ಮೃತ ಸರ್ಕಾರಿ ನೌಕರನ ಸಹೋದರಿಗೆ ಅನುಕಂಪದ ಮೇಲೆ ಉದ್ಯೋಗ ನೀಡಲು ಸಾಧ್ಯವಿಲ್ಲ: ಹೈಕೋರ್ಟ್

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ (ಬೆಸ್ಕಾಂ) ಜೂನಿಯರ್ ಲೈನ್ ಮೆನ್ ಆಗಿ ಕೆಲಸ ಮಾಡುತ್ತಿದ್ದ ವಿವಾಹಿತ ನೌಕರ ಸಾವನ್ನಪ್ಪಿದ್ದು, ಅನುಕಂಪದ ಆಧಾರದ ಮೇಲೆ ಈತನ ಅವಲಂಬಿತರಿಗೆ ಮಾತ್ರ ಸರ್ಕಾರಿ ನೌಕರಿ ನೀಡಲು ಸಾಧ್ಯವಿದೆ. ಬದಲಾಗಿ ಸಹೋದರಿಯನ್ನು ನೇಮಕ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟ ಹೈಕೋರ್ಟ್, ಮೇಲ್ಮನವಿಯನ್ನು ವಜಾಗೊಳಿಸಿದೆ.

ಮೃತ ಸರ್ಕಾರಿ ನೌಕರನ ಸಹೋದರಿಗೆ ಅನುಕಂಪದ ಮೇಲೆ ಉದ್ಯೋಗ ನೀಡಲು ಸಾಧ್ಯವಿಲ್ಲ: ಹೈಕೋರ್ಟ್
ಕರ್ನಾಟಕ ಹೈಕೋರ್ಟ್
Rakesh Nayak Manchi

Updated on: Sep 14, 2023 | 10:02 AM

ಬೆಂಗಳೂರು, ಸೆ.14: ಅನುಕಂಪದ ಆಧಾರದ ಮೇಲೆ ಮೃತ ನೌಕರನ ಸಹೋದರಿಯನ್ನು ಸರ್ಕಾರಿ ನೌಕರಿಗೆ ನೇಮಕ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ (Karnataka High Court) ಹೇಳಿದೆ. ಅಲ್ಲದೆ, ಈ ಕುರಿತು ಸಲ್ಲಿಸಿದ ಮೇಲ್ಮನವಿಯನ್ನು ವಜಾಗೊಳಿಸಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ (ಬೆಸ್ಕಾಂ) ಜೂನಿಯರ್ ಲೈನ್ ಮೆನ್ ಆಗಿ ಕೆಲಸ ಮಾಡುತ್ತಿದ್ದ ವಿವಾಹಿತ ನೌಕರ ಮೃತಪಟ್ಟ ಹಿನ್ನೆಲೆ ಅನುಕಂಪದ ಆಧಾರದ ಮೇಲೆ ತನಗೆ ಉದ್ಯೋಗ ನೀಡುವಂತೆ ಸಹೋದರಿ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು, ಸಹೋದರಿಗೆ ಅನುಕಂಪದ ಮೇಲೆ ಉದ್ಯೋಗ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಹೆಚ್ಚು ಅರ್ಹತೆ ಮತ್ತು ಸಂಪಾದಿಸುತ್ತಿರುವ ಪತ್ನಿಗೆ ಜೀವನಾಂಶ ನೀಡಲಾಗದು: ದೆಹಲಿ ಹೈಕೋರ್ಟ್

ಕರ್ನಾಟಕ ನಾಗರಿಕ ಸೇವೆಗಳ (ಅನುಕಂಪದ ಆಧಾರದ ಮೇಲೆ ನೇಮಕಾತಿ) ನಿಯಮಗಳು, 1996ರ ನಿಯಮ 2(1)(ಬಿ)ಯನ್ನು ಉಲ್ಲೇಖಿಸಿದ ವಿಭಾಗೀಯ ಪೀಠವು, ಮೃತ ಪುರುಷ ವಿವಾಹಿತ ಸರ್ಕಾರಿ ನೌಕರನ ಮೇಲೆ ಅವಲಂಬಿತರಾಗಿದ್ದ ಪತ್ನಿ, ಮಗ ಮತ್ತು ಮಗಳು (ಅವಿವಾಹಿತ/ ವಿವಾಹಿತ/ ವಿಚ್ಛೇದಿತ/ ವಿಧವೆ) ಹಾಗೂ ಅವರ ಜೊತೆ ವಾಸಿಸುತ್ತಿದ್ದವರಿಗೆ ಮಾತ್ರ ಅನುಕಂಪದ ಆಧಾರದ ಮೇಲೆ ಉದ್ಯೋಗ ಪಡೆಯುವ ಅವಕಾಶ ಇದೆ ಎಂದು ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:59 am, Thu, 14 September 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us