AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ 300ಕ್ಕೂ ಅಧಿಕ ಮನೆಗಳ ತೆರವಿಗೆ ಕೋರ್ಟ್ ಆದೇಶ: ಆತಂಕದಲ್ಲಿ ನಿವಾಸಿಗಳು; ಆಗಿದ್ದೇನು?

Kalaburagi News: ನಗರದ ಆಳಂದ ಚೆಕ್ ಪೋಸ್ಟ್ ಬಳಿಯಿರುವ ಸಿದ್ಧರಾಮೇಶ್ವರ ಕಾಲೋನಿಯ ನಿವಾಸಿಗಳು ಇದೀಗ ತಮ್ಮ ಮನೆಗಳನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಸರ್ವೆ ನಂಬರ್ 36 ಮತ್ತು 95ರಲ್ಲಿರುವ ಒಟ್ಟು 13 ಎಕರೆ ಜಮೀನು ತನಗೆ ಸೇರಿದ್ದು ಎಂದು ಪಹಣಿ ಆಧಾರದ ಮೇಲೆ ಮಹ್ಮದ್ ಸಲೀಮುದ್ದಿನ್ ಎಂಬುವವರು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಕಲಬುರಗಿಯಲ್ಲಿ 300ಕ್ಕೂ ಅಧಿಕ ಮನೆಗಳ ತೆರವಿಗೆ ಕೋರ್ಟ್ ಆದೇಶ: ಆತಂಕದಲ್ಲಿ ನಿವಾಸಿಗಳು; ಆಗಿದ್ದೇನು?
ಆತಂಕದಲ್ಲಿ ನಿವಾಸಿಗಳುImage Credit source: tv9 kannada
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Jul 23, 2026 | 3:44 PM

Share

ಮುಖ್ಯಾಂಶಗಳು

  • ಮನೆಗಳ ತೆರವು ಆತಂಕದಲ್ಲಿ ಸಿದ್ದರಾಮೇಶ್ವರ ಕಾಲೋನಿ ನಿವಾಸಿಗಳು
  • 13 ಎಕರೆ ಜಮೀನು ತನ್ನದೆಂದು ಕೋರ್ಟ್ ಮೊರೆ ಹೋಗಿದ್ದ ಮಾಲೀಕ
  • ಮನೆ, ಕಟ್ಟಡಗಳ ತೆರವಿಗೆ ನೂರಾರು ನಿವಾಸಿಗಳು ತೀವ್ರ ವಿರೋಧ

ಕಲಬುರಗಿ, ಜುಲೈ 23: ಕಲಬುರಗಿ (kalaburagi) ನಗರದ ಆಳಂದ ಚೆಕ್ ಪೋಸ್ಟ್ ಬಳಿಕಯ ಸಿದ್ದರಾಮೇಶ್ವರ ಕಾಲೋನಿ ನಿವಾಸಿಗಳು (Residents) ಸದ್ಯ ಆತಂಕದಲ್ಲಿ ಇದ್ದಾರೆ. ಏಕೆಂದರೆ ಸಿಜೆಎಂ ಕೋರ್ಟ್ ಆದೇಶ ಹಿನ್ನೆಲೆ ಸರ್ವೆ ನಂಬರ್ 36 ಮತ್ತು 95ರಲ್ಲಿನ ಮನೆ ಮತ್ತು ಕಟ್ಟಡಗಳ ತೆರವಿಗೆ ಅಧಿಕಾರಿಗಳು ಮುಂದಾಗಿದ್ದಾರೆ. ಹೀಗಾಗಿ ಇದು ಕಾಲೋನಿ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ.

ನಡೆದಿದ್ದೇನು?

