ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ತಹಶೀಲ್ದಾರ್ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಸಿರುಗುಪ್ಪ ಪಟ್ಟಣದ ಸರ್ಕಾರಿ ವಸತಿ ಗೃಹದಲ್ಲಿ ಸಿರುಗುಪ್ಪ ತಹಶೀಲ್ದಾರ್ ಆಗಿದ್ದ ಸತೀಶ್ ಪತ್ನಿ ನೇಣಿಗೆ ಶರಣಾಗಿದ್ದಾರೆ. ಶಂಕರಮ್ಮ(50) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಸಿರುಗುಪ್ಪ ತಹಶೀಲ್ದಾರ್ ಆಗಿದ್ದ ಸತೀಶ್ ಬಿ ಕೂಡಲಗಿ ಇತ್ತೀಚೆಗೆ ಡಿಸಿ ಕಚೇರಿಗೆ ವರ್ಗಾವಣೆಗೊಂಡಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಶಂಕರಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಸಿರುಗುಪ್ಪ ಶಾಸಕ ಸೋಮಲಿಂಗಪ್ಪ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣವೇನೆಂಬುವುದು ಇನ್ನು ತಿಳಿದು ಬಂದಿಲ್ಲ. ಸಾವಿನ ಸುತ್ತ ಶಂಕೆ ವ್ಯಕ್ತವಾಗಿದ್ದು ಪೊಲೀಸರ ತನಿಖೆ ಬಳಿಕವಷ್ಟೇ ಇದಕ್ಕೆ ಸ್ಪಷ್ಟತೆ ಸಿಗಲಿದೆ.
ಡೆತ್ ನೋಟ್ ಬರೆದಿಟ್ಟು.. ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಪಂಚಾಯತಿ ಚುನಾವಣಾ ಅಭ್ಯರ್ಥಿ
Published On - 8:37 am, Thu, 24 December 20