19ನೇ ವಯಸ್ಸಿನಲ್ಲಿ ಫಸ್ಟ್ ಪುಸ್ತಕ ಬರೆದು ತಮ್ಮ ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದ ಮಹಾನ್ ಸಂತ ಸಿದ್ದೇಶ್ವರ ಸ್ವಾಮೀಜಿ
ಈಗಿನ ಕಾಲದಲ್ಲಿ ಬೇರೆಯವರಿಂದ ಬುಕ್ ಬರೆಯಿಸಿ ತಮ್ಮ ಹೆಸರಿನಲ್ಲಿ ಪ್ರಕಟಿಸಿಕೊಳ್ಳುವವರು ಇದ್ದಾರೆ. ಆದರೆ, ಸಿದ್ದೇಶ್ವರ ಸ್ವಾಮೀಜಿ ಈ ಹಿಂದೆ ತಾವು 19ನೇ ವಯಸ್ಸಿನಲ್ಲೇ ಮೊದಲ ಪುಸ್ತುಕವನ್ನು ಬರೆದು ತಮ್ಮ ಗುರುಗಳ ಹೆಸರಿನಲ್ಲಿ ಪ್ರಕಟಿಸಿದ್ದರು.
ವಿಜಯಪುರ: ಖ್ಯಾತ ಪ್ರವಚನಕಾರರು, ನಡೆದಾಡುವ ದೇವರು, ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು(Siddeshwara Swamiji) ಇಹಲೋಕ ತ್ಯಜಿಸಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸ್ವಾಮೀಜಿ ವೈಕುಂಠ ಏಕಾದಶಿ ದಿನದಂದೇ(ಜನವರಿ 02) ಅದು ಸೂರ್ಯನ ಜೊತೆಗೆ ಅಸ್ತಂಗತರಾಗಿದ್ದಾರೆ. ಸರಳವಾದ ಸ್ಪೂರ್ತಿದಾಯಕ ಜೀವನ ಶೈಲಿಯನ್ನು ಹೊಂದಿದ್ದ ಸಿದ್ದೇಶ್ವರ ಸ್ವಾಮೀಜಿ, 19 ವಯಸ್ಸಿನಲ್ಲೇ ಒಂದು ಪುಸ್ತಕವನ್ನು ಬರೆದಿದ್ದರಿ. ವಿಶೇಷ ಏನು ಅಂದ್ರೆ ಆ ಪುಸ್ತಕ ತಮ್ಮ ಹೆಸರಿನಲ್ಲಿ ಪ್ರಕಟಿಸಲಿಲ್ಲ ಬದಲಾಗಿ ತಮ್ಮ ಗುರುಗಳ ಹೆಸರಿನಲ್ಲಿ ಪ್ರಕಟಿಸಿದ್ದರು.
ಹೌದು.. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ನಂತರ ಸ್ನಾತಕೋತ್ತರ ವಿದ್ಯಾಭ್ಯಾಸಕ್ಕೆ ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಉನ್ನತ ಶ್ರೇಣಿಯಲ್ಲಿ ಪಾಸ್ ಮಾಡಿದ್ದರು. ಆದ್ರೆ, ಎಂ.ಎ. ಪದವಿಯ ಅಭ್ಯಾಸದ ಸಮಯದಲ್ಲಿ ಶ್ರೀ ಸಿದ್ಧೇಶ್ವರರರು ಕೊಲ್ಹಾಪುರದಲ್ಲಿ ಶ್ರೀ ವಿಜಯ ಪಾಟೀಲರ ಮನೆಯಲ್ಲಿ ವಾಸವಿದ್ದರು. ಆ ಅವಧಿಯಲ್ಲಿಯೇ ತಮ್ಮ ಗುರುಗಳಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ “ಸಿದ್ದಾಂತ ಶಿಖಾಮಣಿ “ಎಂಬ ಪುಸ್ತಕ ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು.ಆಗ ಅವರಿಗೆ ಕೇವಲ 19 ವರ್ಷ ಮಾತ್ರ ಆಗಿತ್ತೆಂಬುದು ಗಮನಾರ್ಹ.
