Hubli: ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​

Edited By:

Updated on: Feb 10, 2026 | 3:14 PM

ಹುಬ್ಬಳ್ಳಿಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿದ್ದಾರೂಢ ಮಠಕ್ಕೆ ಬಹುಭಾಷಾ ಗಾಯಕ ಸೋನು ನಿಗಮ್​​ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾರ್ಯಕ್ರಮವೊಂದರ ನಿಮಿತ್ತ ಅವರು ಹುಬ್ಬಳ್ಳಿಗೆ ಆಗಮಿಸಿದ್ದರು ಎನ್ನಲಾಗಿದ್ದು, ಗಾಯಕನಿಗೆ ಮಠದಿಂದಲೂ ವಿಶೇಷ ಸತ್ಕಾರ ನೀಡಿ ಗೌರವಿಸಲಾಗಿದೆ. ಮಠದಲ್ಲಿ ಸೋನು ನಿಗಮ್​​ ಧ್ಯಾನ ಕೂಡ ಮಾಡಿದ್ದಾರೆ.

ಹುಬ್ಬಳ್ಳಿ, ಫೆಬ್ರವರಿ 09: ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್ ಭೇಟಿ ನೀಡಿದ್ದು, ಸಿದ್ದಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸಿದ್ದಾರೂಢರ ಗದ್ದುಗೆ ಬಳಿ ಸೋನು ನಿಗಮ್ 10 ನಿಮಿಷ ಧ್ಯಾನ ಕೂಡ ಮಾಡಿದ್ದು, ಗಾಯಕನಿಗೆ ಮಠದ ಟ್ರಸ್ಟ್‌ನಿಂದ ಸಿದ್ದಾರೂಢರ ಮೂರ್ತಿ ನೀಡಿ ಗೌರವಿಸಲಾಗಿದೆ. ಸಂಗೀತ ಕಾರ್ಯಕ್ರಮವೊಂದರ ನಿಮಿತ್ತ ಅವರು ನಿನ್ನೆ ಹುಬ್ಬಳ್ಳಿಗೆ ಬಂದಿದ್ದರು ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 09, 2026 11:21 AM
Follow Us
Sanjayya Chikkamath

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ನಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಕೊಪ್ಪಳಕ್ಕೆ ಬಂದು ನಿಂತಿದೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More