ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಬಂಧನ
ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. 2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್ ಕಳವು ಪ್ರಕರಣದಲ್ಲಿ ಶ್ರೀಕಿಯನ್ನು ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣ ಎಸ್ಐಟಿಗೆ ವರ್ಗಾವಣೆ ಆಗಿತ್ತು.
ಬೆಂಗಳೂರು, ಮೇ 07: ಬಿಟ್ ಕಾಯಿನ್ ಹಗರಣ (Bitcoin Scam) ಪ್ರಕರಣದ ಆರೋಪಿ ಶ್ರೀಕಿ (Sriki) ಅಲಿಯಾಸ್ ಶ್ರೀಕೃಷ್ಣನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ. 2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್ ಕಳವು ಪ್ರಕರಣದಲ್ಲಿ ಶ್ರೀಕಿಯನ್ನು ಸಿಐಡಿ ವಿಶೇಷ ತನಿಖಾ ಅಧಿಕಾರಿಗಳು (SIT) ಬಂಧಿಸಿದ್ದಾರೆ. ಪ್ರಕರಣ ಎಸ್ಐಟಿಗೆ ವರ್ಗಾವಣೆ ಆಗಿತ್ತು.
2015ರಲ್ಲಿ ಕೆಂಪೇಗೌಡನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಕೇಸ್‌ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು.ಈ ಕೇಸ್ ತನಿಖೆ ವೇಳೆ ಬಿಟ್‌ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು.2020ರಲ್ಲಿ ಸುಮಾರು 1000 ಕೋಟಿ ಹಗರಣದ ಬಿಟ್‌ಕಾಯಿನ್ ಕೇಸ್‌ನಲ್ಲಿ ಶ್ರೀಕಿ ಬಂಧನವಾಗಿತ್ತು. ಅಲ್ಲದೆ ಶ್ರೀಕಿ ಶ್ರೀಕಿ ಕಳೆದ ಐದಾರು ವರ್ಷಗಳಿಂದ ವಿವಿಧ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್‌ಫಾರ್ಮ್‌ಗಳನ್ನು ಹ್ಯಾಕ್ ಮಾಡಿ ಅವುಗಳಿಂದ ಸಾವಿರಾರು ಬಿಟ್‌ಕಾಯಿನ್‌ಗಳನ್ನು ಎಗರಿಸಿದ್ದನು. ಅಲ್ಲದೇ ರಾಜ್ಯ ಸರ್ಕಾರದ ಇ-ಸಂಗ್ರಹಣಾ ಪೋರ್ಟಲ್ ಜಾಲತಾಣ ಹ್ಯಾಕ್ ಮಾಡಿದ್ದನು.
ಇದನ್ನೂ ಓದಿ: ಬಿಟ್ ಕಾಯಿನ್ ಪ್ರಕರಣ: ವಿಚಾರಣೆ ನಡೆಸಿದ್ದ ಪೊಲೀಸ್ ಅಧಿಕಾರಿಗಳಿಗೆ ಧಮ್ಕಿ, ಶ್ರೀಕಿಯ ಸ್ಫೋಟ ಅಂಶ ಬೆಳಕಿಗೆ
ಈ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಹೊರಗಡೆ ಬಂದಿದ್ದನು. ಇದಾದ ಬಳಿಕ ಸಿಸಿಬಿ ಪೊಲೀಸರ ವಿರುದ್ಧ ದಾಖಲೆ ತಿರುಚಿರುವ ಆರೋಪಗಳು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಬಿಟ್ ಕಾಯಿನ್ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಯಿತು.
ಸಿಐಡಿ ಅಧಿಕಾರಿಗಳು ಆರೋಪಿ ಶ್ರೀಕಿ ಸಿಐಡಿ ತನಿಖೆಗೆ ಹಾಜರಾಗದೆ ಕಳ್ಳಾಟವಾಡುತ್ತಿದ್ದನು. ಸಿಐಡಿ ಪೊಲೀಸರು 5-6 ಬಾರಿ ನೋಟಿಸ್ ನೀಡಿದರೂ ಶ್ರೀಕಿ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ. ಪ್ರತಿಬಾರಿಯೂ ಒಂದೊಂದು ಕಾರಣ ನೀಡುತ್ತಿದ್ದನು. ತಂದೆಗೆ ಹುಷಾರಿಲ್ಲ, ತಾಯಿಗೆ ಹುಷಾರಿಲ್ಲ, ನನಗೆ ಹುಷಾರಿಲ್ಲ ಎಂದು ಕಾರಣ ನೀಡಿ ಸಿಐಡಿ ಪೊಲೀಸರ ವಿಚಾರಣೆಗೆ ಹಾಜರಾಗುತ್ತಿರಲಿಲ್ಲ. ಇದೀಗ ಸಿಐಡಿ ಅಧಿಕಾರಿಗಳು ಶ್ರೀಕಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:30 pm, Tue, 7 May 24