Siddaramothsava: ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ 7,000 ಬಸ್​ಗಳು ಬುಕ್; ದಾವಣಗೆರೆಯಲ್ಲಿ ಬಿಗಿ ಬಂದೋಬಸ್ತ್

ಸಿದ್ದರಾಮೋತ್ಸವಕ್ಕಾಗಿ ರಾಜ್ಯಾದ್ಯಂತ ಬಸ್‌ಗಳು ಬುಕ್ ಆಗಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ 50, ಹಾವೇರಿಯಲ್ಲಿ 90, ಗದಗದಲ್ಲಿ 85 ಮತ್ತು ಧಾರವಾಡ ಜಿಲ್ಲೆಯಲ್ಲಿ 90 ಬಸ್‌ಗಳು ಬುಕ್ ಆಗಿವೆ.

Siddaramothsava: ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ 7,000 ಬಸ್​ಗಳು ಬುಕ್; ದಾವಣಗೆರೆಯಲ್ಲಿ ಬಿಗಿ ಬಂದೋಬಸ್ತ್
ಸಿದ್ದರಾಮಯ್ಯImage Credit source: Zee News
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 01, 2022 | 11:37 AM

ದಾವಣಗೆರೆ: ದಾವಣಗೆರೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರ 75ನೇ ಜನ್ಮದಿನಾಚರಣೆಯ ಸಿದ್ದರಾಮೋತ್ಸವ (Siddaramothsava) ಕಾರ್ಯಕ್ರಮಕ್ಕಾಗಿ ಭಾನುವಾರದವರೆಗೆ 325ಕ್ಕೂ ಹೆಚ್ಚು ವಾಯುವ್ಯ ರಸ್ತೆ ಸಾರಿಗೆ ಬಸ್‌ಗಳು ಸೇರಿದಂತೆ ಒಟ್ಟು 7,000 ಬಸ್​ಗಳು ಬುಕ್ ಆಗಿವೆ. ಆಗಸ್ಟ್ 3ರಂದು ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಕಾರ್ಯಕ್ರಮಕ್ಕಾಗಿ ಇನ್ನೂ ನೂರಾರು ಬಸ್‌ಗಳನ್ನು ಕಾಯ್ದಿರಿಸುವ ನಿರೀಕ್ಷೆಯಿದೆ. ದಾವಣಗೆರೆ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಿಂದ 6 ಸಾವಿರ ಕಾರ್ಯಕರ್ತರನ್ನು ಆಹ್ವಾನಿಸಿ ಕರೆದೊಯ್ಯಲು ಸಿದ್ಧತೆ ನಡೆದಿದೆ.

ಸಿದ್ದರಾಮೋತ್ಸವಕ್ಕಾಗಿ ರಾಜ್ಯಾದ್ಯಂತ ಬಸ್‌ಗಳು ಬುಕ್ ಆಗಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ 50, ಹಾವೇರಿಯಲ್ಲಿ 90, ಗದಗದಲ್ಲಿ 85 ಮತ್ತು ಧಾರವಾಡ ಜಿಲ್ಲೆಯಲ್ಲಿ 90 ಬಸ್‌ಗಳು ಬುಕ್ ಆಗಿವೆ. ಇದರಿಂದ ಸಾರಿಗೆ ಸಂಸ್ಥೆಗೆ ಅಂದಾಜು 39 ಲಕ್ಷ ರೂ.ಗಳ ಆದಾಯ ಬರುವ ನಿರೀಕ್ಷೆ ಇದೆ. ಸಿದ್ದರಾಮಯ್ಯ ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿ ಸ್ಥಾನಕ್ಕೇರುವ ಸಾಧ್ಯತೆ ಹೆಚ್ಚಿರುವುದರಿಂದ ಜನಪ್ರತಿನಿಧಿಗಳು ಮತ್ತು ಪಕ್ಷದ ಕಾರ್ಯಕರ್ತರು ಶಕ್ತಿ ಪ್ರದಶರ್ನಕ್ಕೆ ಮುಂದಾಗಿದ್ದಾರೆ.

ಇಂದು ಮಧ್ಯಾಹ್ನ ಸಭೆ: ಇಂದು ಮಧ್ಯಾಹ್ನ 1 ಗಂಟೆಗೆ ಸಿದ್ದರಾಮೋತ್ಸವ ಕಾರ್ಯಕ್ರಮದ ಸಮಿತಿಯೊಂದಿಗೆ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಸಿದ್ದರಾಮೋತ್ಸವ ಕಾರ್ಯಕ್ರಮದ ಕೊನೆಯ ಹಂತದ ರೂಪುರೇಷೆ ಬಗ್ಗೆ ಚರ್ಚೆ ನಡೆಯಲಿದೆ. ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 7,000 ಬಸ್ ವ್ಯವಸ್ಥೆ ಮಾಡಲಾಗಿದೆ. ಸಿದ್ದರಾಮೋತ್ಸವಕ್ಕೆ ಆಗಮಿಸುವವರಿಗೆ ಭೋಜನ, ವಸತಿ ವ್ಯವಸ್ಥೆಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಈ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗವಹಿಸುವುದು ಖಚಿತವಾದ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕ್ರಮದ ರೂಪುರೇಷೆ ಬಗ್ಗೆ ಸಮಿತಿ ಚರ್ಚೆ ನಡೆಸಲಿದೆ.

