AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಸಚಿವ ವಿ.ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ: ಶಿವಮೊಗ್ಗದಲ್ಲಿ ಭಾರಿ ಹೈಡ್ರಾಮಾ

ಕೇಂದ್ರ ಸಚಿವ ವಿ.ಸೋಮಣ್ಣ ಕಾರು ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಯತ್ನ: ಶಿವಮೊಗ್ಗದಲ್ಲಿ ಭಾರಿ ಹೈಡ್ರಾಮಾ

Basavaraj Yaraganavi
| Edited By: |

Updated on: Oct 12, 2026 | 3:11 PM

Share

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅಕ್ರಮವಾಗ್ತಿದೆ ಎಂದು ಆರೋಪಿಸಿ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿರುವ ಯುವ ಕಾಂಗ್ರೆಸ್ ಕಾರ್ಯಕರ್ತರು​​, ಬಟ್ಟೆ ಅಂಗಡಿ ಉದ್ಘಾಟನೆ ಕಾರ್ಯಕ್ರಮಕ್ಕೆಂದು ನಗರಕ್ಕೆ ಆಗಮಿಸಿದ್ದ ಕೇಂದ್ರ ಸಚಿವ ವಿ. ಸೋಮಣ್ಣ ಅವರ ಕಾರನ್ನು ಬಸ್ ನಿಲ್ದಾಣದ ಬಳಿ ತಡೆದು ಮುತ್ತಿಗೆಗೆ ಯತ್ನ ನಡೆಸಿದ್ದಾರೆ. ತಕ್ಷಣ ಸ್ಥಳದಿಂದ ಪ್ರತಿಭಟನಾಕಾರರನ್ನು ಪೊಲೀಸರು ಚದುರಿಸಿದ್ದು, ಈ ವೇಳೆ ತಳ್ಳಾಟ ನಡೆದಿದೆ.

ಶಿವಮೊಗ್ಗ, ಅಕ್ಟೋಬರ್​​ 12: ಕೇಂದ್ರ ಸರ್ಕಾರದ ವಿರುದ್ಧ ಮತ್ತು ಸಿಇಸಿ ಜ್ಞಾನೇಂದ್ರ ಕುಮಾ‌ರ್ ರಾಜೀನಾಮೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಅಲ್ಲದೆ, ಬಸ್ ನಿಲ್ದಾಣದ ಬಳಿ ಕೇಂದ್ರ ಸಚಿವ ವಿ.ಸೋಮಣ್ಣ ಕಾರು ತಡೆದು ಮುತ್ತಿಗೆಗೆ ಯತ್ನವನ್ನೂ ನಡೆಸಲಾಗಿದೆ. ತಕ್ಷಣ ಸ್ಥಳದಿಂದ ಪ್ರತಿಭಟನಾಕಾರರನ್ನು ಪೊಲೀಸರು ಚದುರಿಸಿದ್ದು, ಈ ವೇಳೆ ತಳ್ಳಾಟ ನಡೆದಿದೆ. ಪರಿಣಾಮ ಸ್ಥಳದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಕೇಂದ್ರದ ವಿರುದ್ಧ ಘೋಷಣೆ ಕೂಗಿ ಕಾಂಗ್ರೆಸ್​​ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಕಾಂಗ್ರೆಸ್​​ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸೋಮಣ್ಣ, ರಾಜ್ಯದ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಅವರು ಹೋಗಿ ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸಿರೋದು ಮುಜುಗರದ ಸಂಗತಿ. ಮತಪಟ್ಟಿಯಿಂದ ಹೆಸರು ತೆಗೆದುಹಾಕುವುದು ಅಷ್ಟೊಂದು ಸುಲಭದ ಕೆಲಸವಲ್ಲ. ಕಾಂಗ್ರೆಸ್ ನಾಯಕರು ಮೊಸಳೆ ಕಣ್ಣೀರು ಹಾಕಿ ಸಾವಿರ ಬಾರಿ ಸುಳ್ಳು ಹೇಳಿದದರೂ ಸತ್ಯವನ್ನು ಮರೆ ಮಾಚಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರದ ಅಭಿವೃದ್ಧಿ ನೋಡಿ ವಿಪಕ್ಷಗಳು ಹೊಟ್ಟೆಕಿಚ್ಚು ಪಡುತ್ತಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ ಮಾಡುತ್ತಿವೆ ಎಂದವರು ಆರೋಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Basavaraj Yaraganavi
Basavaraj Yaraganavi