AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ರಾಜಕೀಯಕ್ಕೆ ಸಿದ್ದರಾಮಯ್ಯ ನಿವೃತ್ತಿ ಘೋಷಣೆ ಬೆನ್ನಲ್ಲೇ ಆಪ್ತರು ಮತ್ತು ಅಭಿಮಾನಿಗಳಲ್ಲಿ ಆತಂಕ

Siddaramaiah Retirement From Electoral Politics: ಚುನಾವಣಾ ರಾಜಕೀಯದಿಂದ ಸಿದ್ದರಾಮಯ್ಯ ದೂರಸರಿಯಲು ನಿರ್ಧರಿಸಿದ್ದಾರೆ. ಅರ್ಥಾತ್ 2028ರ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ ಅಂತಾ ಘೋಷಿಸಿದ್ದಾರೆ. ಸಿದ್ದರಾಮಯ್ಯ ಈ ನಿವೃತ್ತಿ ಘೋಷಣೆ ಬೆನ್ನಲ್ಲೇ ಆಪ್ತರು ಮತ್ತು ಅಭಿಮಾನಿಗಳಲ್ಲಿ ಆತಂಕ ಶುರುವಾಗಿದೆ. ಈ ಕುರಿತಾಗಿ ಯಾರು ಏನು ಹೇಳಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

ಚುನಾವಣಾ ರಾಜಕೀಯಕ್ಕೆ ಸಿದ್ದರಾಮಯ್ಯ ನಿವೃತ್ತಿ ಘೋಷಣೆ ಬೆನ್ನಲ್ಲೇ ಆಪ್ತರು ಮತ್ತು ಅಭಿಮಾನಿಗಳಲ್ಲಿ ಆತಂಕ
ಮಾಜಿ ಸಿಎಂ ಸಿದ್ದರಾಮಯ್ಯImage Credit source: tv9 kannada
ನವೀನ್ ಕುಮಾರ್ ಟಿ.
| Edited By: |

Updated on: Jul 26, 2026 | 7:34 PM

Share

ಮುಖ್ಯಾಂಶಗಳು

  • ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ
  • 2028ಕ್ಕೆ ಸ್ಪರ್ಧಿಸಲ್ಲ ಎಂದ ಸಿದ್ದರಾಮಯ್ಯ
  • ಆಪ್ತರು ಮತ್ತು ಅಭಿಮಾನಿಗಳಲ್ಲಿ ಆತಂಕ

ಬೆಂಗಳೂರು, ಜುಲೈ 26: ಸಿದ್ದರಾಮಯ್ಯ (Siddaramaiah) ಮೇ 28ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದಿದ್ದರು. ಈಗಲೂ ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದಿರುವ ಅವರು, ಆದರೆ 2028ಕ್ಕೆ ಸ್ಪರ್ಧಿಸಲ್ಲ ಎಂದಿದ್ದಾರೆ. ಆ ಮೂಲಕ ಚುನಾವಣಾ ರಾಜಕೀಯದಿಂದ ಸಿದ್ದರಾಮಯ್ಯ ದೂರಸರಿಯಲು ನಿರ್ಧರಿಸಿದ್ದಾರೆ. ಈ ನಿರ್ಧಾರ ಇದೀಗ ಅವರ ಅಭಿಮಾನಿಗಳು ಸೇರಿದಂತೆ ಆಪ್ತರಲ್ಲಿ ಆತಂಕ ಮನೆ ಮಾಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ನಿವೃತ್ತಿ ಆದ್ರೆ ಮಾರ್ಗದರ್ಶಕರೇ ಇಲ್ಲದಂತಾಗುತ್ತೆ: ಶಾಸಕ ಬಸವರಾಜ ರಾಯರೆಡ್ಡಿ

ಈ ಕುರಿತಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಐಎಬಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ, ‘‘2028ಕ್ಕೆ ಚುನಾವಣೆಗೆ ನಿಲ್ಲುವುದಿಲ್ಲ ಅಂತಾ ಪತ್ರಿಕೆಯಲ್ಲಿ ನೋಡಿದ್ದೇನೆ, ಆದರೆ ಅವರು‌ ನಿವೃತ್ತಿಯಾಗಬಾರದು’’ ಎಂದರು

