ಸಿಂದಗಿ ಕ್ಷೇತ್ರದ ಶಾಸಕ ಎಂ.ಸಿ.ಮನಗೂಳಿ ವಿಧಿವಶ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂದಗಿ ಕ್ಷೇತ್ರದ ಶಾಸಕ ಎಂ.ಸಿ.ಮನಗೂಳಿ(85) ವಿಧಿವಶರಾಗಿದ್ದಾರೆ.

ಸಿಂದಗಿ ಕ್ಷೇತ್ರದ ಶಾಸಕ ಎಂ.ಸಿ.ಮನಗೂಳಿ ವಿಧಿವಶ
ಸಿಂದಗಿ ಕ್ಷೇತ್ರದ ಶಾಸಕ ಎಂ.ಸಿ.ಮನಗೂಳಿ
Follow us
ಆಯೇಷಾ ಬಾನು
|

Updated on:Jan 28, 2021 | 9:16 AM

ವಿಜಯಪುರ: ಸಿಂದಗಿ ಕ್ಷೇತ್ರದ ಶಾಸಕ ಎಂ.ಸಿ.ಮನಗೂಳಿ(85) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮನಗೂಳಿ ಉಸಿರಾಟದ ಸಮಸ್ಯೆಯಿಂದ ಜನವರಿ 9ರಂದು ಏರ್ ಲಿಪ್ಟ್ ಮುಖಾಂತರ ಕಲಬುರ್ಗಿಯ ಏರ್ಪೋರ್ಟ್ ನಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ತಡರಾತ್ರಿ 1 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.

ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಸಿ.ಮನಗೂಳಿ ಐವರು ಮಕ್ಕಳನ್ನು ಅಗಲಿದ್ದಾರೆ. ಪಾರ್ಥಿವ ಶರೀರವನ್ನು ಸಿಂದಗಿಗೆ ರವಾನಿಸಲಾಗುತ್ತಿದೆ. ಎರಡು ಬಾರಿ ಸಚಿವರು ಹಾಗೂ ಎರಡು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ ಖ್ಯಾತಿ ಮನಗೂಳಿಯವರಿಗಿದೆ.

ಅಂತಿಮ‌ ದರ್ಶನಕ್ಕೆ ಸಿದ್ದತೆ ಮನಗೂಳಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣಕ್ಕೆ ತರಲಾಗುತ್ತಿದೆ. ಸಿಂದಗಿ ಪಟ್ಟಣದಲ್ಲಿರುವ ಅವರದೇ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಪಾರ್ಥಿವ ಶರೀರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ನಾಳೆ ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಅಂತ್ಯಕ್ರಿಯೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದ್ದು ಇನ್ನು ಅಂತ್ಯಕ್ರಿಯೆ ಸಮಯ ಖಚಿತಪಡಿಸಿಲ್ಲ. ಜೊತೆಗೆ ಎಲ್ಲಿ ಅಂತ್ಯಕ್ರಿಯೆ ಮಾಡಬೇಕೆಂಬುದರ ಕುರಿತು ಕುಟುಂಬಸ್ಥರು ನಿರ್ಧಾರ ಮಾಡಲಿದ್ದಾರೆ.

ಜೆಡಿಎಸ್ ಶಾಸಕ ಎಂ ಸಿ ಮನಗೂಳಿ ಅಗಲಿಕೆಗೆ ಜಿಲ್ಲೆಯ ಜನಪ್ರತಿನಿಧಿಗಳು ಮಠಾಧೀಶರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಸಂಸದ ರಮೇಶ್ ಜಿಗಜಿಣಗಿ, ಜೆಡಿಎಸ್ ಶಾಸಕ ದೇವಾನಂದ ಚೌವ್ಹಾಣ್, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,‌ ಕಾಂಗ್ರೆಸ್ ಶಾಸಕರಾದ ಎಂಬಿ ಪಾಟೀಲ್, ಶಿವಾನಂದ ಪಾಟೀಲ್ ಸೇರಿದಂತೆ ಇತರ ಜನಪ್ರತಿನಿಧಿಗಳು ಮನಗೂಳಿ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಸಿಂದಗಿ ಪಟ್ಟಣದ ಸಾರಂಗ ಮಠದ ಶ್ರೀ ಪ್ರಭು ಸಾರಂಗ ದೇವರು, ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಇತರ ಮಠಾಧೀಶರು ಸಂತಾಪ ಸೂಚಿಸಿದ್ದಾರೆ.

