ವಿಚಾರಣೆ ವೇಳೆ ತಡಬಡಾಯಿಸಿದ ರಮೇಶ್ ಜಾರಕಿಹೊಳಿ; ಕೆಲ ಪ್ರಶ್ನೆಗಳಿಗೆ ಉತ್ತರಿಸಲು 4 ದಿನಗಳ ಕಾಲಾವಕಾಶ ಕೋರಿಕೆ

ಎಸ್‌ಐಟಿ ಅಧಿಕಾರಿಗಳ ಮರುಪ್ರಶ್ನೆಗಳಿಗೆ ಉತ್ತರ ನೀಡದೇ 4 ದಿನಗಳ ಕಾಲಾವಕಾಶವನ್ನು ಶಾಸಕ ರಮೇಶ್ ಜಾರಕಿಹೊಳಿ ಕೇಳಿದ್ದಾರೆ ಎನ್ನಲಾಗಿದೆ. SIT ಸಾಕ್ಷ್ಯಗಳನ್ನು ನೋಡಿ ರಮೇಶ್ ಜಾರಕಿಹೊಳಿ ತಡಬಡಾಯಿಸಿ, 2 ಬಾರಿ ನೀರು ಸಹ ಕುಡಿದಿದ್ದಾರೆ. ಕೆಲವು ಪ್ರಶ್ನೆಗಳಿಗೆ ಹಾರಿಕೆ ಉತ್ತರ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.

ವಿಚಾರಣೆ ವೇಳೆ ತಡಬಡಾಯಿಸಿದ ರಮೇಶ್ ಜಾರಕಿಹೊಳಿ; ಕೆಲ ಪ್ರಶ್ನೆಗಳಿಗೆ ಉತ್ತರಿಸಲು 4 ದಿನಗಳ ಕಾಲಾವಕಾಶ ಕೋರಿಕೆ
ಸಾಂದರ್ಭಿಕ ಚಿತ್ರ
Follow us
| Updated By: ಸಾಧು ಶ್ರೀನಾಥ್​

Updated on: Mar 29, 2021 | 3:54 PM

ಬೆಂಗಳೂರು: ಎಸ್‌ಐಟಿ ತಂಡ ಮತ್ತು ಕಬ್ಬನ್ ಪಾರ್ಕ್ ಪೊಲೀಸರು ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಸತತ 4 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು. ವಿಚಾರಣೆಯಲ್ಲಿ ಕೆಲವು ಪ್ರಶ್ನೆಗಳಿಗೆ ಉತ್ತರಿಸದೆ, ವಕೀಲರ ಜತೆ ಚರ್ಚಿಸಿ ಪ್ರಶ್ನೆಗಳಿಗೆ ಉತ್ತರಿಸುವುದಾಗಿ ರಮೇಶ್ ಜಾರಕಿಹೊಳಿ ಜಾರಿಕೊಂಡಿದ್ದಾರೆ. ವಿಚಾರಣೆ ತಂಡ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು 4 ದಿನ ಸಮಯ ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಚಾರಣೆಯಲ್ಲಿ ವಿಡಿಯೋ ಮತ್ತು ಯುವತಿಯ ಬಗ್ಗೆ ಎಸ್‌ಐಟಿ ಪ್ರಶ್ನೆಗಳನ್ನು ಮುಂದಿಟ್ಟಿದೆ. ವಿಡಿಯೋದಲ್ಲಿರುವುದು ರಮೇಶ್ ಜಾರಕಿಹೊಳಿ ಅವರೇ ಎಂಬುದಕ್ಕೆ ಎಸ್​ಐಟಿ ತಂಡ ಸಾಕ್ಷ್ಯಗಳನ್ನು ಮುಂದಿಟ್ಟಿದೆ. ಜತೆಗೆ, ಯುವತಿ ಜೊತೆ ಸಂಪರ್ಕದಲ್ಲಿದ್ದ ಬಗ್ಗೆ ಸಹ SIT ಸಾಕ್ಷ್ಯ ತೆರೆದಿಟ್ಟಿದೆ. ಅವುಗಳನ್ನು ನೋಡಿ ರಮೇಶ್ ಜಾರಕಿಹೊಳಿ ತಡಬಡಾಯಿಸಿ 2 ಬಾರಿ ನೀರು ಸಹ ಕುಡಿದಿದ್ದಾರೆ. ಕೆಲವು ಪ್ರಶ್ನೆಗಳಿಗೆ ಹಾರಿಕೆ ಉತ್ತರ ನೀಡಲು ಮುಂದಾದರು. ಈ ವೇಳೆ ಎಸ್‌ಐಟಿ ಅಧಿಕಾರಿಗಳ ಮರುಪ್ರಶ್ನೆಗಳಿಗೆ ಉತ್ತರ ನೀಡದೇ 4 ದಿನಗಳ ಕಾಲಾವಕಾಶವನ್ನು ಶಾಸಕ ರಮೇಶ್ ಜಾರಕಿಹೊಳಿ ಕೇಳಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆಯಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಚಾರಣೆ ಆರಂಭವಾಗಿತ್ತು. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಮಾರುತಿ ಅವರಿಂದ ರಮೇಶ್ ಜಾರಕಿಹೊಳಿ ವಿಚಾರಣೆ ನಡೆದಿತ್ತು. ಕ್ಯಾಮರಾ ಮುಂದೆ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ತನಿಖಾಧಿಕಾರಿ ದಾಖಲಿಸಿಕೊಂಡಿದ್ದರು. ಎಸ್​ಐಟಿಯ ಹಿರಿಯ ಅಧಿಕಾರಿ, ಸಿಸಿಬಿ ಅಪರಾಧ ವಿಭಾಗದ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಅವರು ಆಡುಗೊಡಿ ಟೆಕ್ನಿಕಲ್ ಸೆಲ್​ನಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ:ಸಿಡಿ ಆರೋಪಿ ರಮೇಶ್ ಜಾರಕಿಹೊಳಿ ಬಂಧನ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ; ನಲಪಾಡ್ ಹ್ಯಾರಿಸ್ ಬಂಧನ

ನನ್ನನ್ನು ಸ್ವಾಗತಿಸಿದ ರಮೇಶ್ ಜಾರಕಿಹೊಳಿ ಬೆಂಬಲಿಗರಿಗೆ ಅಭಿನಂದನೆಗಳು: ಡಿ.ಕೆ. ಶಿವಕುಮಾರ್ ಟಾಂಗ್

Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