ಸಿದ್ದೇಶ್ವರರ ಮಾತು ಎಂದರೆ ಮಲ್ಲಿಕಾರ್ಜುನ ಸ್ವಾಮಿಗಳಿಗೆ ಬಲು ಪ್ರೀತಿ. ಆತ ಮಹಾ ಬುದ್ದಿವಂತ, ಆಧ್ಯಾತ್ಮಿಕದಂತೆ ಲೌಕಿಕ ವಿಷಯಗಳಲ್ಲೂ ವಿಶೇಷ ಪರಿಜ್ಞಾನವಿದೆ. ಮುಂದೆ ಜಗತ್ತಿಗೇ ದೊಡ್ಡವನಾಗುತ್ತಾನೆ ಎಂದು ವಿಶ್ವಾಸದಿಂದ ಎಲ್ಲರೆದುರು ಹೇಳುತ್ತಿದ್ದರು. ಸ್ನಾತಕೋತ್ತರ ಪದವಿ ಪಡೆದು ವಿಜಯಪುರಕ್ಕೆ ಹಿಂದಿರುಗಿದ ನಂತರ ಸಿದ್ದೇಶ್ವರರಿಗೆ ಭಗವದ್ಗೀತೆಯ ಬಗ್ಗೆ, ಉಪನಿಷತ್ತುಗಳ ಬಗ್ಗೆ ಮಲ್ಲಿಕಾರ್ಜುನ ಸ್ವಾಮಿಗಳು ವ್ಯಾಖ್ಯಾನವನ್ನು ನೀಡಿ ಅವರ ಜ್ಙಾನದಿಗಂತವನ್ನು ವಿಸೃತಗೊಳಿಸಿದರು. ಪೂಜ್ಯರು ಉಪನಿಷತ್ತುಗಳು, ಭಗವದ್ಗೀತೆ,ಯೋಗಸೂತ್ರ,ವಚನಶಾಸ್ತ್ರ ಮುಂತಾದ ವಿಷಯಗಳ ಬಗೆಗೆ ತಾವು ಹೇಗೆ ಗುರು ಮುಖೇನ ಕಲಿತ ಜ್ಙಾನವನ್ನು ಬಳಸಿಕೊಂಡು ಬೋದಪ್ರದ ಪ್ರವಚನಗಳನ್ನು ನೀಡುತ್ತಿದ್ದಾರೆ. ಗಹನವಾದ ವೇದಾಂತ ತತ್ವಗಳನ್ನು ಅತ್ಯಂತ ಸರಳವಾಗಿ ಜನಮಾನಸದಲ್ಲಿ ಉಳಿಯುವಂತೆ ವಿವರಿಸುವುದೇ ಅವರ ವೈಶಿಷ್ಟ್ಯ.
ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಶಾಲೆಯಲ್ಲಿಯೇ ನಾಲ್ಕನೇ ತರಗತಿವರೆಗೆ ಓದಿದ ನಂತರ ಅವರು ಮಲ್ಲಿಕಾರ್ಜುನ ಸ್ವಾಮಿಗಳ ಬಳಿ ಬಂದರು. ‘ಬೆಳೆಯುವ ಪೈರು ಮೊಳಕೆಯಲ್ಲೇ’ ಎಂಬಂತೆ ಬಾಲಕ ಸಿದ್ಧೇಶ್ವರನ ಚುರುಕುತನ ಮಲ್ಲಿಕಾರ್ಜುನ ಸ್ವಾಮಿಗಳ ಗಮನಕ್ಕೆ ಬರಲು ತಡವಾಗಲಿಲ್ಲ. ತಾವು ಪ್ರವಚನ ಮಾಡುವ ಸ್ಥಳಗಳಿಗೆ ಅವರು ಸಿದ್ಧೇಶ್ವರರನ್ನು ಕರೆದೊಯ್ಯ ತೊಡಗಿದ್ದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡಿದ್ದರು.
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