ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಒಂದೇ ದಿನದಲ್ಲಿ ನಿವೇಶನ ಪಡೆದ ಶಿರಾದ ಬೀಡಿ ಕಾರ್ಮಿಕೆ ರಬಿಯಾ

ಅರುಣ್​ ಕುಮಾರ್​ ಬೆಳ್ಳಿ

Updated on: Dec 03, 2024 | 7:05 PM

ಸೋಮವಾರದಂದು ರಬಿಯಾ ತನ್ನ ಇಬ್ಬರು ಮಕ್ಕಳೊಂದಿಗೆ ಮಾಧ್ಯಮಗಳ ಮುಂದೆ ಬಂದು ಮಾತಾಡಿದ್ದರು. ಶಿರಾದ ಕಾಂಗ್ರೆಸ್ ಶಾಸಕ ಟಿಬಿ ಜಯಚಂದ್ರ ಜನತಾ ದರ್ಶನ ಕಾರ್ಯಕ್ರಮದಲ್ಲಿ ರಬಿಯಾಗೆ ನಿವೇಶನ ನೀಡುವ ಭರವಸೆ ನೀಡಿದ್ದರಂತೆ. ಆದರೆ ಅವರಿಂದ ಅದು ಸಾಧ್ಯವಾಗದ ಕಾರಣ ರಬಿಯಾ ನೇರವಾಗಿ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಮನೆ ಬೇಕೆಂದು ಕೇಳಿದ್ದರು.

ತುಮಕೂರು: ನಿನ್ನೆ ಈ ದೃಶ್ಯವನ್ನು ನಾವು ನಿಮಗೆ ತೋರಿಸಿದ್ದೆವು. ಶಿರಾ ಮೂಲದ ಬೀಡಿ ಕಟ್ಟುವ ಮಹಿಳೆಯೊಬ್ಬರು ತನಗೆ ಮನೆ ಬೇಕು ಎಂದು ತುಮಕೂರಿಗೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಅವಲತ್ತುಕೊಂಡಿದ್ದರು. ಅವರ ಗೋಳಾಟ ನೋಡಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದರು. ರಬಿಯಾಗೆ 20/30 ಅಳತೆಯ ನಿವೇಶನವೊಂದನ್ನು ಜಿಲ್ಲಾಧಿಕಾರಿಯವರು ಒಂದೇ ದಿನದಲ್ಲಿ ಕೊಡಿಸಿದ್ದಾರೆ. ರಾಜೀವ್ ಗಾಂಧಿ ವಸತಿ ನಿಗಮದ ಅಡಿಯಲ್ಲಿ ರಬಿಯಾಗೆ ನಿವೇಶನ ನೀಡುವಂತೆ ಜಿಲ್ಲಾಧಿಕಾರಿ ಆದೇಶ ಮಾಡಿದ್ದು ಅದರಂತೆ ಶಿರಾ ನಗರಸಭೆಯ ಸರ್ವೆ 100ರಲ್ಲಿ ನಿವೇಶನವನ್ನು ಮಂಜೂರು ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ತುಮಕೂರುನಲ್ಲಿ ಸಿಎಂ ಸಿದ್ದರಾಮಯ್ಯ ಕಾರು ತಡೆದು ವಾಸಕ್ಕೆ ಮನೆ ಕೇಳಿದ ಶಿರಾದ ಬೀಡಿ ಕಾರ್ಮಿಕೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.