ಪ್ರಜ್ವಲ್​ ಅತ್ಯಾಚಾರ ಎಸಗಿರುವುದು ನಿಜ, ವಿಡಿಯೋಗಳೆಲ್ಲವೂ ಅಸಲಿ: ಎಸ್​ಐಟಿ

ಹೊಳೆನರಸೀಪುರ ಪೊಲೀಸ್​ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ನಡೆಸಿದ ಎಸ್​ಐಟಿ ಶುಕ್ರವಾರ ದೋಷಾರೋಪಪಟ್ಟಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿತು. ಈ ದೋಷಾರೋಪಪಟ್ಟಿಯಲ್ಲಿ ಹಲವು ವಿಚಾರ ಬಹಿರಂಗಗೊಂಡಿವೆ.

ಪ್ರಜ್ವಲ್​ ಅತ್ಯಾಚಾರ ಎಸಗಿರುವುದು ನಿಜ, ವಿಡಿಯೋಗಳೆಲ್ಲವೂ ಅಸಲಿ: ಎಸ್​ಐಟಿ
ಮಾಜಿ ಸಂಸದ ಪ್ರಜ್ವಲ್​ ರೇವಣ್ಣ
Follow us
| Updated By: ವಿವೇಕ ಬಿರಾದಾರ

Updated on:Aug 24, 2024 | 8:53 AM

ಬೆಂಗಳೂರು, ಆಗಸ್ಟ್​ 23: ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಲೈಂಗಿಕ ಕಿರುಕುಳ ನೀಡಿರುವುದು ಮತ್ತು ಅವರ ಪುತ್ರ, ಮಾಜಿ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna) ಅತ್ಯಾಚಾರವೆಸಗಿರುವುದು ದೃಢಪಟ್ಟಿದೆ ಎಂದು ವಿಶೇಷ ತನಿಖಾ ಸಂಸ್ಥೆ (SIT) ನ್ಯಾಯಲಯಕ್ಕೆ ಸಲ್ಲಿಸಿದ ಚಾರ್ಜ್​ಶೀಟ್​ನಲ್ಲಿ ಉಲ್ಲೇಖವಾಗಿದೆ. ಹೊಳೆನರಸೀಪುರ ಠಾಣೆಯಲ್ಲಿ ಹೆಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಈ ಎರಡೂ ಪ್ರಕರಣದ ತನಿಖೆ ನಡೆಸಿದ ವಿಶೇಷ ತನಿಖಾ ಸಂಸ್ಥೆ (SIT) ಶುಕ್ರವಾರ 2144 ಪುಟಗಳ ದೋಷಾರೋಪಪಟ್ಟಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದೆ.

2019 ರಿಂದ 2022ರವರೆಗೆ ಸಂತ್ರಸ್ತೆ ಮನೆ ಕೆಲಸಕ್ಕೆ ನಿಯೋಜನೆಯಾಗಿದ್ದರು. ಈ ವೇಳೆ ಹೆಚ್​ಡಿ ರೇವಣ್ಣ ಅವರು ಪತ್ನಿ ಭವಾನಿ ರೇವಣ್ಣ ಮನೆಯಲ್ಲಿ ಇಲ್ಲದ ಸಮಯದಲ್ಲಿ ಹಣ್ಣು ಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು ಎಂದು ದೋಷಾರೋಪಟ್ಟಿಯಲ್ಲಿ ಉಲ್ಲೇಖವಾಗಿದೆ.

ಪ್ರಜ್ವಲ್​ ರೇವಣ್ಣ ಹೊಳೆ ನರಸೀಪುರದ ಮನೆಯಲ್ಲಿ ಮನೆಗೆಲಸದ ಮಹಿಳೆಯನ್ನು ಲೈಂಗಿಕವಾಗಿ ಶೋಷಿಸಿದ್ದಾರೆ. ಆಗಾಗ ಸಂತ್ರಸ್ತೆಗೆ ಪೋನ್​ ಕರೆ ಮಾಡಿ ಲೈಂಗಿಕ ಕಿರುಕುಳ ನೀಡುತ್ತಿದ್ದರು. ಅಲ್ಲದೆ, ಬೆಂಗಳೂರಿನ ಬಸವನಗುಡಿ ಮನೆಯಲ್ಲಿ ಪ್ರಜ್ವಲ್​ ರೇವಣ್ಣ, ಸಂತ್ರಸ್ತೆ ಮೇಲೆ ಅತ್ಯಾಚಾರ ಎಸಗಿದ್ದರು. ಅತ್ಯಾಚಾರ ಮಾಡುತ್ತಲೇ ತಮ್ಮ ಮೊಬೈಲ್​ನಿಂದ ರೆಕಾರ್ಡ್ ಮಾಡಿಕೊಂಡಿದ್ದರು.

ಇದನ್ನೂ ಓದಿ: ಕಿಡ್ನ್ಯಾಪ್​ ಕೇಸ್​: ರೇವಣ್ಣ, ಭವಾನಿ ಸೇರಿ 9 ಆರೋಪಿಗಳಿಗೆ ಸಮನ್ಸ್, ಖುದ್ದು ಹಾಜರಿಗೆ ಸೂಚನೆ

ಈ ವಿಚಾರವನ್ನು ಯಾರಿಗಾದರು ಹೇಳಿದರೆ ನಿನ್ನ (ಸಂತ್ರಸ್ಥೆ) ಪತಿಯನ್ನು ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದರು. ಮತ್ತೆ ನಿನ್ನ ಮಗಳಿಗೂ ಇದೇ ಗತಿ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದರು ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಈ ಎಲ್ಲ ಮಾಹಿತಿ ಬಹಿರಂಗಗೊಳ್ಳುತ್ತಿದ್ದಂತೆ ಕಾನೂನು ಕ್ರಮದಿಂದ ತಪ್ಪಿಸಿಕೊಳ್ಳಲು ಮತ್ತು ಸಾಕ್ಷ್ಯಗಳನ್ನು ನಾಶ ಮಾಡುವ ಸಲುವಾಗಿಯೇ ಪ್ರಜ್ವಲ್​ ರೇವಣ್ಣ ವಿದೇಶಕ್ಕೆ ತೆರಳಿರುವುದು ತನಿಖೆಯಲ್ಲಿ ದೃಢಪಟ್ಟಿದೆ. ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಪ್ರಜ್ವಲ್ ಕಾರಣ ಎಂದು ದೋಷಾರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:45 am, Sat, 24 August 24