ಇದನ್ನೂ ಓದಿ: ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಹಿಂದಿನ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ

‘‘ಸಿದ್ದರಾಮಯ್ಯ ನಿವೃತ್ತಿ ಆದರೆ ರಾಜಕಾರಣದಲ್ಲಿ ಒಬ್ಬ ಸೂಕ್ತ ಮಾರ್ಗದರ್ಶಕರೇ ಇಲ್ಲದಂತಾಗುತ್ತೆ. ಇನ್ನೊಂದು ಚುನಾವಣೆ‌ಗೆ ಸ್ಪರ್ಧೆ ಮಾಡಲಿ ಅಂತಾ ಕೇಳಿಕೊಳ್ಳುವೆ’’ ಎಂದು ಹೇಳಿದರು.

ಸಿದ್ದರಾಮಯ್ಯನವರು ನಿವೃತ್ತಿ ಹೊಂದುವ ಪ್ರಶ್ನೆಯೇ ಇಲ್ಲ: ಜಿ.ಸಿ.ಚಂದ್ರಶೇಖರ್ 

ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಪ್ರತಿಕ್ರಿಯಿಸಿದ್ದು, ‘‘ಯಾವುದೇ ಕಾರಣಕ್ಕೂ ಸಿದ್ದರಾಮಯ್ಯನವರು ನಿವೃತ್ತಿಯಾಗಲ್ಲ. ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯನವರ ಅವಶ್ಯಕತೆ ಇದೆ. ಅವರು ರಾಜ್ಯ ಕಂಡಂತಹ ದೊಡ್ಡ ರಾಜಕಾರಣಿ. ಸಿದ್ದರಾಮಯ್ಯನವರು ನಿವೃತ್ತಿ ಹೊಂದುವ ಪ್ರಶ್ನೆಯೇ ಇಲ್ಲ. ಮುಂದೆ ಕೂಡ ಪಕ್ಷಕ್ಕೆ ಅವರ ಅವಶ್ಯಕತೆ ಇದೆ ಎನ್ನುವುದು ನನ್ನ ಭಾವನೆ’’ ಎಂದರು.

ರಾಹುಲ್ ಗಾಂಧಿ ಹೇಳಿದ್ರೆ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ: ಶಾಸಕ ಅಶೋಕ್ ಪಟ್ಟಣ್

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಅಶೋಕ್ ಪಟ್ಟಣ್, ‘‘ಚುನಾವಣೆಗೆ ನಿಲ್ಲದಿದ್ದರೂ ಪಕ್ಷದ ಪರ ಕೆಲಸ ಮಾಡುತ್ತಾರೆ. ಒಗ್ಗಟ್ಟಿನಿಂದ ಕೆಲಸ ಮಾಡಿದರೆ 100ಕ್ಕೆ 100ರಷ್ಟು ಗೆಲ್ಲುತ್ತೇವೆ. ರಾಹುಲ್ ಗಾಂಧಿ ಹೇಳಿದರೆ ನಾನು ರಾಜೀನಾಮೆ ಕೊಡುತ್ತೇನೆ ಎಂದಿದ್ದರು. ಈಗ ಅವರೇ ಕರೆದು ನೀವು ಕೆಲಸ ಮಾಡಿ ಅಂದರೆ ಮಾಡುತ್ತಾರೆ. ನೀವು ಚುನಾವಣೆಗೆ ನಿಲ್ಲಿ ಅಂದರೆ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ’’ ಎಂದು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬಿ.ಸಿ. ರೋಡ್‌ನಲ್ಲಿ ಹಿಂದೂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಅಂಗನವಾಡಿಯಲ್ಲಿ‌ ಸೊಳ್ಳೆ ಪರದೆ ಹಾಕಿಕೊಂಡು ಮಲಗಿದ ಮಕ್ಕಳು: ಸಚಿವ ಆಶ್ಚರ್ಯ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ
ಎಇಇ 16 ದಿನದಿಂದ ನಾಪತ್ತೆ: ಮಗನನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತ ತಂದೆ