ಕರ್ನಾಟಕದಲ್ಲಿ SIR ಸಮರ್ಪಕವಾಗಿ ನಡೆದಿದೆ: ಆಯೋಗಕ್ಕೆ ಜಾರಕಿಹೊಳಿ ಶಹಬ್ಬಾಸ್ ಗಿರಿ

ಕರ್ನಾಟಕದ ಮತದಾರರ ಪಟ್ಟಿಯಿಂದ ಸುಮಾರು ಒಂದು ಕೋಟಿ ಹೆಸರುಗಳನ್ನು ತೆಗೆದುಹಾಕಿರುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸೇರಿ ಬಹುತೇಕ ಕಾಂಗ್ರೆಸ್ ನಾಯಕರು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತೀವ್ರವಾಗಿ ಟೀಕಿಸುತ್ತಿದ್ದಾರೆ. ಆದ್ರೆ, ಅದೇ ಪಕ್ಷದ ಹಿರಿಯ ನಾಯಕ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಈ ಪ್ರಕ್ರಿಯೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಕರ್ನಾಟಕದಲ್ಲಿ SIR ಸಮರ್ಪಕವಾಗಿ ನಡೆದಿದೆ: ಆಯೋಗಕ್ಕೆ ಜಾರಕಿಹೊಳಿ ಶಹಬ್ಬಾಸ್ ಗಿರಿ
Satish Jarkiholi
Edited By:

Updated on: Oct 29, 2026 | 3:43 PM

ಬೆಂಗಳೂರು, (ಅಕ್ಟೋಬರ್ 29): ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆ ಸರಿಯಾಗಿ ಆಗಿಲ್ಲ. ಟಾರ್ಗೆಟ್ ಮಾಡಿ ಮುಸ್ಲಿಂ, ದಲಿತ ಮತಗಳನ್ನು ಡಿಲೀಟ್ ಮಾಡಲಾಗುತ್ತಿದೆ ಎಂದು ಆಡಳಿತರೂಢ ಕಾಂಗ್ರೆಸ್​​ ನಾಯಕರು ಆರೋಪಿಸಿದ್ದಾರೆ. ಈ ಸಂಬಂಧ ಹಲವು ಪ್ರತಿಭಟನೆಗಳನ್ನು ಸಹ ಮಾಡಿದ್ದಾರೆ. ಈಗಲೂ ಅವದ್ದು ಇದೇ ಆರೋಪವಾಗಿದೆ. ಆದ್ರೆ, ರಾಜ್ಯ ಸರ್ಕಾರದ ಭಾಗವಾಗಿರುವ ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ ಎಂದು ಚುನಾವಣಾ ಆಯೋಗಕ್ಕೆ ಶಹಬ್ಬಾಸ್ ಗಿರಿ ನೀಡಿದ್ದಾರೆ. ಎಸ್​ಐಆರ್​ ವಿರೋಧಿಸಿ ಕಾಂಗ್ರೆಸ್ ನವೆಂಬರ್ 1ರಂದು ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿರುವ ಸಂದರ್ಭದಲ್ಲೇ ಜಾರಕಿಹೊಳಿ ಅವರ ಹೇಳಿಕೆ ಅಚ್ಚರಿಗೆ ಕಾರಣವಾಗಿದೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ. ಆದ್ರೆ, ಬೇರೆ ರಾಜ್ಯಗಳಲ್ಲಿ ನಡೆದ SIR ಪ್ರಕ್ರಿಯೆ ಬಗ್ಗೆ ನಮ್ಮ ಆಕ್ಷೇಪವಿದೆ ಸ್ಥಳಾಂತರವಾದವರು, ಸತ್ತವರು, 2 ಕಡೆ ಹೆಸರಿದ್ದವರು ಇದ್ದಾರೆ. ದೊಡ್ಡ ಪ್ರಮಾಣದಲ್ಲಿ ಹೆಸರು ತೆಗೆದುಹಾಕಿರುವುದು ಸಮರ್ಥನೀಯ. ಕರ್ನಾಟಕದಲ್ಲಿ ನಡೆದ ಎಸ್ಐಆರ್ ಪ್ರಕ್ರಿಯೆಯನ್ನು ವಿರೋಧಿಸಿಲ್ಲ ಎಂದು SIR ಪ್ರಕ್ರಿಯೆ ಪರ ಬ್ಯಾಟ್ ಬೀಸಿದ್ದಾರೆ.

