆ. ಅವರ ನಿಧನದ ನೋವನ್ನು ತಡೆಯುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗಕ್ಕೆ ಹಾಗೂ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುವೆ ಎಂದು ಸಚಿವ ಶರಣಬಸಪ್ಪ ದರ್ಶನಾಪುರ ಟ್ವೀಟ್ ಮಾಡಿದ್ದಾರೆ.

ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ್ ನಿಧನ

ನಿನ್ನೆ ಯಾದಗಿರಿ ಕ್ಷೇತ್ರದ ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ್ ನಿಧನವಾಗಿದ್ದಾರೆ. ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ರೆಡ್ಡಿ ನಿನ್ನೆ ಮಧ್ಯಾಹ್ನ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ್ದಾರೆ. ಇಂದು ಸಕಲಾ ಸರ್ಕಾರಿ ಗೌರವದೊಂದಿಗೆ ಸ್ವಗ್ರಾಮದ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಿತ್ತು. ಗಣ್ಯರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:41 pm, Tue, 23 July 24