AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಡಾ ಹಗರಣಕ್ಕೆ ಸಾಕ್ಷ್ಯ ನೀಡಿದ ಇಡಿ: ಸಿಎಂ ಸಿದ್ದರಾಮಯ್ಯಗೆ ಬಿಗಿಯಾದ ಉರುಳು

ಮುಡಾ ಭೂ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ 14 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿರುವುದಕ್ಕೆ ಇಡಿ ಸಾಕ್ಷಗಳನ್ನು ಸಂಗ್ರಹಿಸಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. 700 ಕೋಟಿ ರೂ. ಮೌಲ್ಯದ 1095 ನಿವೇಶನಗಳ ಅಕ್ರಮ ಹಂಚಿಕೆಯಾಗಿದೆ ಎಂದು ಇಡಿ ತನಿಖೆಯಲ್ಲಿ ಕಂಡುಕೊಂಡಿದೆ.

ಮುಡಾ ಹಗರಣಕ್ಕೆ ಸಾಕ್ಷ್ಯ ನೀಡಿದ ಇಡಿ: ಸಿಎಂ ಸಿದ್ದರಾಮಯ್ಯಗೆ ಬಿಗಿಯಾದ ಉರುಳು
ಮುಡಾ, ಸಿದ್ದರಾಮಯ್ಯ, ಇಡಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Dec 04, 2024 | 10:36 AM

Share

ಬೆಂಗಳೂರು, ಡಿಸೆಂಬರ್​ 04: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಉರುಳಾಗಿ ಪರಿಣಮಿಸಿರುವ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಮಹತ್ವದ ತಿರುವು ಪಡೆದುಕೊಂಡಿದೆ. ಮುಡಾದ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿಎಂ ಪಾರ್ವತಿ (Paravati) ಅವರಿಗೆ ಹಸ್ತಾಂತರಿಸಿರುವ ಹಿಂದೆ ಹಲವಾರು ಅವ್ಯವಹಾರಗಳು ನಡೆದಿರುವುದಕ್ಕೆ ಹಲವು ಪುರಾವೆಗಳನ್ನು ಜಾರಿ ನಿರ್ದೇಶನಾಲಯ (ED) ಪತ್ತೆ ಮಾಡಿದೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ.

ಮುಡಾದಿಂದ ಬೇನಾಮಿ ಹಾಗೂ ಇನ್ನಿತರೆ ವ್ಯವಹಾರಗಳ ಮೂಲಕ ಒಟ್ಟು 1095 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದ್ದು, ಇವುಗಳ ಮೌಲ್ಯ ಬರೊಬ್ಬರಿ 700 ಕೋಟಿ ರೂ. ಆಗಿದೆ. ಪಾರ್ವತಿ ಅವರಿಗೆ ಮಾಡಲಾದ ಭೂಪರಿವರ್ತನೆಯಲ್ಲಿ ಶಾಸನಬದ್ಧ ಮಾರ್ಗಸೂಚಿಗಳ ಉಲ್ಲಂಘನೆಯಾಗಿದೆ. ಸಾಕ್ಷ್ಯ ತಿರುಚುವಿಕೆಯ ಸಾಕ್ಷ ಲಭಿಸಿದೆ. ಕಚೇರಿ ಕಾರ್ಯ ವಿಧಾನಗಳ ಉಲ್ಲಂಘನೆ, ಅನವಶ್ಯಕ ಒಲವು ತೋರಿರುವುದು, ಪ್ರಭಾವದ ಬಳಕೆ, ಪೋರ್ಜರಿ ಮಾಡಿರುವುದಕ್ಕೆ ಸಾಕ್ಷ್ಯಗಳು ಇಡಿ ತನಿಖೆಯಲ್ಲಿ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಮುಡಾ ಹಗರಣದಲ್ಲಿ ಮಹತ್ವದ ಬೆಳವಣಿಗೆ; ರಾತ್ರೋರಾತ್ರಿ 48 ಸೈಟ್​ಗಳು ರದ್ದು

ಸಿಎಂ ಸಿದ್ದರಾಮಯ್ಯ ಆಪ್ತ ಸಹಾಯಕರಲ್ಲಿ ಒಬ್ಬರಾದ ಎಸ್​ಜಿ ದಿನೇಶ್​ ಕುಮಾರ್ ಅಲಿಯಾಸ್​ ಕುಮಾರ್​ ಅನಾವಶ್ಯಕ ಪ್ರಭಾವವನ್ನು ಬೀರಿದ್ದಾರೆ. ಭೂಮಿ ಕಳೆದುಕೊಳ್ಳುವವರ ಸೋಗಿನಲ್ಲಿ ಬೇನಾಮಿ ಅಥವಾ ನಕಲಿ ವ್ಯಕ್ತಿಗಳ ಹೆಸರಿನಲ್ಲಿ ನಿವೇಶನ ಹಂಚಲಾಗಿದೆ. ಈ ಅಕ್ರಮ ಹಂಚಿಕೆಯ ಫಲಾನುಭವಿಗಳು ರಿಯಲ್​ ಎಸ್ಟೇಟ್​ ಉದ್ಯಮಿಗಳು ಮತ್ತು ಪ್ರಭಾವಿ ವ್ಯಕ್ತಿಗಳಾಗಿದ್ದಾರೆ ಎಂದು ಇಡಿ ತನಿಖೆಯಲ್ಲಿ ತಿಳಿದುಬಂದಿದೆ.

ಪಾರ್ವತಿಯವರಿಗೆ ನಿವೇಶನ ಸಿಕ್ಕಾಗ ಅವರ ಪುತ್ರ ಯತೀಂದ್ರ ಮುಡಾ ಮಂಡಳಿಯಲ್ಲಿದ್ದರು. ಪತಿ ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದರು. ಮುಡಾದಿಂದ ಕೆಲವೊಂದು ನಿರ್ಮಾಣ ಕಾಮಗಾರಿ ನಡೆಸುತ್ತಿದ್ದ ಜಾಗವನ್ನೇ ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಖರೀದಿಸಿದ್ದಾರೆ ಎಂದು ಇಡಿ ತನಿಖೆಯಲ್ಲಿ ಪತ್ತೆಹಚ್ಚಿದೆ.

ಕೃಷಿ ಜಮೀನು ಎಂದು ತೋರಿಸಿ ಆ ಜಾಗವನ್ನು ಕೊಂಡುಕೊಂಡಿದ್ದಾರೆ. ಜಮೀನು ಮಾಲೀಕ ಮಾರುವ ಮುನ್ನವೇ ಮುಡಾ ಸೈಟ್​ ಪಡೆದಿದ್ದಾರೆ. ಪಾರ್ವತಿ ಅವರಿಗೆ ನಿವೇಶನವನ್ನು ಸಂಬಂಧಿಸಿದ ವಿಭಾಗ ಹಂಚಿಕೆ ಮಾಡಿಲ್ಲ. ಮುಡಾ ಆಯುಕ್ತರಾಗಿದ್ದ ನಟೇಶ್​ ಅವರು ಸ್ವ ಇಚ್ಛೆಯಿಂದ ಹಂಚಿದ್ದಾರೆ. ಪಾರ್ವತಿ ಅವರಿಗೆ ಯಾವ ಭಾಗದ ನಿವೇಶನ ನೀಡಬೇಕು ಎಂದು ಮುಡಾ ಆಯುಕ್ತರೇ ಆಯ್ಕೆಯನ್ನು ಮಾಡಿ, ಹಂಚಿಕೆ ಮಾಡಿದ್ದಾರೆ ಎಂದು ಇಡಿ ತನಿಖೆಯಲ್ಲಿ ತಿಳಿದು ಬಂದಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:04 am, Wed, 4 December 24

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