SIR ವೇಳೆ ತಪ್ಪು ಮಾಹಿತಿ ನೀಡಿ ಫಾರಂ 7 ಸಲ್ಲಿಕೆ ಕೇಸ್: 12 ಜನರ ವಿರುದ್ಧದ ಎಫ್ಐಆರ್ಗೆ ಹೈಕೋರ್ಟ್ ತಡೆ
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ವೇಳೆ ಫಾರ್ಮ್-7 ದುರ್ಬಳಕೆ ಮಾಡಿಕೊಂಡು ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಮೇಲೆ ದಾಖಲಾಗಿದ್ದ ಎಫ್‌ಐಆರ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.

ಬೆಂಗಳೂರು, (ನವೆಂಬರ್ 17): ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ವೇಳೆ ಫಾರ್ಮ್-7 ದುರ್ಬಳಕೆ ಮಾಡಿಕೊಂಡು ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪದ ಮೇಲೆ 12 ಜನರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಫಾರಂ 7 ಸಂಬಂಧ ತೀರ್ಮಾನದ ದಾಖಲೆ ಸಲ್ಲಿಕೆಗೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದ್ದು, ಅಲ್ಲಿಯವರೆಗೆ ಪೊಲೀಸರ ತನಿಖೆಗೆ ತಡೆಯಾಜ್ಞೆ ನೀಡಿ ನ್ಯಾಯಮೂರ್ತಿ ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಹೈಕೋರ್ಟ್ ಪೀಠ ಆದೇಶ ಹೊರಡಿಸಿದೆ.
ನಕಲಿ ಸಹಿ ಬಗ್ಗೆ ದೂರು ನೀಡಲು ಎಲ್ಲರಿಗೂ ಅವಕಾಶ ಇದ್ದು, ಬಿಎನ್ಎಸ್ ಸೆ.217 ಅಡಿ ಸರ್ಕಾರಿ ಅಧಿಕಾರಿ ದೂರು ನೀಡಬೇಕು. ಇಲ್ಲವಾದರೆ ಮ್ಯಾಜಿಸ್ಟ್ರೇಟ್ ಕೇಸ್ ಪರಿಜ್ಞಾನಕ್ಕೆ ತೆಗೆದುಕೊಳ್ಳುವಂತಿಲ್ಲ. ಫಾರಂ 7ಗಳ ಬಗ್ಗೆ ಚುನಾವಣಾ ಆಯೋಗ ತೀರ್ಮಾನಿಸಬೇಕು. ಚುನಾವಣಾ ಆಯೋಗದ ತೀರ್ಮಾನದ ಪರಿಣಾಮ ಕೇಸ್ನ ಮೇಲಾಗುತ್ತದೆ. ಹೀಗಾಗಿ ಫಾರಂ 7 ಬಗ್ಗೆ ಆಯೋಗದ ತೀರ್ಮಾನವನ್ನು ತಿಳಿಸಲು ಸೂಚಿಸಿದೆ.




