ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ: ಪ್ರಧಾನಿ ಮೋದಿಗೆ ಆಹ್ವಾನ ನೀಡಲಾಗಿದೆ ಎಂದ ಎಂಬಿ ಪಾಟೀಲ್

ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ನಿಧನರಾಗಿ 2024ರ ಜನವರಿ 2ಕ್ಕೆ ಒಂದು ವರ್ಷ ಆಗುತ್ತಿರುವ ಹಿನ್ನೆಲೆ ಅಗಲಿದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ರೂಪರೇಷೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದ ನಂತರ ಮಾತನಾಡಿದ ಸಚಿವ ಎಂಬಿ ಪಾಟೀಲ್, ಜ್ಞಾನಯೋಗಾಶ್ರಮದ ಸ್ವಾಮೀಜಿಯವರು ಪ್ರಧಾನಿ ಮೋದಿಗೆ ಆಹ್ವಾನ ನೀಡಿದ್ದಾರೆ ಎಂದರು.

ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ: ಪ್ರಧಾನಿ ಮೋದಿಗೆ ಆಹ್ವಾನ ನೀಡಲಾಗಿದೆ ಎಂದ ಎಂಬಿ ಪಾಟೀಲ್
ಸಿದ್ದೇಶ್ವರ ಶ್ರೀ ಮತ್ತು ನರೇಂದ್ರ ಮೋದಿ
Edited By: Rakesh Nayak Manchi

Updated on: Dec 10, 2023 | 9:04 PM

ವಿಜಯಪುರ, ಡಿ.10: ಸಿದ್ದೇಶ್ವರ ಸ್ವಾಮೀಜಿ ನಿಧನರಾಗಿ 2024ರ ಜನವರಿ 2ಕ್ಕೆ ಒಂದು ವರ್ಷ ಆಗುತ್ತಿರುವ ಹಿನ್ನೆಲೆ ಅಗಲಿದ ಶತಮಾನದ ಸಂತ ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ರೂಪರೇಷೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದ ನಂತರ ಮಾತನಾಡಿದ ಸಚಿವ ಎಂ.ಬಿ. ಪಾಟೀಲ್ (M.B. Patil), ಜ್ಞಾನಯೋಗಾಶ್ರಮದ ಸ್ವಾಮೀಜಿಯವರು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೂ ಆಹ್ವಾನ ನೀಡಿದ್ದಾರೆ ಎಂದರು.

ಗುರುನಮನ ಕಾರ್ಯಕ್ರಮ ಆಯೋಜನೆ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಅವರು ಇಂದು ಕಾರ್ಯಕ್ರಮದ ರೂಪರೇಷೆಗಳ ಕುರಿತು ಚರ್ಚೆ ನಡೆಸಲು ಸಭೆ ನಡೆಸಿದ್ದಾರೆ. ಗುರುನಮನದ ಮೂಲಕ ಸ್ಮರಣೆ ಹಾಗೂ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಗೂ ಆಹ್ವಾನ ನೀಡಲಾಗಿದೆ.

ಇದನ್ನೂ ಓದಿ: ಸಚಿವ ಎಂಬಿ ಪಾಟೀಲ್ ಪರ ರಂಭಾಪುರಿ ಶ್ರೀ ಬ್ಯಾಟಿಂಗ್: ಸಿದ್ದರಾಮಯ್ಯ ವಿರುದ್ಧ ಅಸಮಾಧಾನ

ಜ್ಞಾನಯೋಗಾಶ್ರಮದ ಸ್ವಾಮೀಜಿ ಅವರು ಪ್ರಧಾನಿ ಮೋದಿಗೆ ಆಹ್ವಾನ ನೀಡಿದ್ದಾರೆ ಎಂದು ಸಭೆಯಲ್ಲಿ ಎಂ.ಬಿ.ಪಾಟೀಲ್​ ಮಾಹಿತಿ ನೀಡಿದರು. ಜ.2ರಂದು ನಡೆಯುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಭಾಗಿಯಾಗಲಿದ್ದಾರೆ. ಡಿಸೆಂಬರ್ 21 ರಿಂದ ಡಿಸೆಂಬರ್ 31ರ ವರೆಗೆ ವಿಶೇಷ ಗೋಷ್ಠಿಗಳನ್ನು ಆಯೋಜನೆ ಮಾಡಲಾಗುವುದು ಎಂದರು.

ಆಶ್ರಮದ ಆವರಣದಲ್ಲಿ ಗೋಷ್ಠಿಗಳ ಕಾರ್ಯಕ್ರಮ ನಡೆಸಲು ತೀರ್ಮಾನ ಮಾಡಲಾಗಿದೆ. ಶ್ರೀಸಿದ್ದೇಶ್ವರ ಶ್ರೀಗಳ ಆಶಯಕ್ಕೆ ಧಕ್ಕೆಯಾಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದರು. ಸಭೆಯಲ್ಲಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಬಸವಲಿಂಗ ಸ್ವಾಮೀಜಿ ಇದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us