ಸಿದ್ದರಾಮೇಶ್ವರ ಕಾಲೋನಿಯಲ್ಲಿ ನಿವಾಸಿಗಳು ನೋಟರಿ ಮೇಲೆ ಸೈಟ್ ಖರೀದಿ ಮಾಡಿ ಮನೆ ಕಟ್ಟಿಕೊಂಡು ಸುಮಾರು 30ರಿಂದ 40 ವರ್ಷಗಳಿಂದ ವಾಸ ಮಾಡುತ್ತಿದ್ದಾರೆ. ಮೂಲ ಜಮೀನುದಾರರ ಬಳಿ ನೋಟರಿ ಅಗ್ರಿಮೆಂಟ್ ಮೇಲೆ ನಿವಾಸಿಗಳು ಸೈಟ್ ಖರೀದಿ ಮಾಡಿದ್ದಾರೆ.

ಕೋರ್ಟ್ ಮೊರೆ ಹೋಗಿದ್ದ ಜಮೀನು ಮಾಲೀಕ 

ಇದೇ ಜಮೀನಿನಲ್ಲಿ ಸದ್ಯ 300ಕ್ಕೂ ಅಧಿಕ ಮನೆಗಳು ಮತ್ತು ಕಟ್ಟಡಗಳು ನಿರ್ಮಾಣ ಆಗಿವೆ. ಆದರೆ ಇದೀಗ ಪಹಣಿ ಆಧಾರದ ಮೇಲೆ ಒಟ್ಟು 13 ಎಕರೆ ಜಮೀನು ತನ್ನದೆಂದು ಜಮೀನು ಮಾಲೀಕ ಮಹ್ಮದ್ ಸಲೀಮುದ್ದಿನ್​ ಜಮೀನು ಕಬ್ಜಾಗಾಗಿ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಕಟ್ಟಡಗಳ ತೆರವಿಗೆ ಆದೇಶ ನೀಡಿದೆ.

ಪ್ರಾಣ ಹೋದರೂ ಮನೆ, ಕಟ್ಟಡಗಳ ತೆರವು ಮಾಡಲು ಬಿಡಲ್ಲ ಎಂದ ನಿವಾಸಿಗಳು

ಇದೀಗ ಕೋರ್ಟ್ ಆದೇಶದಂತೆ ಪೊಲೀಸ್ ಬಂದೋಬಸ್ತ್​ನೊಂದಿಗೆ ಅಧಿಕಾರಿಗಳು ಮನೆ ಮತ್ತು ಕಟ್ಟಡಗಳ ತೆರವಿಗೆ ಮುಂದಾಗಿದ್ದರು. ಈ ವೇಳೆ ಮುಖ್ಯ ರಸ್ತೆ ಬಂದ್ ಮಾಡಿದ ನೂರಾರು ನಿವಾಸಿಗಳು ಮನೆ, ಕಟ್ಟಡಗಳ ತೆರವಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಪ್ರಾಣ ಹೋದರೂ ಮನೆಗಳ, ಕಟ್ಟಡಗಳ ತೆರವು ಮಾಡಲು ಬಿಡಲ್ಲ ಎಂದು ಪಟ್ಟು ಹಿಡಿದರು.

ಇದನ್ನೂ ಓದಿ: ಗೃಹ ಸಚಿವರ ತವರಲ್ಲೇ ಮತ್ತೆ ಮತ್ತೆ ಪರಾರಿಯಾಗ್ತಿದ್ದಾರೆ ಕೈದಿಗಳು! ಕಲಬುರಗಿ ಜೈಲಿನಿಂದ ಮೂವರು ಸಜಾ ಕೈದಿಗಳು ಎಸ್ಕೇಪ್

ಈ ವೇಳೆ ಸರ್ವೆ ಅಧಿಕಾರಿಗಳ ಜೊತೆ ನಿವಾಸಿಗಳ ಮಾತಿನ ಚಕಮಕಿ ಉಂಟಾಗಿದೆ. ತೀವ್ರ ವಿರೋಧ ಹಿನ್ನಲೆ ಮನೆ ಮತ್ತು ಕಟ್ಟಡಗಳ ತೆರವು ಮಾಡದೇ ಅಧಿಕಾರಿಗಳು ವಾಪಸ್ ತೆರಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