ಒಂದೇ ದಿನ 3 ಸ್ಪರ್ಧಾತ್ಮಕ ಪರೀಕ್ಷೆ ನಿಗದಿ: ಪ್ರತ್ಯೇಕ ದಿನಾಂಕ ನಿಗದಿಗೆ ಸಿಎಂಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ
ಒಂದೇ ದಿನ ಮೂರು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಹಿನ್ನೆಲೆ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕದಲ್ಲಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ನವೆಂಬರ್ 5ರ ಭಾನುವಾರದಂದು 3 ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಮಾಡಲಾಗಿದೆ.
ಬೆಂಗಳೂರು, ಅಕ್ಟೋಬರ್ 25: ಒಂದೇ ದಿನ ಮೂರು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಹಿನ್ನೆಲೆ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕದಲ್ಲಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪತ್ರ ಬರೆದು ಮನವಿ ಮಾಡಿದ್ದಾರೆ. ನವೆಂಬರ್ 5ರ ಭಾನುವಾರದಂದು 3 ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಮಾಡಲಾಗಿದೆ. KPSC ಲೆಕ್ಕ ಪರಿಶೋಧನಾ ಇಲಾಖೆಯ ಲೆಕ್ಕ ಸಹಾಯಕರ 242, ಸಹಕಾರ ಸಂಘಗಳ ನಿರೀಕ್ಷಕರ 47, ಖಾಲಿ ಇರುವ 454 ಸಿವಿಲ್ ಕಾನ್‌ಸ್ಟೇಬಲ್ ಹುದ್ದೆಗೆ ಪರೀಕ್ಷೆ ನಿಗದಿ ಆಗಿದೆ.
ಕಳೆದ 5 ವರ್ಷದಿಂದ ಹಲವಾರು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಆಗಿಲ್ಲ. ಉದ್ಯೋಗ ಸಿಗದೆ ಸಾವಿರಾರು ಅಭ್ಯರ್ಥಿಗಳು ಅನಾಯಕ್ಕೊಳಗಾಗಿದ್ದಾರೆ. ವರ್ಷಾನುಗಟ್ಟಲೆ ತಯಾರಿ ನಡೆಸಿದ ಅಭ್ಯರ್ಥಿಗಳಿಗೂ ಗೊಂದಲವಾಗಿದೆ.
ಒಂದೇ ದಿನ 3 ಹುದ್ದೆಗಳಿಗೆ ಪರೀಕ್ಷೆ ನಿಗದಿಗೊಳಿಸಿರುವುದರಿಂದ ಗೊಂದಲ ಉಂಟಾಗಿದ್ದು, ಬೇರೆ ದಿನಾಂಕದಲ್ಲಿ ಪರೀಕ್ಷೆ ನಡೆಸಲು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಸೂಚಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಲಾಗಿದೆ.
ಇದನ್ನೂ ಓದಿ: ಕುಮಾರಸ್ವಾಮಿ ಜೊತೆ ಯಾವುದೇ ಮಾಧ್ಯಮದಲ್ಲಿ ನೇರಾನೇರ ಚರ್ಚೆಗೆ ಸಿದ್ಧ: ಡಿಕೆ ಶಿವಕುಮಾರ್
ಈ ಕುರಿತಾಗಿ ಸಚಿವ ಪ್ರಿಯಾಂಕ್ ಖರ್ಗೆ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದು, ರಾಜ್ಯ ಲೋಕಸೇವಾ ಆಯೋಗವು ರಾಜ್ಯ ಲೆಕ್ಕ ಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ ಹುದ್ದೆಗೆ 242, ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳು 47, ಮತ್ತು ರಾಜ್ಯ ಪೊಲೀಸ್ ಇಲಾಖೆಯು ಕೂಡ, ಖಾಲಿ ಇರುವ 454 ಸಿವಿಲ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ದಿನಾಂಕ 05/11/2023 ರ ಭಾನುವಾರದಂದು ಒಂದೇ ದಿನ ಸ್ಪರ್ಧಾತ್ಮಕ ಪರೀಕ್ಷೆ ನಿಗದಿಗೊಳಿಸಲಾಗಿದೆ. ಆದರೆ ಕಳೆದ 5 ವರ್ಷದಿಂದ ಹಲವಾರು ಸರ್ಕಾರಿ ಹುದ್ದೆಗಳಿಗೆ ನೇಮಕಾತಿಯಾಗದೇ ಸಾವಿರಾರು ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಗೆ ಹಾಗೂ ವಯೋಮಿತಿಗೆ ತಕ್ಕಂತೆ ಸರಿಯಾಗಿ ಉದ್ಯೋಗ ಸಿಗದೇ ಈಗಾಗಲೇ ಅನ್ಯಾಯಕ್ಕೆ ಒಳಗಾಗಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಫೇಸ್ಬುಕ್ನಲ್ಲಿ ಪೋಸ್ಟ್
ಸರ್ಕಾರಿ ನೌಕರಿ ಸೇರಬೇಕೆಂದು ಪ್ರತಿಯೊಂದು ನೇಮಕಾತಿಗೂ ಅರ್ಜಿ ಸಲ್ಲಿಸಿ ವರ್ಷಗಟ್ಟಲೇ ತಯಾರಿ ನಡೆಸಿದ ಅಭ್ಯರ್ಥಿಗಳಿಗೆ ಒಂದೇ ದಿನ ಮೂರು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಿಗದಿಗೊಳಿಸಿರುವುದರಿಂದ ಗೊಂದಲ ಉಂಟಾಗಿ, ಅಭ್ಯರ್ಥಿಗಳು ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಕ್ರಮ ವಹಿಸುವಂತೆ ನನಗೆ ಮನವಿ ಸಲ್ಲಿಸಿರುತ್ತಾರೆ.
ಇದನ್ನೂ ಓದಿ: ಅಕ್ರಮ ಗುರುತು ಚೀಟಿ ಸೃಷ್ಟಿ ಕೇಸ್: ಸಿಬಿಐ ತನಿಖೆಗೆ ಆಗ್ರಹಿಸಿದ ಮಾಜಿ ಸಚಿವ ಸುರೇಶ್ ಕುಮಾರ್
ವಿಶೇಷವಾಗಿ ನಮ್ಮ ಕಲ್ಯಾಣ ಕರ್ನಾಟಕ ಭಾಗದ ಯುವಕರು ನವೆಂಬರ್ 3ರಂದು ಪೊಲೀಸ್ ಇಲಾಖೆ ಪರೀಕ್ಷೆಗಳನ್ನು ಬರೆದರೆ ಬೇರೆ ಸರ್ಕಾರಿ ಹುದ್ದೆಗಳ ನೇಮಕಾತಿಗಳ ಅವಕಾಶದಿಂದ ವಂಚಿತರಾಗುತ್ತಾರೆ. ಆದ್ದರಿಂದ ಈ ಕುರಿತು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಬೇರೆ ಬೇರೆ ಪರೀಕ್ಷೆಗಳಿಗೆ ಪ್ರತ್ಯೇಕವಾಗಿ ದಿನಾಂಕವನ್ನು ನಿಗದಿ ಪಡಿಸುವಂತೆ ಮನವಿ ಮಾಡಿದ್ದೇನೆ. ಲಕ್ಷಾಂತರ ಪ್ರತಿಭಾನ್ವಿತ ಅಭ್ಯರ್ಥಿಗಳ ಭವಿಷ್ಯದ ಹಿತ ದೃಷ್ಟಿಯಿಂದ ಕರ್ನಾಟಕ ಲೋಕಸೇವಾ ಆಯೋಗದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬೇರೆ ಬೇರೆ ದಿನಾಂಕಗಳಲ್ಲಿ ನಿಗದಿ ಮಾಡಲು ಕೋರಲಾಗಿದೆ ಎಂದು ಬರೆದುಕೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:49 pm, Wed, 25 October 23