ಇದನ್ನೂ ನೋಡಿ: 99 ಲಕ್ಷ ವೋಟ್ ಡಿಲೀಟ್: ಫಾರ್ಮ್ 7 ವಿವಾದಕ್ಕೆ ವಿಪಕ್ಷಗಳು ಕಾರಣ ಎನ್ನುವುದು ಸ್ಪಷ್ಟ ಎಂದ ಡಿಕೆಶಿ

ಬೇರೆ ರಾಜ್ಯಗಳಲ್ಲಿ ಅಂದರೆ ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಬಿಹಾರ SIR ಪ್ರಕ್ರಿಯೆಗೆ ಆಕ್ಷೇಪವಿದೆ.
ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿರುದ್ಧ ಪ್ರತಿಭಟನೆ ನಡೆಸಿದ್ದೆವು. ಅದೇ ರೀತಿ ಎಸ್ಐಆರ್ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿದ್ದೆವು. ಇದರ ಪರಿಣಾಮವಾಗಿ ರಾಜ್ಯದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿದೆ. ಬೇರೆ ರಾಜ್ಯಗಳಲ್ಲಿ ಇದೇ ರೀತಿ ಪ್ರಕ್ರಿಯೆ ನಡೆಯಬೇಕೆಂಬುದು ನಮ್ಮ ಆಶಯ ಎಂದಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಪಾರ್ಟಿ ನೇತೃತ್ವದಲ್ಲಿ ವಿಪಕ್ಷಗಳು, ಕೇಂದ್ರ ಸರ್ಕಾರ, ಕೇಂದ್ರ ಚುನಾವಣಾ ಆಯೋಗದ ವಿರುದ್ದ ಪ್ರತಿಭಟನೆಯನ್ನು ನಡೆಸುತ್ತಿದೆ. SIR ಪ್ರಕ್ರಿಯೆಯನ್ನು ಕೂಡಲೇ ಹಿಂಪಡೆಯಬೇಕು ಮತ್ತು ಜ್ಞಾನೇಶ್ ಕುಮಾರ್ ವಜಾಗೆ ಆಗ್ರಹಿಸುತ್ತಿದೆ.
Minister Satish Jarkiholi On SIR In Karnataka: ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ
ಇತ್ತ ರಾಜ್ಯ ಚುನಾವಣಾ ಆಯೋಗ ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 99.32 ಲಕ್ಷ ಮತಗಳನ್ನು ತೆಗೆದುಹಾಕಲಾಗಿದೆ. ಈ ಮೂಲಕ ರಾಜ್ಯದಲ್ಲಿದ್ದ 5.54 ಕೋಟಿ ಮತದಾರರ ಸಂಖ್ಯೆ ಇದೀಗ 4.55 ಕೋಟಿಗೆ ಇಳಿದಿದೆ. ಹೀಗಾಗಿ ಇದಕ್ಕೆ ಸಿಎಂ ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಆದಿಯಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರ ಮಧ್ಯೆ ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಎಸ್​​​​​ಐಆರ್ ಪ್ರಕ್ರಿಯೆ ಸರಿಯಾಗಿಯೇ ಇದೆ, ನಮ್ಮದೇನೂ ಅಭ್ಯಂತರವಿಲ್ಲ ಎಂದು ಭಿನ್ನ ಹೇಳಿಕೆ ನೀಡಿರುವುದು ಸಂಚಲನ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:15 pm, Thu, 29 October 26

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Loading...
Unable to load recommendations.
Follow Us