AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆಗೆ ಹಾಜರಾಗಲು ರಮೇಶ್ ಜಾರಕಿಹೊಳಿಗೆ ಎಸ್​ಐಟಿ ನೋಟಿಸ್

ಮಂಗಳವಾರ ಬೆಳಿಗ್ಗೆ 10 ಗಂಟೆಗೆ ರಮೇಶ್ ವಿಚಾರಣೆ ನಡೆಯಲಿದೆ ಎಂದು ನೋಟಿಸ್​ನಲ್ಲಿ ಮಾಹಿತಿ ನೀಡಲಾಗಿದೆ. ಎಸ್​ಐಟಿ ಅಧಿಕಾರಿಗಳು ಗೋಕಾಕ್​ಗೆ ತೆರಳಿ ನೋಟಿಸ್ ಜಾರಿ ಮಾಡಿದ್ದಾರೆ.

ವಿಚಾರಣೆಗೆ ಹಾಜರಾಗಲು ರಮೇಶ್ ಜಾರಕಿಹೊಳಿಗೆ ಎಸ್​ಐಟಿ ನೋಟಿಸ್
ರಮೇಶ್ ಜಾರಕಿಹೊಳಿ (ಸಂಗ್ರಹ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 16, 2021 | 9:30 PM

Share

ಬೆಂಗಳೂರು: ಮಾಜಿ ಸಚಿವ ಮತ್ತು ಸಿಡಿ ಪ್ರಕರಣದ ಆರೋಪಿ ರಮೇಶ್​ ಜಾರಕಿಹೊಳಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್​ಐಟಿ ನೋಟಿಸ್ ನೀಡಿದೆ. ಮಂಗಳವಾರ ಬೆಳಿಗ್ಗೆ 10 ಗಂಟೆಗೆ ರಮೇಶ್ ವಿಚಾರಣೆ ನಡೆಯಲಿದೆ ಎಂದು ನೋಟಿಸ್​ನಲ್ಲಿ ಮಾಹಿತಿ ನೀಡಲಾಗಿದೆ. ಎಸ್​ಐಟಿ ಅಧಿಕಾರಿಗಳು ಗೋಕಾಕ್​ಗೆ ತೆರಳಿ ನೋಟಿಸ್ ಜಾರಿ ಮಾಡಿದ್ದಾರೆ. ಕೊರೊನಾ ಸೋಂಕಿಗೆ ತುತ್ತಾಗಿದ್ದ ಶಾಸಕ ರಮೇಶ್ ಜಾರಕಿಹೊಳಿ ಪ್ರಸ್ತುತ ಕ್ವಾರಂಟೈನ್​ನಲ್ಲಿದ್ದಾರೆ. ಹೀಗಾಗಿ ಬಾಲಚಂದ್ರ ಜಾರಕಿಹೊಳಿ ಕಚೇರಿಗೆ ತೆರಳಿದ ಎಸ್​ಐಟಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.

ವಕೀಲರ ಜೊತೆಗೆ ರಮೇಶ್​ ಚರ್ಚೆ ರಾಜಕೀಯದಲ್ಲಿ ಭಾರಿ ಸದ್ದು ಮಾಡಿದ್ದ ಅನೇಕ ತಿರುವುಗಳಿಂದ ಕುತೂಹಲ ಹುಟ್ಟು ಹಾಕಿದ್ದ ಸಿಡಿ ಪ್ರಕರಣ ಸಂಬಂಧ ಈಚೆಗೆ ರಮೇಶ್ ಜಾರಕಿಹೊಳಿ ತಮ್ಮ ವಕೀಲರ ಜೊತೆ ಚರ್ಚೆ ನಡೆಸಿದ್ದರು ಎಂದು ತಿಳಿದುಬಂದಿದೆ. ಏಪ್ರಿಲ್ 13ರಂದು ಸಿಡಿ ಸಂತ್ರಸ್ತೆ ವಿಡಿಯೋ ಬಿಡುಗಡೆ ಮಾಡಿದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸುಪ್ರೀಂ ಕೋರ್ಟ್ ವಕೀಲರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು ಎನ್ನಲಾಗಿದೆ.

ಕೊರೊನಾ ಪಾಸಿಟಿವ್ ಬಂದಿದೆ ಎಂಬ ಕಾರಣಕ್ಕಾಗಿ ಹೋಮ್​ ಕ್ವಾರಂಟೈನ್ ಆಗಿರುವ ರಮೇಶ್ ಜಾರಕಿಹೊಳಿ ಕ್ವಾರಂಟೈನ್ ಮುಗಿದ ಬಳಿಕ ಅಗತ್ಯ ದಾಖಲೆಗಳೊಂದಿಗೆ ಎಸ್​ಐಟಿ ಮುಂದೆ ಹಾಜರಾಗಲಿದ್ದಾರೆ ಎಂದು ಜಾರಕಿಹೊಳಿ ಆಪ್ತರು ಹೇಳಿದ್ದಾರೆ. ಎಸ್​ಐಟಿಗೆ ಪೂರಕ ದಾಖಲೆಗಳನ್ನು ಒದಗಿಸಿ ಆರೋಪ ಮುಕ್ತರಾಗಿ ಬರಲು ರಮೇಶ್ ಪ್ಲಾನ್ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಈಗಾಗಲೇ ಕೆಲ ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದ್ದಾರೆ. ಸಂತ್ರಸ್ತ ಯುವತಿಯ ಆರೋಪಗಳಿಗೆ ತಕ್ಕ ಉತ್ತರ ನೀಡಲು ವಕೀಲರ ಸಲಹೆಯಂತೆ ಸಾಕ್ಷ್ಯಗಳ ಜೊತೆಗೆ ವಿಚಾರಣೆಗೆ ಬರಲು ರಮೇಶ್ ತಯಾರಿ ನಡೆಸಿದ್ದಾರೆ.

