Siddaramaiah: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸಚಿವ ಮನ್ಸುಖ್ ಎಲ್. ಮಾಂಡವಿಯಾಗೆ ಪತ್ರ ಬರೆದ ಸಿದ್ಧರಾಮಯ್ಯ

ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ರಾಯಚೂರು ಜಿಲ್ಲೆಯಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಸಂಸ್ಥೆಯನ್ನು ಸ್ಥಾಪಿಸಲು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವ ಮನ್ಸುಖ್ ಎಲ್. ಮಾಂಡವಿಯಾ ಅವರಿಗೆ ಪತ್ರ ಬರೆದಿದ್ದಾರೆ.

Siddaramaiah: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸಚಿವ ಮನ್ಸುಖ್ ಎಲ್. ಮಾಂಡವಿಯಾಗೆ ಪತ್ರ ಬರೆದ ಸಿದ್ಧರಾಮಯ್ಯ
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jun 17, 2023 | 7:23 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ರಾಯಚೂರು ಜಿಲ್ಲೆಯಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಸಂಸ್ಥೆಯನ್ನು ಸ್ಥಾಪಿಸಲು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವ ಮನ್ಸುಖ್ ಎಲ್. ಮಾಂಡವಿಯಾ ಅವರಿಗೆ ಪತ್ರ ಬರೆದಿದ್ದಾರೆ. ಇದೀಗ ಈ ಬಗ್ಗೆ ಟ್ವಿಟರ್​​ನಲ್ಲಿ ಸಿದ್ಧರಾಮಯ್ಯ ಅವರು ಹಂಚಿಕೊಂಡಿದ್ದಾರೆ.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವ ಮನ್ಸುಖ್ ಎಲ್. ಮಾಂಡವಿಯಾ ಅವರೇ ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS)ನ್ನು ಸ್ಥಾಪಿಸಲು ಅನುಮತಿ ಮತ್ತು ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಮನವಿ ಮಾಡುತ್ತಿದ್ದೇನೆ ಎಂದು ಸಿದ್ಧರಾಮಯ್ಯ ಪತ್ರದಲ್ಲಿ ಬರೆದಿದ್ದಾರೆ.

ರಾಯಚೂರು ಮಹತ್ವಾಕಾಂಕ್ಷೆಯ ಜಿಲ್ಲೆ. ಇತರ ಪ್ರದೇಶಗಳಿಗೆ ಹೋಲಿಸಿದರೆ ಆರೋಗ್ಯ, ಶಿಕ್ಷಣ ಮತ್ತು ತಲಾ ಆದಾಯದ ಮಟ್ಟಗಳು ಇನ್ನೂ ಕೆಳಮಟ್ಟದಲ್ಲಿವೆ. ಈ ಪ್ರದೇಶವು ಭೌಗೋಳಿಕ ಅನಾನುಕೂಲತೆಯನ್ನು ಹೊಂದಿದೆ, ಏಕೆಂದರೆ ಇದು ಹವಾಮಾನ ವೈಪರೀತ್ಯಗಳು ಉಂಟಾಗುತ್ತದೆ. ಇಂತಹ ಸಮಸ್ಯೆಗಳನ್ನು ರಾಯಚೂರಿಗೆ ಅನುಭವಿಸುತ್ತಿದ್ದಾರ, ಈ ಕಾರಣಕ್ಕೆ ಜಿಲ್ಲೆಯಲ್ಲಿ ಸದೃಢವಾದ ವೈದ್ಯಕೀಯ ಸಂಸ್ಥೆಗಳ ಅಗತ್ಯ ಇದೆ. ಏಮ್ಸ್ ಸ್ಥಾಪನೆಯು ಈ ಪ್ರದೇಶದಲ್ಲಿ ವಿಶ್ವ ದರ್ಜೆಯ ಸೌಲಭ್ಯಗಳನ್ನು ನೀಡಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ವೈದ್ಯಕೀಯ ಕಾಲೇಜುಗಳು 2014 ರಿಂದ ದ್ವಿಗುಣಗೊಂಡಿದೆ, AIIMS 7 ರಿಂದ 22 ಕ್ಕೆ ಏರಿದೆ; ಕೇಂದ್ರ

ಈ ಪ್ರಸ್ತಾವನೆ ಕಾರ್ಯರೂಪಕ್ಕೆ ಬರುವಂತೆ ಜನ ಹಾಗೂ ಜನಪ್ರತಿನಿಧಿಗಳಿಂದ ಬೇಡಿಕೆ ವ್ಯಕ್ತವಾಗುತ್ತಿದೆ. ಕಲ್ಯಾಣ ಕರ್ನಾಟಕ ನಮ್ಮ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ.ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರೂ ಹಾಗೂ ನನ್ನ ಸಹೋದ್ಯೋಗಿ ಎನ್.ಎಸ್.ಬೋಸರಾಜು, ಸಹ ಈ ಕನಸನ್ನು ನನಸಾಗಿಸಲು ಒತ್ತಾಯಿಸಿ ನನಗೆ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ನೀವು ಪ್ರಮುಖ ನಿರ್ಧಾರವನ್ನು ಕೈಗೊಳ್ಳುತ್ತೀರಾ ಎಂಬ ನಂಬಿಕೆ ನನಗೆ ಇದೆ. ಈ ನಿಟ್ಟಿನಲ್ಲಿ ಸಂಬಂಧಿಸಿರುವ ಅಧಿಕಾರಿಗಳ ಗಮನಕ್ಕೆ ತರುವಂತೆ ಮತ್ತು ನಿಮ್ಮ ನಿರ್ದೇಶನದಂತೆ ಈ ಕಾರ್ಯ ನಡೆಯಬೇಕಿದೆ, ನಿಮ್ಮ ಉತ್ತರಕ್ಕೆ ನಾನು ಎದುರು ನೋಡುತ್ತಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ಪತ್ರದಲ್ಲಿ ಬರೆದಿದ್ದಾರೆ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್