ಇದನ್ನೂ ಓದಿ: ಸಿದ್ದರಾಮೋತ್ಸವ ಮುಗಿಯುವವರೆಗೂ ಪಾದಯಾತ್ರೆ ಮಾಡಬಾರದು; ಡಿಕೆಶಿ ಬೆಂಬಲಿಗರಿಗೆ ಸಿದ್ದರಾಮಯ್ಯ ಬೆಂಬಲಿಗರಿಂದ ತಾಕೀತು

ಸಿದ್ದರಾಮಯ್ಯ ಅವರ ಕ್ಷೇತ್ರವಾಗಿರುವ ಜಿಲ್ಲೆಯ ಬಾದಾಮಿ ವಿಧಾನಸಭಾ ಕ್ಷೇತ್ರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಈ ಕಾರ್ಯಕ್ರಮಕ್ಕೆ ಸೇರುವ ನಿರೀಕ್ಷೆ ಇದೆ. ಆದರೆ, ಬಸ್‌ಗಳ ಅಲಭ್ಯತೆಯಿಂದಾಗಿ ಕ್ರಷರ್, ಟೆಂಪೋದಂತಹ ವಾಹನಗಳಲ್ಲಿಯೂ ಹಳ್ಳಿಗಳ ಜನರು ಆಗಮಿಸುವ ನಿರೀಕ್ಷೆಯಿದೆ. ಕಾಂಗ್ರೆಸ್​ನ ಕೆಲವು ನಾಯಕರು ತಮ್ಮ ಆಪ್ತರೊಂದಿಗೆ ತಮ್ಮದೇ ಸ್ವಂತ ವಾಹನದಲ್ಲಿ ತೆರಳಲು ಸಿದ್ಧರಾಗಿದ್ದಾರೆ.

‘ಕಾರ್ಯಕ್ರಮಕ್ಕೆ ಇನ್ನೂ ಮೂರು ದಿನ ಬಾಕಿ ಇದ್ದು, ಈಗಾಗಲೇ ಹಲವು ಮಂದಿ ಬಸ್ ಬುಕ್ಕಿಂಗ್ ಬಗ್ಗೆ ವಿಚಾರಿಸಿದ್ದಾರೆ. ಇನ್ನಷ್ಟು ಬಸ್​ಗಳು ಬುಕ್ ಆಗುವ ಸಾಧ್ಯತೆ ಇದೆ’ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯಕ್ರಮದ ವಿವರ: ಇದೇ ಆಗಸ್ಟ್ 3ರಂದು ದಾವಣಗೆರೆ ಶಾಮನೂರು ಪ್ಯಾಲೇಸ್ ಮೈದಾನದಲ್ಲಿ ನಡೆಯಲಿರುವ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಕಳೆದ ಎರಡು ವಾರಗಳಿಂದ ರಾತ್ರಿ ಹಗಲು ನಡೆಯುತ್ತಿರುವ ವೇದಿಕೆ, ಕಾರ್ಯಕರ್ತರಿಗೆ ಪೆಂಡಾಲ್, ಆಸನ, ಊಟದ ಸಿದ್ಧತೆ ಕೆಲಸಗಳು ಭರ್ಜರಿ ಸಾಗಿದೆ. ಈ ಕಾರ್ಯಕ್ರದಮ ಮುಖ್ಯ ವೇದಿಕೆಯಲ್ಲಿ ಆಗಸ್ಟ್ 3ರಂದು 2 ಗಂಟೆಗಳ ಕಾರ್ಯಕ್ರಮವಿರುತ್ತದೆ. ರಾಹುಲ್ ಗಾಂಧಿ, ಸಿದ್ದರಾಮಯ್ಯ , ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ್ ಖರ್ಗೆ, ಬಿಕೆ ಹರಿಪ್ರಸಾದ್ ಸೇರಿದಂತೆ ಎಲ್ಲಾ ಕಾಂಗ್ರೆಸ್ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 5 ಲಕ್ಷ ಕಾರ್ಯಕರ್ತರು ಕುಳಿತುಕೊಳ್ಳಲು ಕುರ್ಚಿಗಳ ವ್ಯವಸ್ಥೆ ಮಾಡಲಾಗಿದ್ದು ಎಲ್ಲಾ ಉಪವೇದಿಕೆಗಳಲ್ಲೂ ಕಾರ್ಯಕ್ರಮ ವೀಕ್ಷಿಸಲು ಬೃಹತ್ ಎಲ್ ಇ ಡಿ ಪರದೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ಆಡಳಿತ ನಡೆಸಲಾಗುತ್ತಿಲ್ಲ ಅಂತಾದ್ರೆ ಬೊಮ್ಮಾಯಿ ಅಧಿಕಾರ ಬಿಟ್ಟು ತೊಲಗಲಿ: ಸಿದ್ದರಾಮಯ್ಯ

ಈ ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಆಗಮಿಸುವುದರಿಂದ ದಾವಣಗೆರೆ ನಗರದ ಎಲ್ಲಾ ಲಾಡ್ಜ್, ಹೋಟೆಲ್ ಬುಕ್ ಆಗಿವೆ. ರಾಜ್ಯದ ಮೂಲೆ-ಮೂಲೆಯಿಂದ ಬರುವ ನಾಯಕರು, ಭದ್ರತಾ ಕಾರ್ಯಕ್ಕೆ ಬರುವ ರಕ್ಷಣಾ ಸಿಬ್ಬಂದಿ, ಮಾಧ್ಯಮ ಸಿಬ್ಬಂದಿ ಉಳಿದುಕೊಳ್ಳಲು ಕಾಂಗ್ರೆಸ್ ಮುಖಂಡರೇ ಎಲ್ಲಾ ಹೋಟೆಲ್ ಲಾಡ್ಜ್​​ಗಳನ್ನು ಬುಕ್ ಮಾಡಿದ್ದಾರೆ. ಲಕ್ಷಾಂತರ ಜನರು ಸೇರುವ ಹಿನ್ನೆಲೆಯಲ್ಲಿ ಈಗಾಗಲೇ ದಾವಣಗೆರೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು