AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

60 ವರ್ಷದ ಮಹಿಳೆಗೆ ಪ್ರಜ್ವಲ್​ನಿಂದ​ ಲೈಂಗಿಕ ದೌರ್ಜನ್ಯ: ಚಾರ್ಜ್​ ಶೀಟ್​ನಲ್ಲಿ ಉಲ್ಲೇಖ

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ತನಿಖೆ ನಡೆಸಿದ ವಿಶೇಷ ತನಿಖಾ ತಂಡ ಎರಡನೇ ಚಾರ್ಜ್​​ ಶೀಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ. ಚಾರ್ಜ್​ ಶೀಟ್​​ನಿಂದ ಆಘಾತಕಾರಿ ಅಂಶಗಳು ಬಹಿರಂಗಗೊಂಡಿವೆ.

60 ವರ್ಷದ ಮಹಿಳೆಗೆ ಪ್ರಜ್ವಲ್​ನಿಂದ​ ಲೈಂಗಿಕ ದೌರ್ಜನ್ಯ: ಚಾರ್ಜ್​ ಶೀಟ್​ನಲ್ಲಿ ಉಲ್ಲೇಖ
ಪ್ರಜ್ವಲ್​ ರೇವಣ್ಣ
Shivaprasad B
| Edited By: |

Updated on:Sep 11, 2024 | 12:57 PM

Share

ಬೆಂಗಳೂರು, ಸೆಪ್ಟೆಂಬರ್​ 11: ಬಂಧಿತನಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅವರು 60 ವರ್ಷ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ಎರಡನೇ ಚಾರ್ಜ್ ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ.​​ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಎಸ್​ಐಟಿ 113 ಸಾಕ್ಷಿಗಳನ್ನು ಒಳಗೊಂಡ 1632 ಪುಟಗಳ ಚಾರ್ಜ್​ಶೀಟ್ ಅನ್ನು ಸೋಮವಾರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ​ಸಲ್ಲಿಸಿದೆ.

ಹೊಳೆನರಸೀಪುರದಲ್ಲಿ 60 ವರ್ಷದ ಮನೆಕೆಲಸದಾಕೆಯ ಮೇಲೆ ಪ್ರಜ್ವಲ್​ ರೇವಣ್ಣ ಅತ್ಯಾಚಾರ ಎಸಗಿದ್ದಾರೆ ಎಂದು ಚಾರ್ಜ್​ಶೀಟ್​ನಲ್ಲಿ ಎಸ್​ಐಟಿ ಅಧಿಕಾರಿಗಳು ಉಲ್ಲೇಖ ಮಾಡಿದ್ದಾರೆ. ಸಂತ್ರಸ್ತೆಯನ್ನ ಹೆದರಿಸಿ ಹಲವು ಬಾರಿ ದೌರ್ಜನ್ಯ ಎಸಗಿರುವುದು ತನಿಖೆಯಲ್ಲಿ ಧೃಡವಾಗಿದೆ.

ಕೃತ್ಯ ಎಸಗುವಾಗ ಮೊಬೈಲ್ ಮೂಲಕ ಪ್ರಜ್ವಲ್ ರೇವಣ್ಣ ಮೊಬೈಲ್​ನಲ್ಲಿ ವಿಡಿಯೋ ಚಿತ್ರಿಕರಿಸಿದ್ದರು. ಸಂತ್ರಸ್ತೆ ಕೈಮುಗಿದು ನಿಮ್ಮ ತಾತ ಹಾಗೂ ತಂದೆಗೆ ಊಟ ಬಡಿಸಿದ್ದೇನೆ, ನನ್ನ ಬಿಟ್ಟು ಬಿಡು ಎಂದು ಸಂತ್ರಸ್ತೆ‌ ಅಂಗಲಾಚಿದರೂ ಬಿಡದ ಪ್ರಜ್ವಲ್​ ರೇವಣ್ಣ ದೌರ್ಜನ್ಯ ಎಸಗಿದ್ದಾರೆ ಎಂದು ಎಸ್​ಐಟಿ ಉಲ್ಲೇಖಿಸಿದೆ.

ಚಾರ್ಜ್​​ಶೀಟ್​​ನಲ್ಲಿ ಸಿಆರ್​ಪಿಸಿ 164 ಅಡಿ ಸಂತ್ರಸ್ತೆ ಹಾಗೂ ಪ್ರಮುಖ ಸಾಕ್ಷಿಗಳ ಹೇಳಿಕೆ ದಾಖಲು ಮಾಡಲಾಗಿದೆ. 113 ಮಂದಿ ಸಾಕ್ಷಿದಾರರ ಹೇಳಿಕೆ, ಡಿಜಿಟಲ್ ಸಾಕ್ಷಿದಾರರ, ಎಫ್ಎಸ್ಎಲ್ ವರದಿ ಸಲ್ಲಿಕೆ ಮಾಡಲಾಗಿದೆ. ಪ್ರಜ್ವಲ್​ ರೇವಣ್ಣ ಒಟ್ಟು ನಾಲ್ವರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: ಪ್ರಜ್ವಲ್​ ಅತ್ಯಾಚಾರ ಎಸಗಿರುವುದು ನಿಜ, ವಿಡಿಯೋಗಳೆಲ್ಲವೂ ಅಸಲಿ: ಎಸ್​ಐಟಿ

ಡಿಎನ್​ಎ ಪರೀಕ್ಷೆ ಮುಂದಾದ SIT

ತನಿಖೆ ವೇಳೆ ಎಸ್​ಐಟಿ ಅಧಿಕಾರಿಗಳು ಸಂತ್ರಸ್ತೆಯರ ಬಟ್ಟೆಗಳನ್ನ ವಶಕ್ಕೆ ಪಡೆದಿದ್ದರು. ಜೊತೆಗೆ ಎಸ್​ಐಟಿ ಅಧಿಕಾರಿಗಳು ಬಸವನಗುಡಿ ಹಾಗೂ ಹೊಳೆನರಸೀಪುರ ಮನೆಗಳಲ್ಲಿ, ತೋಟದ ಮ‌ನೆಯಲ್ಲಿ ಪ್ರಜ್ವಲ್ ರೇವಣ್ಣ ಬಳಸಿದ್ದ ಬೆಡ್ ಶೀಟ್​ಗಳನ್ನ ವಶಕ್ಕೆ ಪಡೆದಿದ್ದರು. ಇದೀಗ ಈ ಎಲ್ಲ ವಸ್ತುಗಳಲ್ಲಿ ಸಿಕ್ಕ ವೀರ್ಯ ಹಾಗೂ ಕೂದಲಿನ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಇದರ ವರದಿಗಾಗಿ ಎಸ್ಐಟಿ ತಂಡ ಕಾಯುತ್ತಿದೆ. ಎಸ್ಐಟಿ ಈ ಹಿಂದೆ ಪ್ರಜ್ವಲ್ ರೇವಣ್ಣ ಅವರನ್ನು ಡಿಎನ್ ಪರೀಕ್ಷೆಗೆ ಒಳಪಡಿಸಿತ್ತು. ವರದಿ ಬಂದ ಕೂಡಲೇ ಪ್ರಜ್ವಲ್ ಡಿಎನ್​ಎಗೆ ಹೋಲಿಕೆ ಮಾಡಲಾಗುತ್ತೆ. ಎರಡೂ ಹೋಲಿಕೆಯಾದರೆ ಪ್ರಜ್ವಲ್ ರೇವಣ್ಣ ಅವರಿಗೆ ದೊಡ್ಡ ಸಂಕಷ್ಟ ಎದುರಾಗಲಿಗೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:05 am, Wed, 11 September 24

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?