ವಿಡಿಯೋದಲ್ಲಿ ಯುವತಿ ಹೇಳಿದ್ದೇನು? ಎಸ್​ಐಟಿ ಅಧಿಕಾರಿಗಳ ಎದುರು ಸಿಡಿ ಸಂತ್ರಸ್ತ ಯುವತಿ ನೀಡಿದ್ದ ಹೇಳಿಕೆಗಳ ಬಗ್ಗೆ ಅಪಸ್ವರ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ವಿಡಿಯೊ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದ ಯುವತಿ, ನಾನು ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧಳಾಗಿದ್ದೇನೆ. ಎಸ್‌ಐಟಿ ಅಧಿಕಾರಿಗಳ ಮುಂದೆ ಉಲ್ಟಾ ಹೇಳಿಕೆ ನೀಡಿಲ್ಲ. ನಾನು ಒತ್ತಡದಿಂದ ಹೇಳಿಕೆ ನೀಡಿದ್ದೇನೆಂಬುದು ಸತ್ಯಕ್ಕೆ ದೂರವಾದ ಮಾತು. ಜಡ್ಜ್‌ ಮುಂದೆ ಮತ್ತೊಮ್ಮೆ ಹೇಳಿಕೆ ನೀಡಲು ಮನವಿ ಮಾಡಿಲ್ಲ. ಪೋಷಕರ ಜೊತೆ ಚರ್ಚಿಸಿದ ಬಳಿಕ ಮನಸ್ಸು ಬದಲಾಯಿಸಿಲ್ಲ. ಪ್ರಕರಣ ಸಂಬಂಧ ಹೆಚ್ಚಿನ ಮಾಹಿತಿ ನೀಡಲು ನಿನ್ನೆ ಎಸ್‌ಐಟಿ ಅಧಿಕಾರಿಗಳ ಮುಂದೆ ನಾನು ಹಾಜರಾಗಿದ್ದೆ. ಆದ್ರೆ ಎಸ್‌ಐಟಿ ಮುಂದೆ ಉಲ್ಟಾ ಹೇಳಿಕೆ ನೀಡಿಲ್ಲ. ಇನ್ನೂ ರಮೇಶ್ ಜಾರಕಿಹೊಳಿಯನ್ನು ವಿಚಾರಣೆಗೆ ಕರೆಸಿಲ್ಲ. ಈ ಬಗ್ಗೆ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದೇನೆ. ರಮೇಶ್ ಜಾರಕಿಹೊಳಿ ಕೊರೊನಾ ಪೀಡಿತರಂತೆ ನಟಿಸುತ್ತಿದ್ದಾರೆ. ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಈ ರೀತಿ ಸುದ್ದಿ ಸೃಷ್ಟಿಸಿ ನನ್ನ ವಿರುದ್ದ ಷಡ್ಯಂತ್ರ ಮಾಡಿರುವ ಸಾಧ್ಯತೆ ಇದೆ’ ಎಂದು ಹೇಳಿದ್ದರು.

ಈ ಹೇಳಿಕೆಗೆ ಸಂಬಂಧಿಸಿದಂತೆ ಪತ್ರವನ್ನೂ ಬರೆದಿದ್ದಾರೆ. ಆ ಪತ್ರ ಹಾಗೂ ಹೇಳಿಕೆ ನೀಡಿರುವ ವಿಡಿಯೋ ಬಿಡುಗಡೆ ಆದ ಬಳಿಕ ರಮೇಶ್​ ಜಾರಕಿಹೊಳಿ ವಕೀಲರ ಜೊತೆ ಚರ್ಚಿಸಿದ್ದರು ಎಂದು ತಿಳಿದುಬಂದಿದೆ.

(SIT Issues Notice to Ramesh Jarkiholi to Face Inquiry)

ಇದನ್ನೂ ಓದಿ: ರಮೇಶ್ ಜಾರಕಿಹೊಳಿ ಸಿಡಿ ಕೇಸ್​ಗೆ ಸಿಕ್ತು ಮಹತ್ವದ ಸಾಕ್ಷ್ಯ.. ಮಾಲೂರಿನ ಯುವತಿಯಿಂದ ಕಲೆ ಹಾಕುತ್ತಿದ್ದಾರೆ ಮಾಹಿತಿ

ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ದಾಖಲಾದ ಆಸ್ಪತ್ರೆಗೇ ಭೇಟಿ ನೀಡಿ ಆರೋಗ್ಯ ಸಂಬಂಧಿ ದಾಖಲೆ ಪರಿಶೀಲಿಸಿದ ಎಸ್​ಐಟಿ