AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋದಲ್ಲಿ ಯುವತಿ ಹೇಳುತ್ತಿರುವುದೆಲ್ಲಾ ಸುಳ್ಳು -ಟಿವಿ9ಗೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಪ್ರತಿಕ್ರಿಯೆ

ಈ ಬಗ್ಗೆ ಟಿವಿ9ಗೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಪ್ರತಿಕ್ರಿಯೆ ನೀಡಿದ್ದಾರೆ. ಸೌಮೇಂದು ಮುಖರ್ಜಿ ಅವರ ಹೇಳಿಕೆ ಹೀಗಿದೆ: ವಿಡಿಯೋದಲ್ಲಿ ಯುವತಿ ಹೇಳುತ್ತಿರುವುದೆಲ್ಲಾ ಸುಳ್ಳು. ಯುವತಿ ಯಾವುದೇ ರೀತಿಯ ವಿಡಿಯೋ ಕೊಟ್ಟಿಲ್ಲ

ವಿಡಿಯೋದಲ್ಲಿ ಯುವತಿ ಹೇಳುತ್ತಿರುವುದೆಲ್ಲಾ ಸುಳ್ಳು -ಟಿವಿ9ಗೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಪ್ರತಿಕ್ರಿಯೆ
SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಮತ್ತು ಸಿಡಿ ಲೇಡಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 25, 2021 | 12:53 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ CD ಪ್ರಕರಣದಲ್ಲಿ CD ಲೇಡಿ ಇದೀಗತಾನೆ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋದಲ್ಲಿ ಪ್ರಕರಣದಲ್ಲಿ ತನಿಖೆ ಕೈಗೆತ್ತಿಕೊಂಡಿರುವ ಎಸ್​ಐಟಿ ಪೊಲೀಸರ ಬಗ್ಗೆ ಅನುಮಾನ, ಆತಂಕ ವ್ಯಕ್ತಪಡಿಸಿದ್ದಾರೆ. ಪೊಲೀಸ್​ ಕಮಿಷನರ್​ ಅವರಿಗೆ ಈ ಹಿಂದೆ ವಿಡಿಯೋ ತಲುಪಿಸಿದ್ದೆ. ಆದರೆ ಅದನ್ನು ತಡವಾಗಿ ಬಿಡುಗಡೆ ಮಾಡಿ ನನಗೆ ಅನ್ಯಾಯ ಮಾಡಿದ್ದಾರೆ ಎಂದು ವಿಡಿಯೋದಲ್ಲಿ ಆರೋಪಿಸಿದ್ದಾರೆ.

ಈ ಬಗ್ಗೆ ಟಿವಿ9ಗೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ ಪ್ರತಿಕ್ರಿಯೆ ನೀಡಿದ್ದಾರೆ. ಸೌಮೇಂದು ಮುಖರ್ಜಿ ಅವರ ಹೇಳಿಕೆ ಹೀಗಿದೆ: ವಿಡಿಯೋದಲ್ಲಿ ಯುವತಿ ಹೇಳುತ್ತಿರುವುದೆಲ್ಲಾ ಸುಳ್ಳು. ಯುವತಿ ಯಾವುದೇ ರೀತಿಯ ವಿಡಿಯೋ ಕೊಟ್ಟಿಲ್ಲ. ಯುವತಿಗೆ ವಿಚಾರಣೆಗೆ ಹಾಜರಾಗಲು 5 ಬಾರಿ ನೋಟಿಸ್ ಕೊಟ್ಟಿದ್ದೇವೆ. 5 ಬಾರಿ ನೋಟಿಸ್ ಕೊಟ್ಟಿದ್ದರೂ ವಿಚಾರಣೆಗೆ ಬಂದಿಲ್ಲ. ಯುವತಿ ಇದ್ದ ಕಡೆಯೇ ವಿಚಾರಣೆ ಮಾಡುವುದಾಗಿ ಹೇಳಿದ್ದೆವು. ಆದರೂ ಯುವತಿ ತಾನಿರುವ ಮಾಹಿತಿಯನ್ನು ನೀಡಿಲ್ಲ ಎಂದಿದ್ದಾರೆ SIT ಮುಖ್ಯಸ್ಥ ಸೌಮೇಂದು ಮುಖರ್ಜಿ.

ತಾಜಾ ವಿಡಿಯೋ ಬಗ್ಗೆ ಎಸ್ಐಟಿ ಅಧಿಕಾರಿಗಳಿಂದ ಗಂಭೀರ ಚರ್ಚೆ CD ಯಲ್ಲಿರುವ ಯುವತಿ ನಮ್ಮ ಬಳಿ ಬಂದು ರಕ್ಷಣೆ ಕೇಳಿಲ್ಲ. ಆ ಯುವತಿ ಎಲ್ಲಿದ್ದಾರೆಂದು ಕೂಡ ನಮಗೆ ಮಾಹಿತಿ ಇಲ್ಲ. ಹೀಗಿರಬೇಕಾದರೆ ಯುವತಿಗೆ ರಕ್ಷಣೆ ಕೊಡೋದು ಹೇಗೆ? ಎಂದು ಎಸ್‌ಐಟಿ ಸಭೆಯಲ್ಲಿ ಯುವತಿ ವಿಡಿಯೋ ಬಗ್ಗೆ ಇದೀಗ ಚರ್ಚೆ ನಡೆಯುತ್ತಿದೆ. ಇಂದು ಬಿಡುಗಡೆ ಮಾಡಿರುವ 1 ನಿಮಿಷ 13 ಸೆಕೆಂಡ್ ವಿಡಿಯೋ ಬಗ್ಗೆ ಎಸ್ಐಟಿ ಅಧಿಕಾರಿಗಳು ಗಂಭೀರವಾಗಿ ಚರ್ಚಿಸುತ್ತಿದ್ದಾರೆ.

ಇದನ್ನೂ ಓದಿ: ಎಸ್​ಐಟಿಗೆ ಸಡ್ಡು ಹೊಡೆದ CD ಲೇಡಿ.. ಬಿಡುಗಡೆಯಾಯ್ತು ಮತ್ತೊಂದು ವಿಡಿಯೋ! ಪೊಲೀಸ್ ಕಮಿಷನರ್ ವಿರುದ್ಧ ಭಾರಿ ಆರೋಪ

Published On - 12:24 pm, Thu, 25 March 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