ಎರಡು ಬಾರಿ ಸಚಿವರು,ಶಾಸಕರಾಗಿದ್ದ ಮನಗೊಳಿ 1994 ರಲ್ಲಿ‌ ಮೊಟ್ಟ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು. ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿ, ಮೊದಲ ಬಾರಿಗೆ ಸಚಿವರೂ ಆಗಿದ್ದರು ಎಂ‌ ಸಿ ಮನಗೂಳಿ. ಅಂದು ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಜೆ ಎಚ್ ಪಟೇಲ್ ನೇತೃತ್ವದ ಸರ್ಕಾರದಲ್ಲಿ ಪಂಚಾಯತ್ ರಾಜ್ ಇಲಾಖೆಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಸುಮಾರು 12 ತಿಂಗಳುಗಳ ಕಾಲ ಪಂಚಾಯತ್ ರಾಜ್ ಇಲಾಖೆಯ ಸಚಿವರಾಗಿ ಎಂಸಿ ಮನಗೂಳಿ ಕಾರ್ಯನಿರ್ವಹಣೆಯ ಮಾಡಿದ್ದರು. 2018 ರಲ್ಲಿ ಎರಡನೆಯ ಬಾರಿಗೆ ಶಾಸಕರಾಗಿ ಎಂಸಿ ಮನಗೂಳಿ ಆಯ್ಕೆಯಾದರು. ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರದ ಕುಮಾರಸ್ವಾಮಿ ನೇತೃತ್ವದಲ್ಲಿ ಎರಡನೇ ಬಾರಿಗೆ ಸಚಿವರಾಗಿದ್ದರು. ತೋಟಗಾರಿಕಾ‌ ಇಲಾಖೆ ಸಚಿವರಾಗಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. 14 ತಿಂಗಳುಗಳ‌ ಕಾಲ ಸಚಿವರಾಗಿ ಸೇವೆ ಸಲ್ಲಿಸಿದ್ದರು.

29_09_1936 ರಂದು ಚೆನ್ನವೀರಪ್ಪ ಬಂಗಾರೆವ್ವ ದಂಪತಿ ಉದರಲ್ಲಿ ಎಂ ಸಿ ಮನಗೂಳಿ ಜನಿಸಿದ್ದರು. ಇವರ ನಾಲ್ಕು ಜನ ಮಕ್ಕಳಲ್ಲಿ ಮೂರನೇಯವರೇ ಮಲ್ಲಪ್ಪ. ಸಂಗಮ್ಮ ಹಿರಿಯ ಸಹೋದರಿ ಹಾಗೂ ಶರಣಮ್ಮ ಕಿರಿಯ ಸಹೋದರಿ. ಚೆನ್ನಪ್ಪ ಹಿರಿಯ ಸಹೋದರ.

ಎಂ‌ ಸಿ ಮನಗೂಳಿ ಅವರ ಪತ್ನಿ ಸಿದ್ದಮ್ಮ. ಇವರಿಗೆ ನಾಲ್ಕು ಜನ ಪುತ್ರರು ಹಾಗೂ ಓರ್ವ‌ ಪುತ್ರಿ. ಅರವಿಂದ ಮನಗೂಳಿ, ಅಶೋಕ ಮನಗೂಳಿ, ಡಾ ಮುತ್ತು ಮನಗೂಳಿ, ಡಾ ಶಾಂತವೀರ ಮಗೂಳಿ ಹಾಗೂ ಪುತ್ರಿ ಅನಿತಾ ನಿಡೋಣಿ. ಡಾ ಶಾಂತವೀರ ಮನಗೂಳಿ ಸಿಂದಗಿ ಪುರಸಭೆಯ ಅಧ್ಯಕ್ಷರಾಗಿದ್ದಾರೆ.

ಕೇರಳದ ಮಾಜಿ ಸಚಿವ ಕೆ.ಕೆ. ರಾಮಚಂದ್ರನ್ ಮಾಸ್ಟರ್ ವಿಧಿವಶ

Published On - 6:18 am, Thu, 28 January 21

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?