ದಾವಣಗೆರೆ: ಕೊವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಿರಿಗೆರೆ ಮಠದ ತರಳಬಾಳು ಮಹಿಳಾ ಹಾಸ್ಟೆಲ್ನ್ನು ಕೊವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲು ಗುರುಪೀಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮುಂದಾಗಿದ್ದಾರೆ. ಈ ಬೆನ್ನಲ್ಲೇ ದಾವಣಗೆರೆ ನಗರದ ಹೆದ್ದಾರಿ ಸಮೀಪದ ಇರುವ ಮಠದ ಹಾಸ್ಟೆಲ್ನಲ್ಲಿ ತರಳಬಾಳು ಕೊವಿಡ್ ಕೇರ್ ಸೆಂಟರ್ ಆರಂಭವಾಗಿದೆ.
ಸಂಸದ ಸಿದ್ದೇಶ್ವರ್, ಶಾಸಕ ರವೀಂದ್ರನಾಥ, ಹಾಗೂ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತರಳಬಾಳು ಕೊವಿಡ್ ಕೇರ್ ಸೆಂಟರ್ ಉದ್ಘಾಟನೆ ಮಾಡಿದ್ದು, ಸದ್ಯ ತರಳಬಾಳು ಕೊವಿಡ್ ಕೇರ್ ಸೆಂಟರ್ನ 30 ರೂಂಗಳಲ್ಲಿ 90 ಜನ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಕೇಂದ್ರದಲ್ಲಿ ಊಟ, ವಸತಿ ಮತ್ತು ಔಷಧಿ ಉಪಚಾರಗಳು ಉಚಿತವಾಗಿ ನೀಡಲಾಗುತ್ತಿದೆ.
ದಾವಣಗೆರೆಯಲ್ಲಿ ಇಂದು 292 ಕೊವಿಡ್ ಸೋಂಕಿತರು ಪತ್ತೆಯಾಗಿದ್ದಾರೆ. ಅಲ್ಲದೇ, ಇಬ್ಬರು ಕೊವಿಡ್ನಿಂದಾಗಿ ನಿಧನರಾಗಿದ್ದಾರೆ.
ಕರ್ನಾಟಕದಲ್ಲಿ ಇಂದು ಪತ್ತೆಯಾದ ಸೋಂಕಿತರೆಷ್ಟು?
ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 41,664 ಜನರಿಗೆ ಕೊವಿಡ್ ಸೋಂಕು ಪತ್ತೆಯಾಗಿದೆ. 349 ಜನರು ನಿಧನರಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಇದೇ ಅವಧಿಯಲ್ಲಿ 13,402 ಜನರಿಗೆ ಸೋಂಕು ಪತ್ತೆಯಾಗಿದ್ದು, 94 ಜನರು ನಿಧನರಾಗಿದ್ದಾರೆ. ಇವೆಲ್ಲವುಗಳ ಜತೆ ಕಳೆದ 24 ಗಂಟೆಗಳಲ್ಲಿ ಕರ್ನಾಟಕ ರಾಜ್ಯದಲ್ಲಿ 34,422 ಜನರು ಕೊವಿಡ್ನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ.
ಇಂದು ಪತ್ತೆಯಾದ ಕೊವಿಡ್ ಸೋಂಕಿತರನ್ನೂ ಸೇರಿಸಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 21,71,931ಕ್ಕೆ ಏರಿಕೆಯಾಗಿದೆ. ಈವರೆಗೆ ಸೋಂಕಿತರ ಪೈಕಿ 15,44,982 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 21,434 ಜನರ ಸಾವನ್ನಪ್ಪಿದ್ದು, 6,05,494 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಕೊವಿಡ್ ವಿರುದ್ಧದ ಹೋರಾಟದಲ್ಲಿ ನಿರತ ವೈದ್ಯರಿಗೆ ಸಿಎಂ ಯಡಿಯೂರಪ್ಪ ಕೃತಜ್ಞತೆ
( Sirigere Matha Womens Hostel is now the Covid Care Center in davanagere)
Published On - 8:31 pm, Sat, 15 May 21