ಸಿಡಿ ಸಂತ್ರಸ್ತೆಯ ಭದ್ರತೆಗೆ ಪೊಲೀಸ್​ ಕಬ್ಬಡಿ ಟೀಂ ರೆಡಿ!

ಯುವತಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ನೀಡುವ ನಿಟ್ಟಿನಲ್ಲಿ ಪೊಲೀಸ್ ಕಬ್ಬಡಿ ಟೀಮ್ ಬಳಕೆ ಮಾಡಲು ನಿರ್ಧರಿಸಲಾಗಿದೆ.

ಸಿಡಿ ಸಂತ್ರಸ್ತೆಯ ಭದ್ರತೆಗೆ ಪೊಲೀಸ್​ ಕಬ್ಬಡಿ ಟೀಂ ರೆಡಿ!
ಸಿಡಿಯಲ್ಲಿದ್ದ ಯುವತಿ
Follow us
Skanda
| Updated By: Digi Tech Desk

Updated on:Apr 01, 2021 | 12:22 PM

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಭದ್ರತೆಗೆ ಪೊಲೀಸ್​ ವಿಶೇಷ ತಂಡ ರಚನೆಯಾಗಿದೆ. ಎಸ್​ಐಟಿ ಪೊಲೀಸರಿಂದ ಸಂತ್ರಸ್ತೆಗೆ ರಕ್ಷಣೆ ಒದಗಿಸಲು ಪೊಲೀಸ್ ಕಬ್ಬಡಿ ಟೀಮ್ ಬಳಕೆ ಮಾಡಲು ನಿರ್ಧರಿಸಲಾಗಿದೆ. ಯುವತಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತೆ ನೀಡುವ ನಿಟ್ಟಿನಲ್ಲಿ ಈ ವಿಶೇಷ ತಂಡವನ್ನು ರಚಿಸಿರುವುದಾಗಿ ತಿಳಿದುಬಂದಿದೆ.

ಇನ್ನೊಂದೆಡೆ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಸಿಡಿಯಲ್ಲಿದ್ದ ಯುವತಿಗೆ ಮತ್ತೊಂದು ನೋಟಿಸ್ ನೀಡಿದ್ದು, ಇಂದು (ಏಪ್ರಿಲ್ 1) ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಸ್ಥಳ ಮಹಜರು ಪ್ರಕ್ರಿಯೆ ಬಾಕಿ ಹಿನ್ನೆಲೆ ಇಂದು ವಿಚಾರಣೆ ನಡೆಯಲಿದೆ. ಯುವತಿ ಇಂದು ನೇರವಾಗಿ ಸ್ಥಳ ಮಹಜರಿಗೆ ಹಾಜರಾಗುವ ಸಾಧ್ಯತೆ ಇದೆ. ಈ ಮಧ್ಯೆ, ಯುವತಿಯನ್ನ ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ ಎಂದು ಯುವತಿ ಪರ ವಕೀಲ ಕೆ.ಎನ್.ಜಗದೀಶ್ ನಿನ್ನೆ ಹೇಳಿಕೆ ನೀಡಿದ್ದರು.

ಇದೆಲ್ಲದರೊಂದಿಗೆ ಹೈಕೋರ್ಟ್​ ಮೆಟ್ಟಿಲೇರಿರುವ ಯುವತಿಯ ತಂದೆ, ನನ್ನ ಮಗಳು ನೀಡಿರುವ ಹೇಳಿಕೆಗಳನ್ನು ಯಾವ ಕಾರಣಕ್ಕೂ ಪರಿಗಣಿಸಬೇಡಿ. CRPC 164 ಅಡಿಯಲ್ಲಿ ದಾಖಲು ಮಾಡಿಕೊಳ್ಳಲಾದ ಹೇಳಿಕೆಗಳನ್ನು ರದ್ದುಗೊಳಿಸಿ ಎಂದು ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿರುವುದು ಪ್ರಕರಣಕ್ಕೆ ಹೊಸ ತಿರುವನ್ನೂ ನೀಡಿದೆ. ನನ್ನ ಮಗಳು ಯಾವುದೋ ಒತ್ತಡಕ್ಕೆ ಒಳಗಾಗಿ ಹೇಳಿಕೆ ನೀಡಿದ್ದಾಗಿ ಶಂಕೆ ವ್ಯಕ್ತವಾಗುತ್ತಿದೆ.

ಆಕೆ ಸ್ವ ಇಚ್ಛೆಯಿಂದ ಹೇಳಿಕೆ ನೀಡುವ ಸ್ಥಿತಿಯಲ್ಲಿ ಈಗಿಲ್ಲ. ಕೆಲ ದಿನಗಳ ಕಾಲ ಆಕೆಯನ್ನು ಏಕಾಂತದಲ್ಲಿ ಇರಿಸಬೇಕು ಅಥವಾ ನ್ಯಾಯಾಂಗದ ಸುಪರ್ದಿಯಲ್ಲಿ ಇಡಬೇಕು. ಅದೂ ಆಗದೆ ಇದ್ದರೆ ಕೋರ್ಟ್ ಸೂಚಿಸಿದ ಸ್ವತಂತ್ರ ಸಂಸ್ಥೆಯ ಸುಪರ್ದಿಯಲ್ಲಿ ಇಡಬೇಕು. ಅಂದಾಗ ಮಾತ್ರ ನನ್ನ ಮಗಳು ಸ್ವ ಇಚ್ಛೆಯಿಂದ ಹೇಳಿಕೆ ನೀಡಲು ಸಾಧ್ಯ.

ಈ ವಿಚಾರವನ್ನು ಹಿಂದೆ ಮಾಧ್ಯಮಗಳ ಮೂಲಕವೂ ಮನವಿ ಮಾಡಿದ್ದೇನೆ ಎಂದು ಹೈಕೋರ್ಟ್​ಗೆ ಸಲ್ಲಿಸಿದ ಅರ್ಜಿಯಲ್ಲಿ ಯುವತಿಯ ತಂದೆ ಉಲ್ಲೇಖಿಸಿದ್ದಾರೆ ಎನ್ನಲಾಗಿತ್ತು. ಏತನ್ಮಧ್ಯೆ ಸಂತ್ರಸ್ತೆ ಭದ್ರತೆಗೆ ಪೊಲೀಸ್​ ವಿಶೇಷ ತಂಡ ರಚನೆಯಾಗಿರುವುದು ಪ್ರಕರಣಕ್ಕೆ ಸಂಬಂಧಿಸಿಂತೆ ಹೊಸ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ.

ಇದನ್ನೂ ಓದಿ: ನನ್ನ ಮಗಳ ಹೇಳಿಕೆ ಪಡೆಯುವಾಗ ಕಾಂಗ್ರೆಸ್ ಪದಾಧಿಕಾರಿ ಯಾಕೆ ಉಪಸ್ಥಿತರಿದ್ದರು? ಇದು ಕಾನೂನು ಬಾಹಿರ ಪ್ರಕ್ರಿಯೆ: ಸಿಡಿ ಸಂತ್ರಸ್ತೆಯ ತಂದೆಯಿಂದ ಆರೋಪ

ಸಿಡಿ ಸಂತ್ರಸ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​; ಮಗಳ ಹೇಳಿಕೆ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ತಂದೆ

Published On - 11:04 am, Thu, 1 April 21

ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು