Prajwal Video Case: ಸಚಿವ ಜಮೀರ್ ಶಿಷ್ಯ ಸೇರಿ ಇಬ್ಬರನ್ನು ಬಂಧಿಸಿದ ಎಸ್​ಐಟಿ

| Updated By: ರಮೇಶ್ ಬಿ. ಜವಳಗೇರಾ

Updated on: May 28, 2024 | 2:47 PM

ಹಾಸನ ಪೆನ್​ಡ್ರೈವ್​ ಅಶ್ಲೀಲ ವಿಡಿಯೋ ಹಂಚಿದ ಆರೋಪಿಗಳನ್ನು ಕೊನೆಗೂ ಎಸ್​ಐಟಿ ಬಂಧಿಸಿದೆ. ಜೆಡಿಎಸ್​ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ವಾಟ್ಸಪ್​ಗಳ ಮೂಲಕ ಹರಿಬಿಟ್ಟ ಆರೋಪದ ಮೇಲೆ ಜೆಡಿಎಸ್​ ದೂರು ನೀಡಿತ್ತು. ಈ ದೂರಿನ ಆಧಾರದ ಮೇಲೆ ಬರೋಬ್ಬರಿ ಒಂದು ತಿಂಗಳು ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ.

Prajwal Video Case: ಸಚಿವ ಜಮೀರ್ ಶಿಷ್ಯ ಸೇರಿ ಇಬ್ಬರನ್ನು ಬಂಧಿಸಿದ ಎಸ್​ಐಟಿ
Follow us on

ಬೆಂಗಳೂರು, (ಮೇ 28): ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ Prajwal Revanna Pen drive Vide Case)  ಸಂಬಂಧಿಸಿದಂತೆ ಅಶ್ಲೀಲ ವಿಡಿಯೋ ಹರಿಬಿಟ್ಟವರನ್ನು ಕೊನೆಗೂ ಎಸ್​ಐಟಿ ಬಂಧಿಸಿದೆ. ಇಂದು(ಮೇ 28) ಹೈಕೋರ್ಟ್​​ಗೆ ಬಂದಿದ್ದ ಆರೋಪಿಗಳಾದ ನವೀನ್ ಗೌಡ, ಚೇತನ್​ನನ್ನು ಎಸ್​ಐಟಿ ಬಂಧಿಸಿದೆ. ವಿಡಿಯೋ ವೈರಲ್​ ಮಾಡಿದ್ದವರನ್ನು ಬಂಧಿಸದಕ್ಕೆ ಎಚ್​ಡಿ ಕುಮಾರಸ್ವಾಮಿ ಅವರು ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ದೂರು ದಾಖಲಾದ ಬರೋಬ್ಬರಿ ಒಂದು ತಿಂಗಳು ಬಳಿಕ ಆರೋಪಿಗಳ ಬಂಧನವಾಗಿದೆ.

ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ನವೀನ್ ಗೌಡ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ್ದ. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಪ್ರಜ್ವಲ್ ರೇವಣ್ಣ ವೀಡಿಯೋ ನೋಡಲು ಈ ವಾಟ್ಸಾಪ್ ಚಾನಲ್ ಫಾಲೋ ಮಾಡಿ ಎಂದು ಫೇಸ್​ಬುಕ್​ನಲ್ಲಿ ಮೊದಲ ಪೋಸ್ಟ್ ಮಾಡಿದ್ದ. ನಂತರ ಸ್ವಲ್ಪ ಹೊತ್ತಿನಲ್ಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಬಿಡುಗಡೆಗೆ ಕ್ಷಣ ಗಣನೆ ಎಂದು ಮತ್ತೊಂದು ಪೋಸ್ಟ್ ಹಾಕಿದ್ದ. ಇದನ್ನು ಗಮನಿಸಿದ್ದ ಜೆಡಿಎಸ್, ಪೋಸ್ಟ್ ಅನ್ನು ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡಿತ್ತು. ಅತ್ತ ಪ್ರಕರಣ ದಾಖಲಾಗುತ್ತಿದ್ದಂತೆಯೇ ನವೀನ್​ ಗೌಡ ಫೇಸ್ ಬುಕ್ ಅಕೌಂಟ್ ಡಿಲೀಟ್ ಮಾಡಿಕೊಂಡಿದ್ದ. ಈ ಸಂಬಂಧ ಎಸ್​ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು. ಆದ್ರೆ, ನವೀನ್​ ಗೌಡ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ.

ಇದನ್ನೂ ಓದಿ: ಪ್ರಜ್ವಲ್​ ಅಶ್ಲೀಲ ವಿಡಿಯೋ ಬಿಡುಗಡೆ ಮಾಡಿದ್ಯಾರು? ಕೊನೆಗೂ ಸ್ಫೋಟಕ ಮಾಹಿತಿ ಬಹಿರಂಗ

ಇನ್ನು ವಿಡಿಯೋ ಹಂಚಿಕೆ ಮಾಡಿದ್ದವರ ವಿರುದ್ಧ ದೂರು ದಾಖಲಾಗಿದ್ದರೂ ಸಹ ಇನ್ನೂ ಬಂಧಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಕಿಡಿಕಾರಿದ್ದರು. ಅಲ್ಲದೇ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸ್‌ನಲ್ಲಿ ವಿಡಿಯೋ ಹರಿಬಿಟ್ಟವರ ವಿರುದ್ಧ ಕಾನೂನು ಹೋರಾಟ ನಡೆಸಲು ಮಾಜಿ ಸಿಎಂ ಎಚ್‌ಡಿಕೆ ನಿರ್ಧರಿಸಿದ್ದರು. ಈ ಬಗ್ಗೆ ವಕೀಲರ ಜತೆಗೆ ಜೆಡಿಎಸ್‌ ಲೀಗಲ್‌ ಟೀಂ ಈಗಾಗಲೇ ಮಾತುಕತೆ ನಡೆಸಿತ್ತಯ ಎನ್ನಲಾಗಿದೆ. ಇದರ ಬೆನ್ನಲ್ಲೇ ಇದೀಗ ಎಸ್​ಐಟಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ,

ಲೋಕಸಭಾ ಚುನಾವಣೆಯ ಹೊತ್ತಲಿ ಪೆನ್ ಡ್ರೈವ್‌ನಲ್ಲಿದ್ದ ಅಶ್ಲೀಲ ವಿಡಿಯೊಗಳನ್ನು ವೈರಲ್ ಮಾಡಿದ್ದು ಯಾರೆಂದು  ಜೆಡಿಎಸ್​ ಮತ್ತು ಡಿಸಿಎಂ ಡಿಕೆ ಶಿವಕುಮಾರ್​​ ನಡುವೆ ಆರೋಪ-ಪ್ರತ್ಯಾರೋಪಗಳು ನಡೆದಿದ್ದವು.   ಬಳಿಕ ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾಗಿರುವ ಈ ವಿಡಿಯೋವನ್ನ ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ಅವರು ವೈರಲ್‌ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಈ ನವೀನ್‌ ಗೌಡ ಅವರು ಪ್ರಭಾವಿ ಸಚಿವ ಜಮೀರ್ ಅಹ್ಮದ್‌ ಖಾನ್ ಆಪ್ತ ಎಂದು ಹೇಳಲಾಗುತ್ತಿದೆ. ಈ ನಡುವೆ ಈ ಜಮೀರ್‌ ಜತೆಗೆ ನವೀನ್‌ ಗೌಡ ಇರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:11 pm, Tue, 28 May 24