ಪ್ರಜ್ವಲ್ ರೇವಣ್ಣ ವಿರುದ್ಧ 1,632 ಪುಟಗಳ ಮತ್ತೊಂದು ಚಾರ್ಜ್​​ಶೀಟ್ ಸಲ್ಲಿದ ಎಸ್​ಐಟಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಕೇಸ್​ಗೆ ಸಂಬಂಧಿಸಿದಂತೆ ಇತ್ತೀಗೆಚೆ ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಒಳಗೊಂಡ ಸುಮಾರು 2 ಸಾವಿರ ಪುಟಗಳ ಚಾರ್ಜ್​ಶೀಟ್​ನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಸಲ್ಲಿಸಿದ್ದರು. ಇದೀಗ ಸೋಮವಾರದಂದು ಎರಡನೇ ಚಾರ್ಜ್​​ಶೀಟ್ ಸಲ್ಲಿಕೆ ಮಾಡಿದ್ದಾರೆ. 

ಪ್ರಜ್ವಲ್ ರೇವಣ್ಣ ವಿರುದ್ಧ 1,632 ಪುಟಗಳ ಮತ್ತೊಂದು ಚಾರ್ಜ್​​ಶೀಟ್ ಸಲ್ಲಿದ ಎಸ್​ಐಟಿ
ಪ್ರಜ್ವಲ್ ರೇವಣ್ಣ ವಿರುದ್ಧ 1,632 ಪುಟಗಳ ಮತ್ತೊಂದು ಚಾರ್ಜ್​​ಶೀಟ್ ಸಲ್ಲಿದ ಎಸ್​ಐಟಿ
Follow us
ರಾಚಪ್ಪಾಜಿ ನಾಯ್ಕ್
| Updated By: ಗಂಗಾಧರ​ ಬ. ಸಾಬೋಜಿ

Updated on: Sep 09, 2024 | 6:28 PM

ಬೆಂಗಳೂರು, ಸೆಪ್ಟೆಂಬರ್​ 09: ಕಿಡ್ನ್ಯಾಪ್ ಆಗಿದ್ದ ಸಂತ್ರಸ್ತೆ ಅತ್ಯಾಚಾರ ಕೇಸ್ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಎಸ್​ಐಟಿ ಅಧಿಕಾರಿಗಳಿಂದ ಮತ್ತೊಂದು ಚಾರ್ಜ್​​ಶೀಟ್ ಸಲ್ಲಿಕೆ ಮಾಡಲಾಗಿದೆ. 113 ಸಾಕ್ಷಿಗಳನ್ನು ಒಳಗೊಂಡ 1,632 ಪುಟಗಳ ಚಾರ್ಜ್​ಶೀಟ್​ ಅನ್ನು ತನಿಖಾಧಿಕಾರಿ ಶೋಭಾರಿಂದ ಸಲ್ಲಿಕೆ ಮಾಡಲಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಕೇಸ್​ಗೆ ಸಂಬಂಧಿಸಿದಂತೆ ಇತ್ತೀಗೆಚೆ ಎಸ್ಐಟಿ ಅಧಿಕಾರಿಗಳು 123 ಸಾಕ್ಷ್ಯಗಳನ್ನು ಒಳಗೊಂಡ ಸುಮಾರು 2 ಸಾವಿರ ಪುಟಗಳ ಚಾರ್ಜ್​ಶೀಟ್​ನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಸಲ್ಲಿಸಿದ್ದರು. ಇದೀಗ ಸೋಮವಾರದಂದು ಎರಡನೇ ಚಾರ್ಜ್​​ಶೀಟ್ ಸಲ್ಲಿಕೆ ಮಾಡಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣ: 2 ಸಾವಿರ ಪುಟಗಳ ಚಾರ್ಜ್​ಶೀಟ್ ಸಲ್ಲಿಕೆ

ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಮೂರು ಪ್ರಕರಣಗಳನ್ನು ಎಸ್‌ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದು, ಸದ್ಯ ಪ್ರಜ್ವಲ್ ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೇ 30 ರಂದು ಜರ್ಮನಿಯಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಜ್ವಲ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದರು.

ಆರೋಪ ಕೇಳಿಬರ್ತಿದ್ದಂತೆ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ನಂತ್ರ ಎಸ್‌ಐಟಿ ಮುಂದೆ ವಿಚಾರಣೆ ಎದುರಿಸಿದ್ದರು. ಪ್ರಜ್ವಲ್‌ನ ಕರ್ಮಕಾಂಡಗಳು ಚಾರ್ಜ್‌ಶೀಟ್ ಮೂಲಕ ಬಯಲಾಗಿದ್ದವು.

ಬಸವನಗುಡಿ ಮನೆಯಲ್ಲಿ ಪ್ರಜ್ವಲ್ ಅತ್ಯಾಚಾರ ಎಸಗಿದ್ದರು. ಮನೆ ಕ್ಲೀನ್ ಮಾಡಲು ಬಂದಿದ್ದಾಕೆ ಮೇಲೆ ಎರಗಿದ್ದ. ಕ್ಲೀನ್ ಮಾಡಲೆಂದು ಮನೆಗೆ ಬಂದಿದ್ದ ಮಹಿಳೆ ಮೇಲೆ, ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದಾಗ ಅತ್ಯಾಚಾರ ಎಸಗಿದ್ದರು. ರೇಪ್ ಬಳಿಕ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದರು. ಯಾರಿಗೂ ಹೇಳದಂತೆ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದರಂತೆ. ಯಾರಿಗಾದ್ರೂ ಹೇಳಿದ್ರೆ ನಿನ್ನ ಪತಿಯನ್ನು ಜೈಲಿಗೆ ಕಳಿಸುವುದಾಗಿ ಬೆದರಿಸಿದ್ದರು.

ಇದನ್ನೂ ಓದಿ: ಎಸ್ಐಟಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಎಚ್​​ಡಿ ರೇವಣ್ಣಗೆ ಬಿಗ್​ ರಿಲೀಫ್

ಇಷ್ಟೆ ಅಲ್ಲದೇ ಪ್ರಜ್ವಲ್, ಸಂತ್ರಸ್ತೆ ಮಗಳಿಗೂ ವಿಡಿಯೋ ಕರೆ ಮಾಡಿ ಲೈಂಗಿಕ ಕಿರುಕುಳ ಕೊಟ್ಟಿದ್ದ ಅನ್ನೋದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಲಾಗಿತ್ತು. ಇನ್ನು ಸಾಕ್ಷ್ಯನಾಶ ಮಾಡುವ ಸಲುವಾಗಿಯೇ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದ ಅಂತಾ, ಹೊಳೆನರಸೀಪುರ ಠಾಣೆಯಲ್ಲಿನ ಕೇಸ್​ನ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್